ಎಫ್‌ಐಆರ್‌, ಕಸ್ಟಡಿ, ಶೋಕಾಸ್‌ ನೋಟಿಸ್‌ ಸುಳಿಯಲ್ಲಿ ಶಾಸಕ ಮುನಿರತ್ನ

ಗುತ್ತಿಗೆದಾರನಿಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದ ಮೇರೆಗೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್‌ ದಾಖಲಾಗಿದೆ. ಇದರ ಬೆನ್ನಲ್ಲೇ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ಬಿಜೆಪಿ ಮುನಿರತ್ನ ವಿರುದ್ಧ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ. ಈ ಮೂರು ಸುಳಿಯಲ್ಲಿ ಬಿಜೆಪಿ ಶಾಸಕ ಸಿಲುಕಿಕೊಂಡಿದ್ದಾರೆ.

ಗುತ್ತಿಗೆದಾರ ಚಲುವರಾಜು ಎಂಬುವವರಿಗೆ ಶಾಸಕ ಮುನಿರತ್ನ ಜೀವ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಕೂಡ ಮಾಡಿದ್ದಾರೆ ಎನ್ನಲಾದ ಆಡಿಯೋ ಎಲ್ಲೆಡೆ ಹರಿದಾಡಿತ್ತು. ಇದರ ಬೆನ್ನಲ್ಲೇ ಗುತ್ತಿಗೆದಾರ ಚಲುವರಾಜು, ಮುನಿರತ್ನ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

Karnataka BJP Issues Show Cause Notice Against MLA Munirathna

ಮತ್ತೊಂದೆಡೆ ಜಾತಿ ನಿಂದನೆ ಆರೋಪವು ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ಜಗಳಕ್ಕೂ ಕಾರಣವಾಗಿದೆ. ಇನ್ನು ಮುನಿರತ್ನ ಅವರು ಒಕ್ಕಲಿಗರು ಹಾಗೂ ದಲಿತ ಸಮುದಾಯಗಳ ಬಗ್ಗೆ ಅವಾಚ್ಯವಾಗಿ ಮಾತನಾಡಿದ್ದಾರೆ ಎಂಬ ಆರೋಪವೂ ಇದ್ದು, ರಾಜ್ಯಾದ್ಯಂತ ಇದಕ್ಕೆ ಖಂಡನೆ ವ್ಯಕ್ತವಾಗುತ್ತಿದೆ. ಹಾಗಾಗಿ ಬಿಜೆಪಿಯು ಮುನಿರತ್ನ ಅವರಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ. ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿಯಾಗಿದೆ.

ನೋಟಿಸ್‌ನಲ್ಲೇನಿದೆ?: ಮಾಧ್ಯಮದಲ್ಲಿ ನೀವು (ಮುನಿರತ್ನ) ಅವಹೇಳನಕಾರಿಯಾಗಿ ಮಾತನಾಡಿರುವುದಾಗಿ ಸುದ್ದಿ ಪ್ರಸಾರವಾಗುತ್ತಿದೆ. ಈ ವಿಚಾರ ಕುರಿತಂತೆ ತಮ್ಮ ಮೇಲೆ ಎಫ್​ಐಆರ್​​ ಕೂಡ ದಾಖಲಾಗಿದೆ. ಈ ಬೆಳವಣಿಗೆಯಿಂದಾಗಿ ಪಕ್ಷದ ಶಿಸ್ತಿಗೆ ಧಕ್ಕೆಯಾಗಿದೆ. ಹಾಗಾಗಿ ಈ ಘಟನೆಗೆ ಸಂಬಂಧಿಸಿದಂತೆ ಮುಂದಿನ ಐದು ದಿನಗಳಲ್ಲಿ ಬಿಜೆಪಿ ಶಿಸ್ತು ಸಮಿತಿಯ ಎದುರು ಸ್ಪಷ್ಟೀಕರಣ ನೀಡಬೇಕು ಎಂದು ನೋಟಿಸ್‌ನಲ್ಲಿ ತಿಳಿಸಿದೆ.

Karnataka BJP Issues Show Cause Notice Against MLA Munirathna

ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಮೇರೆಗೆ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಗ್ರಾಮದ ಬಳಿ ಮುನಿರತ್ನ ಅವರನ್ನು ಪೊಲೀಸರು ಲಾಕ್‌ ಮಾಡಿದ್ದಾರೆ ಎನ್ನಲಾಗಿದೆ.

ಕೋಲಾರದಿಂದ ಆಂಧ್ರದ ಚಿತ್ತೂರು ಕಡೆಗೆ ಹೋಗಲು ಶಾಸಕ ಮುನಿರತ್ನ ಮುಂದಾಗಿದ್ದರು. ಮುನಿರತ್ನ ಅವರ ಮೊಬೈಲ್‌ ಲೊಕೇಶನ್‌ ಟ್ರ್ಯಾಕ್‌ ಮಾಡಿ ಅವರಿದ್ದ ಸ್ಥಳವನ್ನು ಪೊಲೀಸರು ಪತ್ತೆ ಹಚ್ಚಿದ್ದಾರಂತೆ. ಇಂದು ಬೆಳಿಗ್ಗೆಯಿಂದಲೂ ಶಾಸಕ ಮುನಿರತ್ನ ನಾಪತ್ತೆಯಾಗಿದ್ದರು ಎಂದು ಹೇಳಲಾಗಿತ್ತು. ಆದರೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮುನಿರತ್ನ ನಾನೆಲ್ಲೂ ನಾಪತ್ತೆಯಾಗಿಲ್ಲ ಎಂದು ಹೇಳಿದ್ದರು.

Karnataka BJP Issues Show Cause Notice Against MLA Munirathna

ಮುನಿರತ್ನ ಅವರ ಬೆನ್ನು ಹತ್ತಿದ್ದ ಪೊಲೀಸರು, ಅವರ ಚಲನವಲನಗಳ ಬಗ್ಗೆ ನಿಗಾ ಇಟ್ಟಿದ್ದರು. ಹಾಗಾಗಿ ಮುನಿರತ್ನ ಕೋಲಾರದಲ್ಲಿ ಇರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಕೂಡಲ್ಲೇ ಅಲ್ಲಿನ ಪೊಲೀಸರ ನೆರವಿನಿಂದ ಮುನಿರತ್ನ ಅವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಮುನಿರತ್ನ ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರಲಾಗಿದೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ.

ಏನಿದು ಪ್ರಕರಣ?: ಬಿಜೆಪಿ ಶಾಸಕ ಮುನಿರತ್ನ ಅವರು ಗುತ್ತಿಗೆದಾರ ಚಲುವರಾಜು ಎಂಬುವರಿಗೆ ಅವಾಚ್ಯವಾಗಿ ನಿಂದಿಸಿ, ಜಾತಿ ನಿಂದನೆ ಮಾಡಿದ್ದಾರೆ ಎನ್ನಲಾದ ಆಡಿಯೋ ಸದ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಇನ್ನು ಈ ಸಂಬಂಧ ಶಾಸಕ ಮುನಿರತ್ನ ಅವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಕೂಡ ದಾಖಲಾಗಿದೆ. ಈ ಬಗ್ಗೆ ಮೊದಲ ಬಾರಿಗೆ ಮುನಿರತ್ನ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ʼಆ ಆಡಿಯೋ ನನ್ನದೇ ಎಂದು ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆʼ ಎಂದು ಮುನಿರತ್ನ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+