ಜು. 4ಕ್ಕೆ ಕಾರ್ಯಕರ್ತರನ್ನು ಉದ್ದೇಶಿಸಿ ಬಿ. ಎಲ್. ಸಂತೋಷ್ ಭಾಷಣ
ಬೆಂಗಳೂರು, ಜೂನ್ 30 : ಕರ್ನಾಟಕದ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಭಾಷಣ ಮಾಡಲಿದ್ದಾರೆ. ಕರ್ನಾಟಕ ಜನಸಂವಾದ ಸಮಾರೋಪ ಸಮಾರಂಭ ನಡೆಯಲಿದೆ.
Recommended Video
ಜುಲೈ 4ರ ಶನಿವಾರ ಸಂಜೆ 5ಗಂಟೆಗೆ ಕರ್ನಾಟಕ ಜನಸಂವಾದದ ಸಮಾರೋಪ ಸಮಾರಂಭ ನಡೆಯಲಿದೆ. ಬಿ. ಎಲ್. ಸಂತೋಷ್ ವಿಡಿಯೋ ಕಾನ್ಪರೆನ್ಸ್ ಮೂಲಕ ಸಮಾರಂಭದ ಪ್ರಮುಖ ಭಾಷಣ ಮಾಡಲಿದ್ದಾರೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಸಮಾರಂಭ ಉದ್ಘಾಟಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಬಿಜೆಪಿ ಜನ ಸಂವಾದ ಸಮಾವೇಶವನ್ನು ಆಯೋಜನೆ ಮಾಡಿತ್ತು. ಮೋದಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಲಾಕ್ ಡೌನ್ ಪರಿಣಾಮ ಸಮಾವೇಶಗಳನ್ನು ಆಯೋಜನೆ ಮಾಡುವಂತಿಲ್ಲ. ಆದ್ದರಿಂದ, ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾವೇಶ ನಡೆಸಲಾಗಿತ್ತು. ಬೇರೆ ಬೇರೆ ರಾಜ್ಯಗಳಲ್ಲಿ ವಿವಿಧ ಕೇಂದ್ರ ಸಚಿವರು ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು.
ಕರ್ನಾಟಕ ಬಿಜೆಪಿಯ ಫೇಸ್ ಬುಕ್, ಟ್ವಿಟರ್, ಯೂ ಟ್ಯೂಬ್ ಚಾನೆಲ್‌ಗಳಲ್ಲಿ ಈ ಸಮಾರಂಭ ಪ್ರಸಾರವಾಗಲಿದೆ.












Click it and Unblock the Notifications