ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನಿಂದ ಲಾಭ ಪಡೆದುಕೊಂಡುವರು..! ಇಲ್ಲಿದೆ ಪಟ್ಟಿ

ಬೆಂಗಳೂರು, ಅಕ್ಟೋಬರ್‌ 14: ಕಾಂಗ್ರೆಸ್ ಮಾಜಿ ಕಾರ್ಪೋರೇಟರ್‌ ಅಶ್ವಥಮ್ಮ ಮತ್ತು ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಐಟಿ ದಾಳಿ ನಡೆದು ಬರೋಬ್ಬರಿ 42 ಕೋಟಿ ಹಣ ಪತ್ತೆಯಾಗಿದ್ದು, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಎಟಿಎಂ ಸರ್ಕಾರದಿಂದ ಲಾಭ ಪಡೆದುಕೊಂಡುವರು ಇವರು ಎಂದು ರಾಜ್ಯ ಬಿಜೆಪಿ ಪಟ್ಟಿ ಬಿಡುಗಡೆ ಮಾಡುವ ಮೂಲಕ ಕಿಡಿಕಾರಿದೆ.

ಹೌದು, ಮಾಜಿ ಕಾರ್ಪೋರೇಟರ್‌ ಅವರ ಮನೆಯಲ್ಲಿ ಬರೋಬ್ಬರಿ 42 ಕೋಟಿ ಹಣ ಪತ್ತೆಯಾಗಿದ್ದು, ಈಗಾಗಲೇ ಪಂಚರಾಜ್ಯಗಳ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಚುನಾವಣೆಗಾಗಿಯೇ ಬೆಂಗಳೂರಿನಿಂದ ಹಣ ಹೋಗುತ್ತಿದೆ ಎಂದು ರಾಜ್ಯ ಬಿಜೆಪಿ ನಾಯಕರು ಸರಣಿ ಆರೋಪವನ್ನ ನಡೆಸಿದ್ದಾರೆ. ಇನ್ನೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಎಟಿಎಂ ಸರ್ಕಾರದಿಂದ ಲಾಭ ಪಡೆದುಕೊಂಡವರು, ಕಾಂಗ್ರೆಸ್‌ ನಾಯಕಿ ಸೋನಿಯಾ ಮೇಡಂ, ತೆಲಂಗಾಣ ಕಾಂಗ್ರೆಸ್‌, ಮಿಜೋರಾಂ ಕಾಂಗ್ರೆಸ್, ಛತ್ತಿಸ್‌ಗಢ‌ ಕಾಂಗ್ರೆಸ್, ರಾಜಸ್ಥಾನ‌ ಕಾಂಗ್ರೆಸ್ ಹಾಗೂ ಮಧ್ಯಪ್ರದೇಶ‌ ಕಾಂಗ್ರೆಸ್ ಎಂದು ಆರೋಪಿಸಿದೆ.

Karnataka Bjp Lashed Out Against The Government

ಇನ್ನೂ ಕನ್ನಡಿಗರ ಹಣವನ್ನು ಬೇಕಾಬಿಟ್ಟಿ ಲೂಟಿ ಮಾಡಿರುವ ನಾಡದ್ರೋಹಿ ಕರ್ನಾಟಕ ಕಾಂಗ್ರೆಸ್, ಹೊರ ರಾಜ್ಯಗಳ ಚುನಾವಣೆಗೆ ಫಂಡಿಂಗ್‌ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಕರ್ನಾಟಕದ ಜನತೆಯ ಶ್ರಮದ ತೆರಿಗೆ ಹಣವನ್ನು ತೆಲಂಗಾಣ ಕಾಂಗ್ರೆಸ್ ಚುನಾವಣೆಗೆ ಹಂಚುತ್ತಿರುವ ನಾಡದ್ರೋಹಿಗಳು. ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದಾಗಿದೆ. ತೆಲಂಗಾಣ ರಾಜ್ಯದ ಚುನಾವಣೆಗಾಗಿ ಕಾಂಗ್ರೆಸ್‌ ಸರ್ಕಾರ ಸಂಗ್ರಹಿಸಿರುವ ಅಕ್ರಮ ಹಣ ಇದಾಗಿದೆ ಎಂದು ರಾಜ್ಯ ಬಿಜೆಪಿ ಹೇಳಿದೆ.

ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು ಗೆಲ್ಲಿಸಲು ಗುತ್ತಿಗೆದಾರರ ಮೂಲಕ ಕಲೆಕ್ಷನ್‌ ಮಾಡಿಸಿ ಕರ್ನಾಟಕವನ್ನು ಲೂಟಿ ಮಾಡುತ್ತಿದೆ ನಾಡದ್ರೋಹಿ ಸಿದ್ದರಾಮಯ್ಯ ಅವರ ಸರ್ಕಾರ..!
ಇಂದು ಕರ್ನಾಟಕ ಕಾಂಗ್ರೆಸ್ ಕೃಪಾಪೋಷಿತ ಗುತ್ತಿಗೆದಾರರ ಮನೆ ಮೇಲೆ ನಡೆದ ಐಟಿ ದಾಳಿ ವೇಳೆ ಸಿಕ್ಕ ಕೋಟಿ ಕೋಟಿ ಹಣ ತೃಣವಷ್ಟೇ. ಎಟಿಎಂ ಸರ್ಕಾರ ಗುತ್ತಿಗೆದಾರರ ಮೂಲಕ ಕಲೆಕ್ಷನ್‌ ಮಾಡಿಸಿ ಪಂಚ ರಾಜ್ಯಗಳ ಚುನಾವಣೆಗೆ ಫಂಡಿಂಗ್ ಮಾಡಲು ಹೋಗಿ ಸಿಕ್ಕಿ ಬಿದ್ದಿದೆ. ಇನ್ನು ಕಾಂಗ್ರೆಸ್ ಕೃಪಾಕಟಾಕ್ಷದಲ್ಲಿರುವ ಕೋಟಿಯ ಕುಳಗಳು ಶೀಘ್ರದಲ್ಲೇ ಹೊರ ಬರಲಿರುವುದು ನಿಶ್ಚಿತ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.

Karnataka Bjp Lashed Out Against The Government

ಈ ಕುರಿತು ಮಾಜಿ ಸಚಿವ ಕೋಟಾ ಶ್ರೀನಿವಾಸ್‌ ಪೂಜಾರಿ ಮಾತನಾಡಿ, ಇಂದು ಐಟಿ ದಾಳಿಯ ಮೂಲಕ ಸಿಕ್ಕಿರುವ ಅಕ್ರಮ ಹಣದ ಮೂಲ ಮತ್ತು ಪಂಚರಾಜ್ಯ ಚುನಾವಣೆಗೂ ಈ ಅಕ್ರಮ ಹಣಕ್ಕೂ ಇರುವ ಸಂಬಂಧವನ್ನು ಸರ್ಕಾರ ಸ್ಪಷ್ಟಪಡಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಇನ್ನೂ ಈ ವಿಚಾರವಾಗಿ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಮಾತನಾಡಿ, ಚುನಾವಣಾ ಪೂರ್ವದಲ್ಲಿ ನಮ್ಮ ಕೇಂದ್ರ ನಾಯಕರು, ರಾಜ್ಯದಲ್ಲಿ ಕಾಂಗ್ರೆಸ್‌ ಗೆದ್ದರೆ ರಾಜ್ಯವನ್ನು ಎಟಿಎಂ ಆಗಿ ಮಾಡಲಿದೆ ಎಂದು ಆರೋಪಿಸಿದ್ದರು. ಇಂದು ಐಟಿ ದಾಳಿಯಲ್ಲಿ ಸಿಕ್ಕಿರುವ ಅಕ್ರಮ ಹಣ ಇದನ್ನು ಪುಷ್ಠೀಕರಿಸುತ್ತಿದೆ. ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನತೆಯ ತೆರಿಗೆ ಹಣವನ್ನು ದೋಚುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+