ಮಜಾ ಮಾಡಲು ಕಾಂಗ್ರೆಸ್ ಶಾಸಕರು ಸಿಂಗಾಪುರ, ಮಲೇಷ್ಯಾ ಹೋಗುವ ಸಿದ್ಧತೆಯಲ್ಲಿದ್ದಾರೆ
ಬೆಂಗಳೂರು, ಅಕ್ಟೋಬರ್ 30: ರಾಜ್ಯವನ್ನು ಸಮಸ್ಯೆಗಳ ಸರಮಾಲೆಯಲ್ಲಿ ಸಿಲುಕಿಸಿ ಕಾಂಗ್ರೆಸ್ ಶಾಸಕರು ಮಜಾ ಮಾಡಲು ಸಿಂಗಾಪುರ, ಮಲೇಷ್ಯಾ, ದುಬೈಗೆ ಪ್ರವಾಸ ಹೋಗುವ ಸಿದ್ಧತೆಯಲ್ಲಿದ್ದಾರೆ ಎಂದು ಬಿಜೆಪಿ ಹೇಳಿದೆ.
ರಾಜ್ಯವನ್ನು ಸಮಸ್ಯೆಗಳ ಸರಮಾಲೆಯಲ್ಲಿ ಸಿಲುಕಿಸಿ @INCKarnataka ಶಾಸಕರು ಮಜಾ ಮಾಡಲು ಸಿಂಗಾಪುರ, ಮಲೇಷ್ಯಾ, ದುಬೈಗೆ ಪ್ರವಾಸ ಹೋಗುವ ಸಿದ್ಧತೆಯಲ್ಲಿದ್ದಾರೆ.
— BJP Karnataka (@BJP4Karnataka) October 30, 2023
ಶಾಸಕರು ವಿಮಾನ ಹತ್ತುವ ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ.
▪️ ಬರ ನಿರ್ವಹಣೆಗಾಗಿ 500 ಕೋಟಿ ಮಾತ್ರವೇ ಉಳಿದಿರುವುದು ನಿಜವೇ?
▪️ ಮೇವು ಕೊರತೆ ನಿವಾರಣೆಗೆ ಏನು ಕ್ರಮ… pic.twitter.com/2FtHZsdkPI
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಬರ ಪರಿಸ್ಥಿತಿ ಅಧ್ಯಯನಕ್ಕೆ ಬಿಜೆಪಿಯ 17 ತಂಡಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡಲಿವೆ ಎಂದು ಹೇಳಿದ್ದು, ಶಾಸಕರು ವಿಮಾನ ಹತ್ತುವ ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಎಂದು ಬಿಜೆಪಿ ಪ್ರಶ್ನೆಗಳನ್ನ ಮುಂದಿಟ್ಟಿದೆ.

- ಬರ ನಿರ್ವಹಣೆಗಾಗಿ 500 ಕೋಟಿ ಮಾತ್ರವೇ ಉಳಿದಿರುವುದು ನಿಜವೇ?
- ಮೇವು ಕೊರತೆ ನಿವಾರಣೆಗೆ ಏನು ಕ್ರಮ ಕೈಗೊಳ್ಳಲಾಗಿದೆ?
- ಕುಡಿಯುವ ನೀರಿನ ಸಮಸ್ಯೆಯ ಎದುರಾಗದಿರಲು ಕೈಗೊಂಡ ಕ್ರಮಗಳೇನು?
- ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯದ ಸ್ಥಿತಿಗತಿ ಅರ್ಥಮಾಡಿಸಲು ಇದುವರೆಗೆ ಏನು ಮಾಡಲಾಗಿದೆ?
- ಅಧಿಕಾರಕ್ಕೆ ಬಂದು ಐದು ತಿಂಗಳಾದರೂ ಶಾಸಕರು ತಮ್ಮ ಕ್ಷೇತ್ರಗಳಿಗೆ ಯಾವುದೇ ಅನುದಾನ ಕೊಡಿಸಿಲ್ಲವೇಕೆ?
ಇವುಗಳಿಗೆ ಉತ್ತರಿಸದೆ ವಿದೇಶಕ್ಕೆ ಹಾರುತ್ತಿರುವ ಕಾಂಗ್ರೆಸ್ ಶಾಸಕರ ಗುರಿ ಭ್ರಷ್ಟಚಾರ ಮಾಡಿ ತಮ್ಮ ಮಂಚದ ಅಡಿಯಲ್ಲಿ ಹಣ ಪೇರಿಸುವುದಷ್ಟೇ ಎಂದು ಬಿಜೆಪಿ ಹೇಳಿದೆ. ಸಿದ್ದರಾಮಯ್ಯರವರು ತಮ್ಮ ವೈಫಲ್ಯಗಳನ್ನು ಮರೆಮಾಚಲು ಜನರ ಗಮನ ಬೇರೆಡೆ ಸೆಳೆಯುವ ಸರ್ಕಸ್ಸಿನಲ್ಲಿ ತೊಡಗಿದ್ದಾರೆ. ಜನರ ಗಮನವನ್ನು ಉದ್ದೇಶಪೂರ್ವಕವಾಗಿ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ.
ಸಿದ್ದರಾಮಯ್ಯರವರು ಕೇಂದ್ರ ಸರ್ಕಾರದ ಮೇಲೆ ನಿರಂತರ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಹಿಂದಿನ ಅಸಲಿಯತ್ತೇ ಬೇರೆ. ಕರ್ನಾಟಕದಲ್ಲಿ ಚುನಾವಣೆಯನ್ನು ಗೆಲ್ಲಬೇಕೆಂಬ ಏಕೈಕ ಉದ್ದೇಶದಿಂದ ಬೇಕಾಬಿಟ್ಟಿ ಸುಳ್ಳುಗಳನ್ನು ಹೇಳಿ, ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೇನೋ ಬಂದರು, ಆದರೆ ಅವರು ನೀಡಿದ ಭರವಸೆಗಳನ್ನು ಈಡೇರಿಸಲು ಸಂಪೂರ್ಣ…
— BJP Karnataka (@BJP4Karnataka) October 30, 2023
ಕಳೆದ ಒಂಭತ್ತು ವರ್ಷಗಳಲ್ಲಿ ದೇಶದ ಅಭಿವೃದ್ಧಿಯ ನಕಾಶೆಯನ್ನೇ ಬದಲಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಬಲಿಷ್ಠ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕರ್ನಾಟಕವನ್ನು ಕಡೆಗಣಿಸಿದೆ ಎಂಬ ಆರೋಪವೇ ಹಾಸ್ಯಾಸ್ಪದ. ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿರುವ ಅಂಶಗಳಲ್ಲಿ ಸುಳ್ಳುಗಳೇ ತುಂಬಿವೆ ಹೊರತು ಗುಲಗಂಜಿಯಷ್ಟೂ ಸತ್ಯಾಂಶವಿಲ್ಲ ಎಂದು ಬಿಜೆಪಿ ಕುಟುಕಿದೆ.

15ನೇ ಹಣಕಾಸು ಮಧ್ಯಂತರ ವರದಿಯಲ್ಲಿ ಕರ್ನಾಟಕಕ್ಕೆ ₹5495 ಕೋಟಿ ವಿಶೇಷ ಅನುದಾನವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿರಸ್ಕರಿಸಿದ್ದಾರೆಂದು ಸಿದ್ದರಾಮಯ್ಯರವರು ಹೇಳಿರುವುದೇ ಅತ್ಯಂತ ದೊಡ್ಡ ಸುಳ್ಳು, ಅಸಲಿಗೆ 15ನೇ ಹಣಕಾಸು ವರದಿಯಲ್ಲಿ ಈ ರೀತಿಯ ಅಂಶಗಳೇ ಪ್ರಸ್ತಾಪವಾಗಿಲ್ಲ. ತಮ್ಮ ಆಸ್ಥಾನ ಕಲಾವಿದರಿಂದ, ವಂಧಿಮಾಗದರಿಂದ, ಹೊಗಳು ಭಟ್ಟರಿಂದ ತಾವೊಬ್ಬ ಶ್ರೇಷ್ಠ ಆರ್ಥಿಕ ತಜ್ಞ ಎಂದು ಕರೆಸಿಕೊಳ್ಳುವ, 13 ಬಜೆಟ್ ಮಂಡಿಸಿದ್ದೇನೆಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುವ ಸಿದ್ದರಾಮಯ್ಯರವರಿಗೆ ಸಾರ್ವಜನಿಕ ಹಣಕಾಸಿನ ಸ್ಥಿತಿಗತಿಯ ಬಗ್ಗೆ ಕನಿಷ್ಟ ಜ್ಞಾನವಿಲ್ಲದಿರುವುದು ಅತ್ಯಂತ ಬೇಸರದ ಸಂಗತಿ!!
ಕಾಂಗ್ರೆಸ್ ಆಡಳಿತ ಹಿಡಿದ ರಾಜ್ಯಗಳಲ್ಲೆಲ್ಲಾ ಅಲ್ಲಿನ ಅರ್ಥಿಕತೆ ಅಧೋಗತಿಗಿಳಿದಿದೆ. ಈ ಬಗ್ಗೆ ಅಂಕಿ-ಅಂಶಗಳೇ ಸತ್ಯ ಹೇಳುತ್ತವೆ. ಆರ್ಥಿಕ ತಿಳುವಳಿಕೆ ಇರುವ ಯಾರಿಗೇ ಆದರೂ ತಿಳಿಯುವ ಈ ಸತ್ಯ ಸಿದ್ದರಾಮಯ್ಯರವರ ಕಣ್ಣಿಗೇ ಬೀಳುತ್ತಿಲ್ಲ ಎಂಬುದೇ ಬೃಹನ್ನಾಟಕ. ಮುಖ್ಯಮಂತ್ರಿ ಸ್ಥಾನದ ಜವಾಬ್ದಾರಿ ಹೊತ್ತವರು ಈ ರೀತಿ ಬಹಿರಂಗವಾಗಿ ಸುಳ್ಳು ನುಡಿಯುವುದು ಎಷ್ಟರ ಮಟ್ಟಿಗೆ ಸರಿ..? ಎಂದು ಬಿಜೆಪಿ ಪ್ರಶ್ನಿಸಿದೆ.
ಸಿದ್ದರಾಮಯ್ಯರವರು ಕೇಂದ್ರ ಸರ್ಕಾರದ ಮೇಲೆ ನಿರಂತರ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಹಿಂದಿನ ಅಸಲಿಯತ್ತೇ ಬೇರೆ. ಕರ್ನಾಟಕದಲ್ಲಿ ಚುನಾವಣೆಯನ್ನು ಗೆಲ್ಲಬೇಕೆಂಬ ಏಕೈಕ ಉದ್ದೇಶದಿಂದ ಬೇಕಾಬಿಟ್ಟಿ ಸುಳ್ಳುಗಳನ್ನು ಹೇಳಿ, ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೇನೋ ಬಂದರು, ಆದರೆ ಅವರು ನೀಡಿದ ಭರವಸೆಗಳನ್ನು ಈಡೇರಿಸಲು ಸಂಪೂರ್ಣ ವಿಫಲರಾಗಿದ್ದಾರೆ.
ಹಾಗಾಗಿ ಕರ್ನಾಟಕದ ಇತಿಹಾಸದಲ್ಲಿ ಹಿಂದೆಂದೂ ಕಂಡು ಕೇಳರಿಯದಂಥ ಆಡಳಿತ ವಿರೋಧಿ ಅಲೆ ಸಿದ್ದರಾಮಯ್ಯರವರ ಸರ್ಕಾರದ ವಿರುದ್ಧ ಐದೇ ತಿಂಗಳಲ್ಲಿ ಎದ್ದಿದೆ. ಈ ಆಡಳಿತ ವಿರೋಧಿ ಅಲೆಯನ್ನು ಮರೆಮಾಚಲು ಅವರು ಹೂಡಿರುವ ಹಲವು ತಂತ್ರಗಳ ಪೈಕಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿರುವುದೂ ಒಂದು. ಕೈಲಾಗದವರು ಹುಲಿ ಉಗುರಿನಿಂದ ಮೈ ಪರಿಚಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
-
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ












Click it and Unblock the Notifications