ಮಹದಾಯಿ ವಿವಾದ : ಹುಬ್ಬಳ್ಳಿಯಲ್ಲಿ ಡಿ.21ರಂದು ಮಹತ್ವದ ಘೋಷಣೆ

ನವದೆಹಲಿ, ಡಿಸೆಂಬರ್ 20 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರ್ನಾಟಕ ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆ ನಡೆಸಿದರು. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಸಭೆ ಕುತೂಹಲಕ್ಕೆ ಕಾರಣವಾಗಿದೆ.

ದೆಹಲಿಯ ತಮ್ಮ ನಿವಾಸದಲ್ಲಿ ಬುಧವಾರ ಅಮಿತ್ ಶಾ ಕರ್ನಾಟಕದ ಬಿಜೆಪಿ ನಾಯಕರ ಸಭೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

Karnataka BJP leaders meeting with Amit Shah

ಸಭೆಯ ಬಳಿಕ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, 'ಮಹದಾಯಿ ನೀರು ಹಂಚಿಕೆ ವಿಚಾರವಾಗಿ ಚರ್ಚೆ ನಡೆಸಿದ್ದೇವೆ. ಈ ಕುರಿತು ಗೋವಾ ನಾಳೆ ಅಭಿಪ್ರಾಯ ಪ್ರಕಟಿಸುವ ಸಾಧ್ಯತೆ ಇದೆ' ಎಂದರು.

'ಗೋವಾ ಸರ್ಕಾರ ತನ್ನ ಅಭಿಪ್ರಾಯವನ್ನು ತಿಳಿಸಿದ ಬಳಿಕ, ಹುಬ್ಬಳ್ಳಿಯಲ್ಲಿ ನಡೆಯುವ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ನಿರ್ಧಾರವನ್ನು ಪ್ರಕಟಿಸಲಾಗುತ್ತದೆ' ಎಂದು ಯಡಿಯೂರಪ್ಪ ಹೇಳಿದರು.

ಕರ್ನಾಟಕ ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ಯಾತ್ರೆ 50 ದಿನಗಳನ್ನು ಪೂರೈಸಿದೆ. ಹುಬ್ಬಳ್ಳಿಯಲ್ಲಿ ಡಿ.21ರ ಗುರುವಾರ ಬೃಹತ್ ಸಮಾವೇಶ ನಡೆಯಲಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

bjp

ಗೋವಾ ಮತ್ತು ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ನಡೆದ ಈ ಸಭೆ ಕುತೂಹಲಕ್ಕೆ ಕಾರಣವಾಗಿತ್ತು. ರಾಜ್ಯದ ವಿಧಾನಸಭೆ ಚುನಾವಣೆ ಬಗ್ಗೆಯೂ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಕರ್ನಾಟಕ ಉಸ್ತುವಾರಿ ಮುರಳೀಧರರಾವ್, ಕರ್ನಾಟಕ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಮುಂತಾದವರು ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+