ಕರ್ನಾಟಕ ಬಿಜೆಪಿ ನಾಯಕರಿಂದ ಅಮಿತ್ ಶಾ ಭೇಟಿ
ಬೆಂಗಳೂರು, ಡಿಸೆಂಬರ್ 12 : ಕರ್ನಾಟಕದ ಬಿಜೆಪಿ ನಾಯಕರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಮಾಡಿದರು. 15 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ನಾಯಕರು ಹೈಕಮಾಂಡ್ ನಾಯಕರನ್ನು ಭೇಟಿಯಾದರು.
ಗುರುವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ರಾಜ್ಯ ನಾಯಕರ ನಿಯೋಗ ಸಂಸತ್ ಭವನದಲ್ಲಿ ಅಮಿತ್ ಶಾ ಭೇಟಿಯಾದರು. ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ರಾಜ್ಯದ ಜನತೆ ಹಾಗೂ ಕಾರ್ಯಕರ್ತರ ಪರವಾಗಿ ಸಿಹಿ ನೀಡಿದರು.
ಸಂಸದರಾದ ಬಿ. ವೈ. ರಾಘವೇಂದ್ರ, ಪ್ರತಾಪ್ ಸಿಂಹ, ಜಿ. ಎಂ. ಸಿದ್ದೇಶ್ವರ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಾಜ್ಯದ ರಾಜಕೀಯ ಬೆಳವಣಿಗೆ ಕುರಿತು ಈ ಸಮಯದಲ್ಲಿ ಚರ್ಚೆ ನಡೆಸಲಾಯಿತು.
15 ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸಿತ್ತು. ಇದರಿಂದಾಗಿ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತವನ್ನು ಪಡೆದಿತ್ತು. ಚುನಾವಣಾ ಫಲಿತಾಂಶದ ಬಗ್ಗೆ ಹೈಕಮಾಂಡ್ ನಾಯಕರು ಸಹ ಮೆಚ್ಚುಗೆ ಸೂಚಿಸಿದ್ದರು.

ಹೈಕಮಾಂಡ್ ನಾಯಕರ ಭೇಟಿ
15 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕದ ಬಿಜೆಪಿ ನಾಯಕರು ಅಮಿತ್ ಶಾ ಭೇಟಿ ಮಾಡಿ ಉಪ ಚುನಾವಣೆ ಫಲಿತಾಂಶದ ಬಗ್ಗೆ ವಿವರಣೆ ನೀಡಿದರು. ಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದಿತ್ತು. ಇದರಿಂದಾಗಿ ಸರ್ಕಾರಕ್ಕೆ ಸ್ಪಷ್ಟ ಬಹುಮತ ಸಿಕ್ಕಿತ್ತು.

ಅಮಿತ್ ಶಾ ಬ್ಯುಸಿಯಾಗಿದ್ದರು
15 ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಡಿಸೆಂಬರ್ 9ರಂದು ಪ್ರಕಟಗೊಂಡಿತ್ತು. ಆದರೆ, ಪೌರತ್ವ ತಿದ್ದುಪಡಿ ಮಸೂದೆ ಮಂಡನೆ ವಿಚಾರದಲ್ಲಿ ಗೃಹ ಸಚಿವರೂ ಆಗಿರುವ ಅಮಿತ್ ಶಾ ಬ್ಯುಸಿ ಇದ್ದರು. ಆದ್ದರಿಂದ, ಗುರುವಾರ ಕರ್ನಾಟಕದ ಬಿಜೆಪಿ ನಾಯಕರು ಅಮಿತ್ ಶಾ ಭೇಟಿ ಮಾಡಿದರು.

ಯಡಿಯೂರಪ್ಪ ಭೇಟಿ ಯಾವಾಗ?
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ದೆಹಲಿ ಪ್ರವಾಸ ಕೈಗೊಳ್ಳಬೇಕಿತ್ತು. ಆದರೆ, ಅಮಿತ್ ಶಾ ಬ್ಯುಸಿ ಇರುವ ಕಾರಣ ತಮ್ಮ ಪ್ರವಾಸವನ್ನು ಅವರು ಮುಂದೂಡಿದ್ದಾರೆ. ಮುಂದಿನ ವಾರ ಯಡಿಯೂರಪ್ಪ ದೆಹಲಿಗೆ ಭೇಟಿ ನೀಡಲಿದ್ದಾರೆ.

ಸಂಪುಟ ವಿಸ್ತರಣೆ ಯಾವಾಗ?
15 ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಸಂಪುಟ ವಿಸ್ತರಣೆ ಯಾವಾಗ? ಎಂಬ ಬಗ್ಗೆ ಪ್ರಶ್ನೆ ಎದ್ದಿದೆ. ಯಡಿಯೂರಪ್ಪ ಅವರು ದೆಹಲಿಗೆ ತೆರಳಿದಾಗ ಅಮಿತ್ ಶಾ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.












Click it and Unblock the Notifications