BREAKING: ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಸಿಎಂ ಘೋಷಣೆ

ಬೆಂಗಳೂರು, ಜು. 27: ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಇಂದು ಸಂಜೆ 7 ಗಂಟೆಗೆ ಕರೆಯಲಾಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಕಚೇರಿಯಿಂದ ಅಧಿಕೃತ ಮಾಹಿತಿ ಪ್ರಕಟವಾಗಿದ್ದು, ರೇಸ್‌ಕೋರ್ಸ್‌ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಸಭೆಯನ್ನು ಕರೆಯಲಾಗಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಹೈಕಮಾಂಡ್ ನೇಮಕ ಮಾಡಿರುವ ವೀಕ್ಷಕ ಧರ್ಮೆಂದ್ರ ಪ್ರಧಾನ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕೆಲ ಹೊತ್ತಿನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹಂಗಾಮಿ ಸಿಎಂ ಯಡಿಯೂರಪ್ಪ ಅವರ ಮೌನ ಬಿಜೆಪಿ ಹೈಕಮಾಂಡ್‌ಗೆ ಒಂದು ರೀತಿಯಲ್ಲಿ ಎಚ್ಚರಿಕೆ ಸಂದೇಶ ಎಂಬಂತೆ ವಿಶ್ಲೇಷಣೆ ಮಾಡಲಾಗುತ್ತಿದೆ. ಹೀಗಾಗಿ ಆದಷ್ಟು ಬೇಗ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಹೈಕಮಾಂಡ್ ನಿರ್ಧಾರ ಮಾಡಿದೆ ಎಂಬ ಮಾಹಿತಿ ಬಂದಿದೆ.

Karnataka BJP Legislative party meeting Today evening in Bengaluru

Recommended Video

      ಯಡಿಯೂರಪ್ಪನವರ ಪಾತ್ರವೇ ಇಲ್ಲ ಅಂದ್ಮೇಲೆ ಅವರ ಮಕ್ಕಳ ಪಾತ್ರ ಎಲ್ಲಿರುತ್ತೆ? | Oneindia Kannada

      ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಶಾಸಕರಿಗೆ ವೀಕ್ಷಕರು ತಿಳಿಸಲಿದ್ದಾರೆ. ಆ ಬಳಿಕ ನೂತನ ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಹಿರಿಯ ಶಾಸಕರು ಅನುಮೋದಿಸಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+