Karnataka BJP: ಇಂದು ಬಿಜೆಪಿಯ ಮಹತ್ವದ ಸಭೆ; ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷ!? ಇಲ್ಲಿದೆ ಮಾಹಿತಿ

ಬೆಂಗಳೂರು,ಜೂನ್08:‌ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ರಾಜ್ಯ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದೆ. ಇಂದು (ಶುಕ್ರವಾರ) ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಕರೆದಿದೆ.

ಹೌದು, ರಾಜ್ಯ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

karnataka bjp meeting on june 8th

ವಿಧಾನ ಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿಯಲ್ಲಿ ಕಳೆದ ಹಲವು ದಿನಗಳಿಂದಲೂ ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರ ಕಗ್ಗಂಟಾಗಿದ್ದು, ಪ್ರತಿ ಪಕ್ಷ ಸ್ಥಾನಕ್ಕಾಗಿ ಬಿಜೆಪಿ ಪಾಳಯಲ್ಲಿ ಪೈಪೋಟಿ ಏರ್ಪಟ್ಟಿದೆ. ಇನ್ನೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನೂ ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ವಿಚಾರವಾಗಿ ನೂತನ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ. ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಆಧರಿಸಿ ಪಕ್ಷದ ವರಿಷ್ಠರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

karnataka bjp meeting on june 8th

ಇತ್ತ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿ ಕೊನೆಗೊಂಡಿತ್ತು. ಆದರೆ, ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಕಾರಣದಿಂದ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆಯೂ ಬಿಜೆಪಿ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೂ ಹಲವು ಜನ ರೇಸ್‌ ನಲ್ಲಿದ್ದು, ನೂತನ ಬಿಜೆಪಪಿ ಸಾರಥಿ ಯಾರಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಒಟ್ನಲಿ ಇಂದು ಬಿಜೆಪಿ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದಲ್ಲಿ ಮೂರು ಸಭೆ ನಡೆಯಲಿದ್ದು, ಮೊದಲಿಗೆ ಬೆಳಗ್ಗೆ 10.30ಕ್ಕೆ ನೂತನ ಶಾಸಕರ ಸಭೆ ನಡೆಯಲಿದೆ. ಬಳಿಕ ಮಧ್ಯಾಹ್ನ ಪರಾಜಿತ ಅಭ್ಯರ್ಥಿಗಳ ಸಭೆ ನಡೆಯಲಿದೆ. ಈ ಎರಡು ಸಭೆಯಲ್ಲಿ ಅಭಿಪ್ರಾಯಗಳನ್ನ ಸಂಗ್ರಹಿಸಿ ನಂತರ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಮೊದಲಾದವರು ಇನ್ನೊಂದು ಸಭೆಯನ್ನ ನಡೆಸಿ ಅಂತಿಮ ತಿರ್ಮಾನದೊಂದಿಗೆ ಹೈಕಮಾಂಡ್‌ ಗೆ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷರು ಯಾರಾಗಬೇಕು ಎಂಬ ಬಗ್ಗೆ ಮಾಹಿತಿ ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+