ಕರ್ನಾಟಕ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ

Posted By:
Subscribe to Oneindia Kannada

ಬೆಂಗಳೂರು, ಜೂನ್ 11 : ಕರ್ನಾಟಕ ಬಿಜೆಪಿ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದೆ. ಶುಕ್ರವಾರ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ ಲೆಹರ್ ಸಿಂಗ್ ಅವರನ್ನು ಪಕ್ಷದ ಸಹ-ಖಜಾಂಚಿಯಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದರು. ಪಕ್ಷದ ಖಜಾಂಚಿಯಾಗಿ ಸುಬ್ಬಣ್ಣ, ಸಹ ಖಜಾಂಚಿಯಾಗಿ ಲೆಹರ್ ಸಿಂಗ್ ಅವರನ್ನು ನೇಮಿಸಲಾಗಿದೆ. [2018ರ ಚುನಾವಣೆಗೆ ಯಡಿಯೂರಪ್ಪ ತಂಡ ಸಿದ್ಧ]

yeddyurappa

ಬೆಂಗಳೂರು ನಗರದ ಅಧ್ಯಕ್ಷರಾಗಿ ಪಿ.ಎನ್.ಸದಾಶಿವ, ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾಗಿ ಎಸ್.ಮುನಿರಾಜು, ಶಿವಮೊಗ್ಗದ ಅಧ್ಯಕ್ಷರಾಗಿ ಎಸ್.ರುದ್ರೇಗೌಡ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿ ಡಿ.ಎನ್.ಜೀವರಾಜ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. [150 ಸ್ಥಾನ ಪಡೆಯಲು ಯಡಿಯೂರಪ್ಪ ತಂತ್ರವೇನು?]

ಮೇ 26ರಂದು ಯಡಿಯೂರಪ್ಪ ಅವರು ರಾಜ್ಯ ಪದಾಧಿಕಾರಿಗಳನ್ನು ಬದಲಾವಣೆ ಮಾಡಿದ್ದರು. ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬಿ.ಪಿ.ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ಶೋಭಾ ಕರಂದ್ಲಾಜೆ, ಸಿ.ಟಿ.ರವಿ ಅವರನ್ನು ನೇಮಕ ಮಾಡಲಾಗಿತ್ತು. ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿತ್ತು. [ಯಡಿಯೂರಪ್ಪ ಮುಂದಿರುವ 6 ಪ್ರಮುಖ ಸವಾಲುಗಳು]

ನೂತನ ಜಿಲ್ಲಾಧ್ಯಕ್ಷರ ಪಟ್ಟಿ

bjp


karnataka bjp

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
With an eye on the assembly polls on 2018 Karnataka state BJP on Saturday, June 11, 2016 appointed new presidents for all districts in the state.
Please Wait while comments are loading...