ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದೇ ಒಂದು ಅಂಶವಿಲ್ಲ: ಡಿ ಕೆ ಶಿವಕುಮಾರ್

ಬೆಂಗಳೂರು: ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಯಾವ ಅಂಶವೂ ಇಲ್ಲ. ಅವರದ್ದು ಕೇವಲ ರಾಜಕೀಯ ಮನಸ್ಥಿತಿ. ಅವರನ್ನು ಸರಿಪಡಿಸಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಿಡಿಕಾರಿದರು.

ವಂದೇ ಮಾತರಂ ವಿಚಾರವಾಗಿ ಬಿಜೆಪಿ ಹೋರಾಟಕ್ಕೆ ಕರೆ ನೀಡಿರುವ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಡಿ ಕೆ ಶಿವಕುಮಾರ್ ಅವರು ಮಾಡಿನಾಡಿ, ಎಲ್ಲದರಲ್ಲೂ ತಪ್ಪು ಕಂಡುಹಿಡಿಯುವ ಪ್ರವೃತ್ತಿ ಬಿಜೆಪಿ ನಾಯಕರದ್ದು. ಒಬ್ಬ ಪೊಲೀಸ್ ಅಧಿಕಾರಿ ಏನು ತಪ್ಪು ಮಾತನಾಡಿದ್ದಾರೆ? ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಎಚ್ಚರಿಕೆ ಮಾತುಗಳನ್ನು ಆಡಿದ್ದಾರೆ. ಅದಕ್ಕೆ ಬಿಜೆಪಿಯವರು ಮಹಾರಾಜರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.

Karnataka BJP Not a Single Concern for Karnataka s Welfare in BJP s Hearts Says Karnataka Chief Minister D K Shivakumar

ಪಂಚಾಯಿತಿ ಮಟ್ಟದ ವಿಚಾರಕ್ಕೆ ವಿರೋಧ ಪಕ್ಷದ ನಾಯಕರು ಹೋಗಿದ್ದು, ಅವರು ಈ ಮಟ್ಟಕ್ಕೆ ಇಳಿದಿದ್ದು ಯಾಕೆ ಎಂದು ನನಗೆ ಗೊತ್ತಿಲ್ಲ. ವಿರೋಧ ಪಕ್ಷದ ನಾಯಕ ಸ್ಥಾನ ಸಂವಿಧಾನಿಕ ಹುದ್ದೆ. ಅವರಿಂದ ಇನ್ನು ಉನ್ನತ ನಡೆ ನಿರೀಕ್ಷೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ರಾಜಕೀಯ ಮಾಡುವುದನ್ನು ಮಾಡಿ, ಹೋರಾಟ ಮಾಡಿ

ಪ್ರಹ್ಲಾದ್ ಜೋಶಿಯಿಂದ ಎಲ್ಲರೂ ಟ್ವೀಟ್ ಮಾಡಿದ್ದಾರೆ. ಸಮಾಜದಲ್ಲಿ ಕಾನೂನು ಪಾಲನೆ ಮಾಡಬೇಕಾಗಿರುವುದು ಯಾರು? ಬಿಜೆಪಿಯವರು ಜನರನ್ನ ಪ್ರಚೋದನೆ ಮಾಡುವ ಕೆಲಸ ಮಾಡುತ್ತಿದ್ದು, ಇನ್ನಾದರೂ ಇದನ್ನು ಬಿಡಲಿ. ಭಾರತವನ್ನು ಕರ್ನಾಟಕದ ಮೂಲಕ ಗೌರವ ಸಿಗುತ್ತಿದ್ದು, ಇಲ್ಲಿ ಅಹಿತಕರ ಘಟನೆ ನಡೆದರೆ ತೊಂದರೆ ಆಗುವುದು ಭಾರತಕ್ಕೆ. ಪ್ರಧಾನ ಮಂತ್ರಿಗಳು ದೇಶದ ಬಗ್ಗೆ ಕಾಣುತ್ತಿರುವ ಕನಸಿಗೆ ಇಲ್ಲಿನ ಬಿಜೆಪಿ ನಾಯಕರು ಧಕ್ಕೆ ತರುವಂತೆ ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯ ಮಾಡುವುದನ್ನು ಮಾಡಿ, ಹೋರಾಟ ಮಾಡಿ. ಆದರೆ ಅಶಾಂತಿ ಮೂಡಿಸಿ, ರಾಜ್ಯಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಬೇಡಿ ಎಂದು ಮನವಿ ಮಾಡುವೆ ಎಂದು ತಿಳಿಸಿದರು.

ಬರ ವಿಚಾರದಲ್ಲಿ ರಾಜಕೀಯ ಮಾಡಿದರೆ ಅರ್ಥವಿಲ್ಲ

ದಿನೇ ದಿನೆ ಮಳೆ ಕಡಿಮೆಯಾಗುತ್ತಿರುವ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಮಳೆ ಕ್ಷೀಣಿಸುತ್ತಿದೆ. ಶಾಸಕರು ಆತಂಕಪಡುವ ಅಗತ್ಯವಿಲ್ಲ. ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುವುದರಲ್ಲಿ ಅರ್ಥವಿಲ್ಲ. ಕೆಲವರು ರಾಜಕೀಯಕ್ಕೆ ಈ ಪರಿಸ್ಥಿತಿ ಬಳಸಿಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರ ಪರಿಶೀಲನೆಗೆ ಬಂದಾಗ ವರದಿ ತಪ್ಪಾಗಿರಬಾರದು. ಕೆಲವು ಭಾಗದಲ್ಲಿ ಅಧ್ಯಯನ ಆಗಿದ್ದು, ಉಳಿದ ಕಡೆ ವರದಿ ಸಿದ್ಧವಾಗುತ್ತಿದೆ.

ಒಂದು ವಾರ ಮಳೆ ಬೀಳುತ್ತದೆ ಎಂದು ಹವಾಮಾನ ಇಲಾಖೆ ಹೇಳಿತ್ತು, ಆದರೆ ಕೆಲ ಭಾಗದಲ್ಲಿ ಸ್ವಲ್ಪ ಮಳೆ ಆಗಿದ್ದು, ಹೇಳಿಕೊಳುವಂತೆ ಆಗಿಲ್ಲ. ವಿದ್ಯುತ್ ಸಮಸ್ಯೆ ಹೆಚ್ಚಾಗಿದೆ. ಜನರನ್ನು ಮಾನಸಿಕವಾಗಿ ಸಿದ್ಧಪಡಿಸಿ, ಕುಡಿಯುವ ನೀರು ಪೂರೈಕೆಗೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ. ರೈತರ ಜೊತೆ ಚರ್ಚೆ ಮಾಡಿ ಇನ್ನಷ್ಟು ಘೋಷಣೆ ಮಾಡಲಾಗುವುದು ಎಂದು ಹೇಳಿದರು.

ಸರ್ಕಾರದ ವತಿಯಿಂದ ಇಂಜಿನಿಯರ್‌ಗಳ ದಿನ ಆಚರಣೆ

ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸರ್ಕಾರ ವತಿಯಿಂದ ಇಂಜಿನಿಯರ್ ದಿನ ಆಚರಿಸುವ ಪ್ರಸ್ತಾವನೆ ನೀಡಿದ್ದು, ನಾನು ಅದಕ್ಕೆ ಸಮ್ಮತಿ ಸೂಚಿಸಿದ್ದೇನೆ. ನಮ್ಮ ರಾಜ್ಯದಲ್ಲಿ ಪ್ರತಿ ವರ್ಷ 1 ಲಕ್ಷಕ್ಕೂ ಹೆಚ್ಚು ತಯಾರು ಮಾಡುತ್ತಿದೆ. ಭಾರತದಲ್ಲಿ ಅತಿ ಹೆಚ್ಚು ಇಂಜಿನಿಯರ್ ಇದ್ದು, ಅವರನ್ನು ಗುರುತಿಸುವುದು ನಮ್ಮ ಕರ್ತವ್ಯ. ಎಲ್ಲಾ ಇಂಜಿನಿಯರ್ ಗಳು ರಾಜ್ಯದ ಉದ್ದಗಲ ಗಮನಿಸಬೇಕು. ಇದರ ರೂಪುರೇಷೆಗಳನ್ನು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್ ಗಳು

ಇಂದು ಇಂಜಿನಿಯರ್ ಗಳ ದಿನವಾಗಿದ್ದು, ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ಸರ್ಕಾರದ ಪರವಾಗಿ ಮಾಲಾರ್ಪಣೆ ಮಾಡಲಾಗಿದೆ. ಇಂಜಿನಿಯರ್ ಗಳು ದೇಶದ ಆಸ್ತಿ. ವಿಜ್ಞಾನಿಗಳ ಸಂಶೋಧನೆಗಳನ್ನು ಕಾರ್ಯಗತಗೊಳಿಸುತ್ತಿರುವವರು ಇಂಜಿನಿಯರ್ ಗಳು. ಎಲ್ಲಾ ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್ ಗಳು. ವಾಸ್ತುಶಿಲ್ಪದ ಪರಂಪರೆಯಲ್ಲಿ ನಾವು ಇಂಜಿನಿಯರ್ ಗಳನ್ನು ಗುರುತಿಸುತ್ತಿದ್ದೆವು. ಈಗ ಇಂಧನ, ಕಟ್ಟಡ ನಿರ್ಮಾಣ, ಐಟಿ ತಂತ್ರಜ್ಞಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ವಿಶ್ವೇಶ್ವರಯ್ಯ ಅವರು ದೇಶಕ್ಕೆ ಮಾದರಿ. ಕರ್ನಾಟಕಕ್ಕೆ ಅವರ ಕೊಡುಗೆ ಅಪಾರ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+