ಸಿದ್ದರಾಮಯ್ಯ ಅವರೇ... ಯಾವ ಮುಖವಿಟ್ಟುಕೊಂಡು ದಲಿತರಲ್ಲಿ ಓಟು ಕೇಳುತ್ತೀರಿ?: ಬಿಜೆಪಿ ಪ್ರಶ್ನೆ
ದಲಿತ ವಿರೋಧಿ ಸಿದ್ದರಾಮಯ್ಯ ಎಂದು ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ.
ಬೆಂಗಳೂರು, ಮಾರ್ಚ್22: ಚುನಾವಣೆ ಹತ್ತಿರ ಬಂದಂತೆ ಕಾಂಗ್ರೆಸ್ ಪಕ್ಷಕ್ಕೆ ದಲಿತರ ನೆನಪಾಗಿದೆ. ದಲಿತರು ಈ ಭಾರಿ ನಿಮ್ಮನ್ನು ಸೋಲಿಸುತ್ತಾರೆ ಎಂಬ ಸಮೀಕ್ಷೆ ಆಧರಿಸಿ ಕೋಲಾರ ಬಿಟ್ಟು ಓಡಿದ ಸಿದ್ದರಾಮಯ್ಯ ಅವರೇ, ದಲಿತ ನಾಯಕರನ್ನು ಸೋಲಿಸಿದ ನೀವು ಯಾವ ಮುಖವಿಟ್ಟುಕೊಂಡು ದಲಿತರಲ್ಲಿ ಓಟು ಕೇಳುತ್ತೀರಿ? ಎಂದು ಬಿಜೆಪಿ ಪ್ರಶ್ನಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ದಲಿತ ವಿರೋಧಿ ಕಾಂಗ್ರೆಸ್ ಪಕ್ಷವು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕುತಂತ್ರದಿಂದ ಸೋಲಿಸಿ, ಅವರ ಶವ ಸಂಸ್ಕಾರಕ್ಕೂ ಜಾಗ ನೀಡಿರಲಿಲ್ಲ. ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಐದು ಸ್ಥಳಗಳನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪಂಚತೀರ್ಥ ಯೋಜನೆಯಡಿ ಅಭಿವೃದ್ಧಿಗೊಳಿಸಿದೆ ಎಂದು ಬಿಜೆಪಿ ಹೇಳಿದೆ.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ದಲಿತ ನಾಯಕರಾದ ಡಾ.ಜಿ ಪರಮೇಶ್ವರ್, ಮಲ್ಲಿಕಾರ್ಜುನ್ ಖರ್ಗೆ, ಶ್ರೀನಿವಾಸ್ ಪ್ರಸಾದ್, ಮುನಿಯಪ್ಪ ಅವರನ್ನು ಮೂಲೆಗುಂಪು ಮಾಡಿತ್ತು. ಅಖಂಡ ಶ್ರೀನಿವಾಸಮೂರ್ತಿ ಮೇಲೆ ದಾಳಿ ನಡೆದಾಗಲು, ತುಷ್ಟೀಕರಣದ ಕಾರಣದಿಂದ ಅವರನ್ನು ಕಾಂಗ್ರೆಸ್ ಬೆಂಬಲಿಸಲಿಲ್ಲ.
ದಲಿತರನ್ನು ಮತ ಬ್ಯಾಂಕ್ ಆಗಿ ಬಳಸಿಕೊಂಡ ಕಾಂಗ್ರೆಸ್ ಪಕ್ಷವು ದಲಿತರಿಗೆ ಮೀಸಲಾತಿಯನ್ನು ಕೊಡುವುದನ್ನು ನಿರಾಕರಣೆ ಮಾಡಿತ್ತು. ಪರಿಶಿಷ್ಟ ವರ್ಗದ ಮೀಸಲಾತಿಯನ್ನು ಹೆಚ್ಚಿಸಿದ್ದು, ಲಂಬಾಣಿ ಸಮುದಾಯಕ್ಕೆ ಹಕ್ಕು ಪತ್ರವನ್ನು ವಿತರಣೆ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ಟ್ವೀಟ್ ಮಾಡಿದೆ.

ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸಿದಂತೆ ಸಿದ್ದರಾಮಯ್ಯ ನವರು ಕೋಲಾರದಲ್ಲಿ ವಾರ್ ಶುರುವಾಗುವುದಕ್ಕೂ ಮುನ್ನ ವಾರ್ ರೂಂ ಉದ್ಘಾಟನೆ ಮಾಡಿ ಗರ್ವಭಂಗಕ್ಕೆ ಒಳಗಾಗಿದ್ದಾರೆ. ಯುದ್ಧಕ್ಕೂ ಮುನ್ನವೇ ಸ್ವಪಕ್ಷೀಯ ನಾಯಕರು ಸೋಲುಣಿಸಿ ಪುನಃ ಮನೆಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಬಿಜೆಪಿ ಕಿಡಿಕಾರಿದೆ.
ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಹೋರಾಟಕ್ಕೆ ನಿರ್ಧಾರ: ಡಾ.ಜಿ ಪರಮೇಶ್ವರ್
ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಮೋಸ ಮಾಡುತ್ತಲೇ ಬಂದಿದ್ದಾರೆ. ಬಿಜೆಪಿ ನಾಯಕರು ಕಾಂಗ್ರೆಸ್ ದಲಿತರಿಗೆ ಮೋಸ ಮಾಡಿದ್ದು, ನಾವು ಅವರಿಗೆ ಮೀಸಲಾತಿ ಹೆಚ್ಚಿಸುತ್ತಿದ್ದೇವೆ ಎಂದು ಸುಳ್ಳು ಹೇಳಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ದ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರವನ್ನ ತೆಗೆದುಕೊಳ್ಳಲಾಗುವುದು ಎಂದು ಡಾ.ಜಿ ಪರಮೇಶ್ವರ್ ಹೇಳಿದರು.
ದಲಿತ ವಿರೋಧಿ @INCKarnataka ಪಕ್ಷವು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕುತಂತ್ರದಿಂದ ಸೋಲಿಸಿ, ಅವರ ಶವ ಸಂಸ್ಕಾರಕ್ಕೂ ಜಾಗ ನೀಡಿರಲಿಲ್ಲ. ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಐದು ಸ್ಥಳಗಳನ್ನು ಗುರುತಿಸಿದ ಪ್ರಧಾನಿ ಶ್ರೀ @narendramodi ನೇತೃತ್ವದ ಸರ್ಕಾರ ಪಂಚತೀರ್ಥ ಯೋಜನೆಯಡಿ ಅಭಿವೃದ್ಧಿಗೊಳಿಸಿದೆ. #DalitVirodhiCongress
— BJP Karnataka (@BJP4Karnataka) March 22, 2023
2/4
ಮೀಸಲಾತಿ ವಿಚಾರವಾಗಿ ಸಂಸದರು ಸಂಸತ್ತಿನಲ್ಲಿ ಪ್ರಶ್ನೆ ಮಾಡಿದಾಗ. ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ನೀಡಿಲ್ಲ ಎಂದು ರಾಜ್ಯದ ಸಂಸದರು ಹಾಗೂ ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಅವರು ಸಂಸತ್ತಿನಲ್ಲಿ ಉತ್ತರಿಸಿದ್ದಾರೆ. ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ಹೇಗೆ ದ್ರೋಹ ಬಗೆಯುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿ. ಇಕ್ಕಿಂತ ಮೋಸ ಮಾಡಲು ಜಗತ್ತಿನಲ್ಲಿ ಯಾರಿಗೂ ಸಾಧ್ಯವಾಗುವುದಿಲ್ಲ.
ಈ ಮೀಸಲಾತಿ ನಮ್ಮ ಹಕ್ಕಾಗಿದೆ. ಬಿಜೆಪಿಯವರು ಅಂಬೇಡ್ಕರ್ ಅವರ ಸಂವಿಧಾನ ಬದಲಿಸುವ ಬಗ್ಗೆ ಮಾತನಾಡುತ್ತಾರೆ. ಇನ್ನು ಕೆಲವರು ಮೀಸಲಾತಿ ತೆಗೆದುಹಾಕಬೇಕು ಎಂದು ಹೇಳುತ್ತಿದ್ದಾರೆ. ಸಂಸತ್ತಿನಲ್ಲಿ ಕೇಂದ್ರ ಸಚಿವರ ಹೇಳಿಕೆ ನಂತರ ದಲಿತ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು. ನಮ್ಮ ಪ್ರತಿಭಟನೆ ರೂಪುರೇಷೆಗಳನ್ನು ಶೀಘ್ರ ತಿಳಿಸುತ್ತೇವೆ.
ಇನ್ನು ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಜನಸಂಖ್ಯೆ ಅನುಗುಣವಾಗಿ ಬಜೆಟ್ ನಲ್ಲಿ ಶೇ.24ರಷ್ಟು ಹಣ ಮೀಸಲಿಟಲು ಎಸ್ ಸಿಪಿ ಟಿಎಸ್ ಪಿ ಕಾಯ್ದೆ ತಂದು ಅನುದಾನ ನೀಡಿದ್ದೆವು. ಆದರೆ ಬಿಜೆಪಿ ಸರ್ಕಾರ ಕೇವಲ 28 ಸಾವಿರ ಮಾತ್ರ ನೀಡಿ, ಅದರಲ್ಲಿ ಕೇವಲ 20 ಸಾವಿರ ಕೋಟಿ ಮಾತ್ರ ನೀಡಿದೆ. ಈ ವರ್ಷ 52 ಸಾವಿರ ಕೋಟಿ ಅನುದಾನ ನೀಡದೇ ಕೇವಲ 30 ಸಾವಿರ ಕೋಟಿ ಮಾತ್ರ ನೀಡಿದ್ದಾರೆ. ಇದರ ವಿರುದ್ಧವೂ ನಾವು ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ.












Click it and Unblock the Notifications