ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕವನ್ನೇ ಕಲೆಕ್ಷನ್ ಕೇಂದ್ರವನ್ನಾಗಿಸಿದೆ

ಬೆಂಗಳೂರು, ಅಕ್ಟೋಬರ್‌ 13: ಗುತ್ತಿಗೆದಾರರನ್ನು ಕೈಗೊಂಬೆ ಮಾಡಿಕೊಂಡು ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕವನ್ನೇ ಕಲೆಕ್ಷನ್ ಕೇಂದ್ರವನ್ನಾಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳುತ್ತದೆ ನಾವು ಹೇಳುತ್ತಲೇ ಬಂದಿದ್ದೆವು. ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಮಾಡದೇ ಹಲವರ ಕೊರಳಿಗೆ ಕುಣಿಕೆ ಹಾಕಿತ್ತು ಈ ಸರ್ಕಾರ. ಈಗ ಗುತ್ತಿಗೆದಾರರನ್ನು ಕೈಗೊಂಬೆ ಮಾಡಿಕೊಂಡು ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕವನ್ನೇ ಕಲೆಕ್ಷನ್ ಕೇಂದ್ರವನ್ನಾಗಿಸಿದೆ ಎಂದು ಹೇಳಿದ್ದಾರೆ.

nalin-kumar-kateel-lashed-out

ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಗಳಿಂದಾಗಿ ಈ ಎಟಿಎಂ ಸರ್ಕಾರಕ್ಕೆ ಬೆಸೆದುಕೊಂಡ ಕಲೆಕ್ಷನ್ ಕೊಂಡಿಗಳೆಲ್ಲಾ ಒಂದೊಂದಾಗಿ ಹೊರಬರುತ್ತಿವೆ. ಇದರ ಬಗ್ಗೆ ಸೂಕ್ತ ತನಿಖೆಯಾಗಿ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿರುವ ಇದರ ಹಿಂದಿರುವ ವ್ಯಕ್ತಿಯ 'ಕೈ'ಗಳು ಯಾರದ್ದು ಎಂದು ರಾಜ್ಯದ ಜನತೆಗೆ ತಿಳಿಯಬೇಕಿದೆ ಎಂದು ಹೇಳಿದ್ದಾರೆ.

ಈ ಹಣ ಯಾರಿಗೆ ಸೇರಿದ್ದು ಡಿ ಕೆ ಶಿವಕುಮಾರ್‌ ಅವರೇ? : ಸಿ ಟಿ ರವಿ

ಇನ್ನೂ ಈ ಕುರಿತು ಮಾಜಿ ಸಚಿವ ಸಿ ಟಿ ರವಿ ಮಾತನಾಡಿ ಹಿಂದಿನ ಬಿಜೆಪಿ ಸರಕಾರದ ಮೇಲೆ 40% ಸರಕಾರ ಎಂದು ಸುಳ್ಳು ಆರೋಪ ಮಾಡಿದ, ಕಾಂಗ್ರೆಸ್ಸಿನ ಹಿರಿಯ ನಾಯಕರ ಆಪ್ತ, ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಹಾಗೂ ಆತನ ಪತ್ನಿ ಕಾಂಗ್ರೆಸ್ಸಿನ ಮಾಜಿ ಕಾರ್ಪೊರೇಟರ್ ದಂಪತಿಯ ಮನೆಯಲ್ಲಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡ 42 ಕೋಟಿ ರೂಪಾಯಿ ನಗದು ಯಾರಿಗೆ ಸೇರಿದ್ದು ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರೆ? ಎಂದು ಪ್ರಶ್ನಿಸಿದ್ದಾರೆ.

nalin-kumar-kateel-lashed-out

ಮೊನ್ನೆಯ ಪಾಲಿಕೆಯಲ್ಲಿ ₹600 ಕೋಟಿ ಬಾಕಿ ಹಣ ಬಿಡುಗಡೆಯಾಗಿತ್ತು. ಇದು ಅದರ ಕಮಿಷನ್ ಹಣದ ಬಾಬ್ತು ಎಂದು ಅನೇಕ ಗುತ್ತಿಗೆದಾರರು ಹೇಳುತ್ತಿದ್ದಾರೆ ನಿಜವೇ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರೇ? ಪಂಚ ರಾಜ್ಯಗಳ ಚುನಾವಣಾ ಸಂದರ್ಭದಲ್ಲಿ ಯಾವ ಯಾವ ರಾಜ್ಯದ ಚುನಾವಣೆಗೆ ನಮ್ಮ ಕರ್ನಾಟಕವನ್ನು ATM ಮಾಡಿಕೊಂಡಿದ್ದೀರಿ ಕಾಂಗ್ರೆಸ್ಸಿಗರೇ? ಗ್ಯಾರೆಂಟಿ ಎಂಬ ಸುಳ್ಳು ಆಮಿಷ ಒಡ್ಡಿ ಅಧಿಕಾರಕ್ಕೆ ಬಂದ ನೀವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಲು ಯೋಜನೆ ಹಾಕಿಕೊಂಡಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಈ ಕುರಿತು ಬಸವನಗೌಡ ಪಾಟೀಲ್‌ ಯತ್ನಾಳ್‌ ಟ್ವೀಟ್‌ ಮಾಡಿದ್ದು, ಈ ಐಟಿ ರೇಡ್ ನಲ್ಲಿ ಕಾಂಗ್ರೆಸ್ ಏಜಂಟ್ ಅಂಬಿಕಾಪತಿಯ ಮನೆಯಲ್ಲಿ ದೊರೆತ 42 ಕೋಟಿ ಹಣದ ಮೂಲವನ್ನು ಹುಡುಕುವುದು ಬಹಳ ಸುಲಭ. ಬಿಬಿಎಂಪಿ ಬಿಡುಗಡೆ ಮಾಡಿರುವ 650 ಕೋಟಿ ಅನುದಾನ ಪಡೆದಿರುವ ಗುತ್ತಿಗೆದಾರರು ಯಾರು? ಅವರ ಹಿನ್ನಲೆ ಏನು? ಬಾಕಿ ಬಿಲ್ಲುಗಳ ವಿವರ! 650 ಕೋಟಿ ರೂಗಳಿಗೆ ಎಷ್ಟು ಪರ್ಸೆಂಟೇಜ್ ಫಿಕ್ಸ್ ಮಾಡಲಾಗಿತ್ತು? ಎಂದು ಪ್ರಶ್ನಿಸಿದರು.

ಈ ಹಣ ತಮಿಳುನಾಡಿನಿಂದ ತೆಲಂಗಾಣಕ್ಕೆ ಕಳುಹಿಸಲು ಯಾಕೆ ಯೋಜನೆ ಮಾಡಲಾಗಿತ್ತು? ತೆಲಂಗಾಣಕ್ಕೆ ಕಳುಹಿಸುವುದಾದರೆ ಚುನಾವಣೆಗಾಗಿ ಅಲ್ಲವೇ? ಕುಮಾರಕೃಪಾ ಗೋಡೆಗಳನ್ನು ಕೇಳಿದರು ಹೇಳುವುದು ಈ ಹಣ ನೀಡಿರುವ ಸುಮಾರು 23 ಗುತ್ತಿಗೆದಾರರು ಯಾರೆಂದು! ಕೆಂಪಣ್ಣ ಆಂಡ್ ಕಂಪನಿಗೆ ಈ ಮಾಹಿತಿ ಇಲ್ಲವಾ? ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+