ಗಲಭೆಕೋರರ ಕೇಸು ಹಿಂಪಡೆದರೆ ತೀವ್ರ ಹೋರಾಟ: ನಳಿನ್‍ಕುಮಾರ್ ಕಟೀಲ್ ಹೇಳಿದ್ದೇನು?
ಬೆಂಗಳೂರು, ಜುಲೈ 26: ಶಾಸಕ ತನ್ವೀರ್ ಸೇಠ್‍ರವರ ವಿನಂತಿಪತ್ರದ ಮೇರೆಗೆ ಗಲಭೆಕೋರರ ಕೇಸುಗಳನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದು ಅವರನ್ನು ಬಿಡುಗಡೆ ಮಾಡಿದರೆ ಅದರ ವಿರುದ್ಧ ತೀವ್ರ ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಎಚ್ಚರಿಸಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರಕಾರವು ತುಷ್ಟೀಕರಣ ರಾಜಕಾರಣ, ಮತಬ್ಯಾಂಕ್ ರಾಜಕೀಯ ಮಾಡುತ್ತಿದೆ. ಇನ್ನೊಂದೆಡೆ ಕೆ.ಜೆ.ಹಳ್ಳಿ- ಡಿ.ಜೆ.ಹಳ್ಳಿ ಘಟನೆಯಡಿ ಮಾರಣಾಂತಿಕ ಹಲ್ಲೆ, ದಲಿತ ಶಾಸಕನ ಮನೆ ಸುಟ್ಟು ಹಾಕಿದ್ದು, ಬಂಧನಕ್ಕೆ ಒಳಗಾದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ರೌಡಿಗಳನ್ನು, ಪುಡಿ ರೌಡಿಗಳನ್ನು ಬಿಡುಗಡೆ ಮಾಡಲು ಮತ್ತು ಕೇಸು ರದ್ದತಿಗೆ ತನ್ವೀರ್ ಸೇಠ್ ಅವರು ಗೃಹ ಸಚಿವ ಪರಮೇಶ್ವರರಿಗೆ ವಿನಂತಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಹರ್ಷ ಹತ್ಯೆ ಕೇಸನ್ನೂ ರದ್ದು ಮಾಡಿ ಬಂಧಿತರನ್ನು ಬಿಡುಗಡೆ ಮಾಡಲು ಕೋರಿದ್ದಾರೆ. ಇದನ್ನು ಸರಕಾರವು ಮನ್ನಿಸಬಾರದು ಎಂದು ಆಗ್ರಹಿಸಿದ್ದಾರೆ. ಮಂಗಳೂರು ಗಲಭೆಯ ಕೇಸನ್ನೂ ರದ್ದು ಮಾಡಲು ಮನವಿ ಮಾಡಿದ್ದಾರೆ ಎಂದಿರುವ ಅವರು, ಬಿಜೆಪಿ ಸರಕಾರವು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಘಟನೆಯ ತನಿಖೆಯನ್ನು ಎನ್‍ಐಎಗೆ ವಹಿಸಿದೆ. ನ್ಯಾಯಾಲಯದಲ್ಲಿರುವ ಈ ಕೇಸನ್ನು ರದ್ದು ಮಾಡುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಉಡುಪಿಯ ಅರೆವೈದ್ಯಕೀಯ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯ ನಗ್ನ ವಿಡಿಯೋ ಚಿತ್ರೀಕರಣ ಮಾಡಿದ ಘಟನೆಯ ಕುರಿತ ಎಫ್‍ಐಆರ್ ದಾಖಲೆ ಮಾಡುವುದರಲ್ಲಿ ಅನಪೇಕ್ಷಿತ ವಿಳಂಬವನ್ನು ಪ್ರಶ್ನಿಸಿರುವ ಅವರು, ಒಂದು ವಾರದ ಬಳಿಕ ಪ್ರಕರಣದ ಎಫ್‍ಐಆರ್ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಲು ಇನ್ನೆಷ್ಟು ದಿನ ಬೇಕು ಎಂದು ಕೇಳಿದ್ದಾರೆ. ಈ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯರ ಸರಕಾರದ ಹಿಂದಿನ ಅವಧಿಯಲ್ಲಿ ಕೂಡ ಪಿಎಫ್‍ಐ, ಎಸ್‍ಡಿಪಿಐನ ಗಲಭೆಕೋರರನ್ನು ಬಿಡುಗಡೆ ಮಾಡಿದ್ದರು. ಅದು ಹಿಂದೂ ಯುವಕರ ಹತ್ಯೆಗೆ ಕಾರಣವಾಗಿತ್ತು ಎಂದಿರುವ ಅವರು, ಮತಾಂತರಕ್ಕೆ ಪ್ರೋತ್ಸಾಹ, ಗೋವುಗಳ ಅಕ್ರಮ ಸಾಗಾಟ, ಗೋಹತ್ಯೆಯಂಥ ಒಂದು ಸಮುದಾಯದ ತುಷ್ಟೀಕರಣ ರಾಜಕಾರಣ ಸಲ್ಲದು ಎಂದು ಎಚ್ಚರಿಸಿದ್ದಾರೆ.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮರ್ಯಾದೆ ಹತ್ಯೆಗೆ ಬೀಳಲಿದೆ ಬ್ರೇಕ್: ವಿಧಾನಸಭೆಯಲ್ಲಿ ಐತಿಹಾಸಿಕ 'ಇವ ನಮ್ಮವ' ಮಸೂದೆ ಮಂಡಿಸಿದ ಸರ್ಕಾರ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ












Click it and Unblock the Notifications