ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ; ಆರ್ ಅಶೋಕ್, ಸಿಟಿ ರವಿ ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು, ಸೆಪ್ಟೆಂಬರ್ 26: ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಲಾಯಿತು.
ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಮೂಡ ಸೈಟ್‍ಗಳನ್ನು ಕೊಳ್ಳೆ ಹೊಡೆದ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಸಿದ್ದರಾಮಯ್ಯ ಅವರೇ ಕೊಡಲೇಬೇಕು ಕೊಡಲೇಬೇಕು- ರಾಜೀನಾಮೆ ಕೊಡಲೇಬೇಕು, ಭ್ರಷ್ಟ ಸರಕಾರ ನಡೆಸುವ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಬೆಲೆ ಏರಿಕೆ, ತೆರಿಗೆ ಏರಿಕೆ ಸಿಎಂ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ- ಇವೇ ಮೊದಲಾದ ಘೋಷಣೆಗಳನ್ನು ಕೂಗಿದರು. ಈ ವೇಳೆ ಆರ್ ಅಶೋಕ್ , ಸಿ ಟಿ ರವಿ ಸೇರಿದಂತೆ ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

ಪ್ರತಿಭಟನೆಯ ವೇಳೆ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರು ಮಾತನಾಡಿ, ವಿಧಾನಸಭೆ ವಿಸರ್ಜನೆ ಮಾಡಿ ತಮ್ಮ ಹಿಂದೆ ರಾಜ್ಯದ ಜನರಿದ್ದಾರೆ ಎಂದು ತೋರಿಸಿಕೊಟ್ಟರೆ ಬಿಜೆಪಿ ನಿಮ್ಮ ವಿರುದ್ಧ ಪ್ರತಿಭಟನೆಯನ್ನೇ ಮಾಡುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸವಾಲು ಹಾಕಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಆರ್. ಅಶೋಕ್ ಅವರು, ಸಿದ್ದರಾಮ್ಯನವರೇ ನೀವು ವಿಧಾನಸಭೆ ವಿಸರ್ಜನೆಗೆ ಮುಂದಾದರೆ ಕಾಂಗ್ರೆಸ್ಸಿನ 136 ಶಾಸಕರ ಪೈಕಿ 135 ಜನ ಶಾಸಕರೂ ನಿಮ್ಮ ಜೊತೆ ಇರುವುದಿಲ್ಲ. ಜಮೀರ್, ಮಹದೇವಪ್ಪ, ಕಾಕಾ ಪಾಟೀಲ್ ಕೂಡ ಇರುವುದಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಕನಸಿನ ಮಾತಾಗಿದೆ. ಲೂಟಿ, ಭ್ರಷ್ಟಾಚಾರ ಮಿತಿ ಮೀರಿದೆ. ಈ ಸರಕಾರಕ್ಕೆ ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆ ಮಾಡಲು ಅಧಿಕಾರ, ಯೋಗ್ಯತೆ ಇಲ್ಲ ಎಂದ ಅವರು, ರಾಜೀನಾಮೆ ಕೊಡುವುದೊಂದೇ ನಿಮ್ಮ ಮುಂದಿನ ದಾರಿ ಎಂದು ಸಲಹೆ ನೀಡಿದರು. ಇವತ್ತು ಎಫ್‍ಐಆರ್ ಕೂಡ ಆಗಲಿದೆ. ಇನ್ಯಾತಕ್ಕೆ ಕಾಯುತ್ತಿದ್ದೀರಿ? ಎಂದು ಪ್ರಶ್ನಿಸಿದರು. ಹೈಕೋರ್ಟ್ ಆದೇಶ ಬಂದಿದೆ. ಜನಪ್ರತಿನಿಧಿಗಳ ಕೋರ್ಟಿನ ಆದೇಶವೂ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜೀನಾಮೆ ಬಿಟ್ಟು ಬೇರೇನು ಮಾಡಲೂ ಸಾಧ್ಯವಿಲ್ಲ ಎಂದು ವಿಶ್ಲೇಷಿಸಿದರು.
ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದು ತನಿಖೆ ಮೇಲೆ ಪ್ರಭಾವ ಬೀರುತ್ತಾರೆಂದು ಹೇಳಿದ್ದಿರಲ್ಲವೇ? ಎಂದು ಕೇಳಿದರು. ನಿಷ್ಪಕ್ಷಪಾತ ತನಿಖೆ ಆಗಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯನವರು ಹೇಳಿದ್ದರು. ಇದು ಕೂಡ ಭ್ರಷ್ಟಾಚಾರದ ಕೇಸ್ ಎಂದು ಗಮನ ಸೆಳೆದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಕಾಂಗ್ರೆಸ್ಸಿಗರು ಮತ್ತು ಸಿದ್ದರಾಮಯ್ಯನವರು ಕರ್ನಾಟಕವನ್ನು ಎಟಿಎಂ ಮಾಡಿ ತಮ್ಮನ್ನು ತಾವು ಹಾಳು ಮಾಡಿಕೊಂಡರು ಎಂದು ನುಡಿದರು. ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಮೂಲಕ ರಾಷ್ಟ್ರದಲ್ಲಿ ಕರ್ನಾಟಕದ ಮಾನವನ್ನು ಹರಾಜು ಹಾಕುತ್ತಿದೆ ಎಂದು ಟೀಕಿಸಿದರು.
ರಾಜೀನಾಮೆ ಕೊಡುವ ಮೂಲಕ ಅಲ್ಪಸ್ವಲ್ವ ಗೌರವವನ್ನು ಉಳಿಸಿಕೊಳ್ಳಿ ಎಂದು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಮೊನ್ನೆ ಹೈಕೋರ್ಟ್ ಆದೇಶ ಬಂದ ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನಿಮ್ಮ ರಾಜೀನಾಮೆ ಪಡೆದು ಪಕ್ಷದಿಂದ ಉಚ್ಚಾಟಿಸಬೇಕಿತ್ತು. ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ದುರ್ಬಲ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ತಿಳಿಸಿದರು.
ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಮೂಡ ಸೈಟ್‍ಗಳನ್ನು ಕೊಳ್ಳೆ ಹೊಡೆದ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಸಿದ್ದರಾಮಯ್ಯ ಅವರೇ ಕೊಡಲೇಬೇಕು ಕೊಡಲೇಬೇಕು- ರಾಜೀನಾಮೆ ಕೊಡಲೇಬೇಕು, ಭ್ರಷ್ಟ ಸರಕಾರ ನಡೆಸುವ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಬೆಲೆ ಏರಿಕೆ, ತೆರಿಗೆ ಏರಿಕೆ ಸಿಎಂ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ- ಇವೇ ಮೊದಲಾದ ಘೋಷಣೆಗಳನ್ನು ಕೂಗಿದರು. ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಘೋಷಣೆಗಳನ್ನು ಕಾರ್ಯಕರ್ತರಿಗೆ ತಿಳಿಸಿದರು ಹಾಗೂ ಕಾರ್ಯಕ್ರಮ ನಿರೂಪಿಸಿದರು.
ಭಾರತ್ ಮಾತಾ ಕೀ ಜೈ ಘೋಷಣೆಯನ್ನೂ ಕೂಗಲಾಯಿತು. ಬಿಜೆಪಿ ಪ್ರಮುಖರು ಮಾತನಾಡಿ, ಹಗರಣಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕು. ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರಕಾರ ಇದೆಂದು ಟೀಕಿಸಿದರು.












Click it and Unblock the Notifications