ಬೆಂಗಳೂರಲ್ಲಿ ಬೃಹತ್ ಸಮಾವೇಶಕ್ಕೆ ಬಿಜೆಪಿ ಸಿದ್ಧತೆ

Posted By:
Subscribe to Oneindia Kannada

ಬೆಂಗಳೂರು, ಜುಲೈ 14 : ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿರುವ ಬಿಜೆಪಿ, ತನ್ನ ಮುಂದಿನ ಹೋರಾಟಗಳ ರೂಪುರೇಷೆ ತಯಾರಿಸಿದೆ. ಸರ್ಕಾರದ ವೈಫಲ್ಯ ಜನರಿಗೆ ತಿಳಿಸಲು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಿದೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಾಸಕರ ಜೊತೆ ವಿಧಾನಸೌಧದಲ್ಲಿ ಶುಕ್ರವಾರ ಸಭೆ ನಡೆಸಿದರು. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಹೋರಾಟವನ್ನು ತೀವ್ರಗೊಳಿಸಲು ಪಕ್ಷದ ನಾಯಕರಿಗೆ ಸೂಚಿಸಿದರು. [ಸೇಡಿಗೆ ಸೇಡು ಬಿಜೆಪಿಯಿಂದ ಪಾದಯಾತ್ರೆಗೆ ಸಿದ್ಧತೆ!]

ಶಾಸಕರ ಜೊತೆ ಕೈಗೆ ಕಪ್ಪುಪಟ್ಟು ಧರಿಸಿಕೊಂಡು ವಿಧಾನಸೌಧದ ಮುಂಭಾಗದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ಪತ್ರಿಭಟನೆ ನಡೆಸಿದ ಯಡಿಯೂರಪ್ಪ ಅವರು, ಕರ್ನಾಟಕ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು. [ಜಾರ್ಜ್ ರಾಜೀನಾಮೆಗೆ ವಿಪಕ್ಷಗಳ ಬಿಗಿ ಪಟ್ಟು]

ಕರ್ನಾಟಕ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸಲು ಕೊಡಗಿನಿಂದ-ಬೆಂಗಳೂರಿನ ತನಕ ಪಾದಯಾತ್ರೆ ಮಾಡುವ ಬಗ್ಗೆಯೂ ಚರ್ಚೆ ನಡೆಯಿತು. ಆದರೆ, ಎಲ್ಲಾ ನಾಯಕರ ಜೊತೆ ಚರ್ಚೆ ನಡೆಸಿದ ನಂತರ ಪಾದಾಯಾತ್ರೆ ನಿರ್ಧಾರವನ್ನು ಕೈ ಬಿಡಲಾಯಿತು......ವಿವರಗಳು ಚಿತ್ರಗಳಲ್ಲಿ....

ಗಣಪತಿ ನಿವಾಸಕ್ಕೆ ಭೇಟಿ ನೀಡಲು ಸೂಚನೆ

ಗಣಪತಿ ನಿವಾಸಕ್ಕೆ ಭೇಟಿ ನೀಡಲು ಸೂಚನೆ

ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರ ರಂಗಸಮುದ್ರದಲ್ಲಿನ ಮನೆಗೆ ಭೇಟಿ ನೀಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳುವಂತೆ ಯಡಿಯೂರಪ್ಪ ಅವರು ಸೂಚನೆ ಕೊಟ್ಟಿದ್ದಾರೆ. ಶನಿವಾರ ಅಥವ ಭಾನುವಾರ ಶೆಟ್ಟರ್ ಭೇಟಿ ನೀಡುವ ಸಾಧ್ಯತೆ ಇದೆ.

ಮೋದಿ ಭೇಟಿಗೆ ನಿರ್ಧಾರ

ಮೋದಿ ಭೇಟಿಗೆ ನಿರ್ಧಾರ

ಎಂ.ಕೆ.ಗಣಪತಿ ಅವರ ಪತ್ನಿ ಪಾವನ ಅವರ ಜೊತೆ ರಾಜ್ಯ ಬಿಜೆಪಿ ನಾಯಕರ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದೆ. ಮೋದಿ ಭೇಟಿಯ ವೇಳೆ ಆತ್ಮಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸಲಾಗುತ್ತದೆ.

ನರೇಂದ್ರ ಮೋದಿ ಭೇಟಿಗೆ ತೀರ್ಮಾನ

ನರೇಂದ್ರ ಮೋದಿ ಭೇಟಿಗೆ ತೀರ್ಮಾನ

ಕುಟುಂಬಕ್ಕೆ ನ್ಯಾಯ ಒದಗಿಸಲು ಬೇಕಾದ ಎಲ್ಲಾ ಹೋರಾಟಕ್ಕೆ ಸಜ್ಜಾಗಬೇಕು. ನಮ್ಮ ಹೋರಾಟಕ್ಕೆ ಮಣಿಯದಿದ್ದಲ್ಲಿ ಸೋಮವಾರ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ನೀಡುವ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಯಿತು.

ಪಾದಯಾತ್ರ ಬದಲು ಸಮಾವೇಶ

ಪಾದಯಾತ್ರ ಬದಲು ಸಮಾವೇಶ

ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸಲು ಕೊಡಗಿನಿಂದ-ಬೆಂಗಳೂರಿನ ತನಕ ಪಾದಯಾತ್ರೆ ಮಾಡಲು ಚರ್ಚೆ ನಡೆಯಿತು. ಆದರೆ, ಎಲ್ಲಾ ನಾಯಕರ ಜೊತೆ ಚರ್ಚೆ ನಡೆಸಿದ ನಂತರ ಪಾದಾಯಾತ್ರೆ ನಿರ್ಧಾರವನ್ನು ಕೈ ಬಿಡಲಾಯಿತು. ಸಮಾವೇಶ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.

ಬೆಂಗಳೂರಿನಲ್ಲಿ ಸಮಾವೇಶ

ಬೆಂಗಳೂರಿನಲ್ಲಿ ಸಮಾವೇಶ

ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲು ಬಿಜೆಪಿ ನಿರ್ಧರಿಸಿದೆ. ಜುಲೈ 18ರಂದು ಸಮಾವೇಶದ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ. ಸಮಾವೇಶಕ್ಕೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಥವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲು ಪಕ್ಷ ನಿರ್ಧರಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka BJP all set to hold rally in Bengaluru to educate people about failure of Chief Minister Siddaramaiah lead Congress government.
Please Wait while comments are loading...