BJP State President: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಯಾವಾಗ?: ಶಿವರಾಜ್ ಸಿಂಗ್ ಚೌಹಾಣ್
ಬೆಂಗಳೂರು, ಜನವರಿ 19: ಕರ್ನಾಟಕ ಆಡಳಿತ ಪಕ್ಷದಲ್ಲೂ ಬಣ ರಾಜಕೀಯ ನಡೆದಿದ್ದರೆ, ಬಿಜೆಪಿಯಲ್ಲೂ ಬಣ ರಾಜಕೀಯ ಆರೋಪ ಪ್ರತ್ಯಾರೋಪ ಮುಂದುವರಿದಿದೆ. ಬಿಜೆಪಿಯ ವರಿಷ್ಠರು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರವೇ ಚುನಾವಣೆ ನಡೆಸಲು ತೀರ್ಮಾನಿಸಿದೆ. ಚುನಾವಣೆ ಮೂಲಕ ಮುಂದಿನ ದಿನಗಳಲ್ಲಿ ಪಕ್ಷದ ಅಧ್ಯಕ್ಷರ ಆಯ್ಕೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಬಿವೈ ವಿಜಯೇಂದ್ರ ಅವರು ತಾವೇ ಮುಂದುವರೆಯುವ, ಅಧಿಕಾರದಲ್ಲಿ ಉಳಿಯುವ ವಿಶ್ವಾಸ ವ್ಯಕ್ತಪಡಿಸಿದ ಬೆನ್ನಲ್ಲೆ ಶೀಘ್ರವೇ ಚುನಾವಣೆ ನಡೆಯಲಿದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿರುವುದು ಮತ್ತಷ್ಟು ಕುತೂಹಲ ಉಂಟಾಗುವಂತೆ ಮಾಡಿದೆ.

ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದಲ್ಲಿ ಬಿಜೆಪಿಯ ಸಾಂಸ್ಥಿಕ ಚುನಾವಣೆಗಳ ಉಸ್ತುವಾರಿಯಾಗಿ ಕೇಂದ್ರ ವರಿಷ್ಠರು ನಿಯೋಜಿಸಿದ್ದಾರೆ. ಕೆಲವು ಚುನಾವಣೆಗಳ ನಂತರ, ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಚುಣಾವಣೆ ನಡೆಸಲಾಗುವುದೆಂದು ಅವರು ತಿಳಿಸಿದ್ದಾರೆ.
ಬಿಜೆಪಿಯ ಉನ್ನತ ನಾಯಕರು ಮತಪತ್ರದ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಒತ್ತಾಯಿಸಿದ್ದಾರೆ. ಬಿ.ವೈ. ವಿಜಯೇಂದ್ರ ವಿರುದ್ಧ ಸಮರ್ಥ ನಾಯಕತ್ವ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿಯಲ್ಲಿ ಚರ್ಚಿಸಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರಿರುವ ಬಣದಲ್ಲಿ ಮಹತ್ವದ ಚರ್ಚೆಗಳು ಆಗಿವೆ.

ಚುನಾವಣೆ ಸಂಬಂಧ ಮಹತ್ವದ ಚರ್ಚೆ, ಬೆಳವಣಿಗೆ ನಡೆಯುವ ಹೊತ್ತಿಗೆ ಶಿವರಾಜ್ ಸಿಂಗ್ ಸ್ವತಃ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದು ವಿಜಯೇಂದ್ರ ಅವರ ತಳಮಳಕ್ಕೆ ಕಾರಣವಾಗಿದೆ.
ಸರ್ವಾನುಮತದಿಂದ ರಾಜ್ಯಧ್ಯಕ್ಷ ಆಯ್ಕೆ
ಬಿಜೆಪಿಗೆ ರಾಜ್ಯದಲ್ಲಿ ಹೊಸ ಅಧ್ಯಕ್ಷರ ನೇಮಕ ಆಗುತ್ತದೆಯೋ ಅಥವಾ ನಾಮ ನಿರ್ದೇಶನ ಮಾಡಲಾಗುತ್ತದೆಯೋ? ಎಂಬ ಪ್ರಶ್ನೆಗೆ ಉತ್ತರಿಸಿದ ಚೌಹಾಣ್ ಅವರು, ಎಲ್ಲ ಹಂತಗಳಲ್ಲು ಬಿಜೆಪಿ ಚುನಾವಣೆ ನಡೆಯಲಿದೆ. ಬೂತ್ ಸಮಿತಿಗಳನ್ನು ಸಹ ಆಯ್ಕೆ ಮಾಡಲಾಗುತ್ತದೆ. ಇದೀಗ ರಾಜ್ಯಾಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.
ನಾಯಕ ನಳೀನ್ ಕುಮಾರ್ ಕಟಿಲ್ ಅವರ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರು ಪುತ್ರ ಬಿವೈ. ವಿಜಯೇಂದ್ರ ಅವರನ್ನು 2023 ರ ನವೆಂಬರ್ನಲ್ಲಿ ಬಿಜೆಪಿ ರಾಜ್ಯಾಕ್ಷರನ್ನಾಗಿ ನೇಮಿಸಲಾಯಿತು. ಈ ಹುದ್ದೆಗೆ ಇರುವುದೇ ಮೂರು ವರ್ಷ ಅವಧಿ.
ವಿಜಯೇಂದ್ರ ಅವರಿಗೆ ಈ ಸ್ಥಾನ ನೀಡಿದ್ದೇ ಬಿಜೆಪಿ ಬಣ ರಾಜಕೀಯ, ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಯಿತು. ಪಕ್ಷಕ್ಕೆ ಮುಜುಗರ ಉಂಟಾಗುವ ಬೆಳವಣಿಗೆಗಳು ನಡೆದವು. ಶಿಕಾರಿಪುರದಲ್ಲಿ ಗೆದ್ದು ಬೀಗಿದ್ದ ಶಾಸಕ ವಿಜಯೇಂದ್ರ ಅವರಿಗೆ ರಾಜ್ಯಧ್ಯಕ್ಷ ಜವಾಬ್ದಾರಿ ಕಬ್ಬಿಣದ ಕಡಲೆಯಂತಾಯಿತು.
ಸವಾಲು ಮೀರಿ ನಾನು ಹೊಣೆ ನಿರ್ವಹಿಸುತ್ತೇನೆ ಎಂದುಕೊಂಡಿದ್ದರೂ ಸಹಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಹಿರಂಗವಾಗಿಯೇ ವಿಜಯೇಂದ್ರ ಪದೋನ್ನತಿ ವಿರೋಧಿಸಿದರು. ವಿಜಯೇಂದ್ರ ಅವರನ್ನು "ತಾತ್ಕಾಲಿಕ" ಅಧ್ಯಕ್ಷ ಎಂದು ಕರೆದರು.
ಸದ್ಯ ಬಿಜೆಪಿಯ ಸಾಂಸ್ಥಿಕ ಚುನಾವಣೆಗಳು ಫೆಬ್ರವರಿ ಅಂತ್ಯಕ್ಕೆ ಕೊನೆಗೊಳ್ಳಲಿವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಿರ್ಣಾಯಕ ಜನಾದೇಶದೊಂದಿಗೆ ಪಕ್ ಮತ್ತೆ ಅಧಿಕಾರ ಹಿಡಿಯಬೇಕು. ಪಕ್ಷವನ್ನು ಗೆಲ್ಲಿಸಲು ಎಲ್ಲರೂ ಜೊತೆಯಾಗಿ ಗೆಲಸ ಮಾಡುವ ಗುರಿ ಹಾಕಿಕೊಳ್ಳಬೇಕು ಎಂದು ಚೌಹಾಣ್ ಅವರು ತಿಳಿಸಿದ್ದಾರೆ.












Click it and Unblock the Notifications