ಬರ ಪರಿಹಾರ : ಸರ್ಕಾರದ ಕಿವಿ ಹಿಂಡಲು ಬಿಜೆಪಿ ಮನವಿ

Posted By:
Subscribe to Oneindia Kannada

ಬೆಂಗಳೂರು, ಮೇ 10 : ಕರ್ನಾಟಕದಲ್ಲಿ ಭೀಕರ ಬರ ಪರಿಸ್ಥಿತಿ ಇರುವುದರಿಂದ ರೈತರ ಸಾಲ ಮನ್ನಾ ಮಾಡವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಬಿಜೆಪಿ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ನಾಯಕರು ಮಂಗಳವಾರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದರು. ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಬಿಜೆಪಿಯವರು ಸಿದ್ಧಪಡಿಸಿದ ವರದಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದರು. [ದಕ್ಷಿಣ ಕನ್ನಡ : ಮಳೆಗಾಗಿ ದೇವಾಲಯಗಳಲ್ಲಿ ಪ್ರಾರ್ಥನೆ]

karnataka

ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಬರ ಪರಿಹಾರ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸಲು ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಕ್ಕೆ ಸಲಹೆ ನೀಡಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿತು. [ಬರ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ ಸರ್ಕಾರ]

ರೈತರ ಸ್ಥಿತಿ ತಿಳಿಸಿದ್ದೇವೆ : ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿ ಬಿ.ಎಸ್.ಯಡಿಯೂರಪ್ಪ ಅವರು, 'ರಾಜ್ಯದಲ್ಲಿನ ವಸ್ತುಸ್ಥಿತಿಯನ್ನು ವರದಿ ಮೂಲಕ ರಾಜ್ಯಪಾಲರಿಗೆ ತಿಳಿಸಿದ್ದೇವೆ. ಕುಡಿಯುವ ನೀರಿನ ಹಾಹಾಕಾರ, ಜಾನುವಾರುಗಳಿಗೆ ಮೇವಿನ ಕೊರತೆ, ವಿದ್ಯುತ್ ಅಭಾವ, ರೈತರ ಅಸಹಾಯಕ ಸ್ಥಿತಿಯ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ' ಎಂದರು.[ಕುಡಿಯುವ ನೀರಿನ ನಿರೀಕ್ಷೆಯಲ್ಲಿ ಖಾಲಿ ಬಿಂದಿಗೆ ಸಾಲು]

'ಭೀಕರ ಬರಗಾಲದ ಹಿನ್ನಲೆಯಲ್ಲಿ ರೈತರ ಕೃಷಿ ಸಾಲವನ್ನು ಮನ್ನಾ ಮಾಡಬೇಕು. ಮುಂದಿನ ಮುಂಗಾರು ಹಂಗಾಮಿಗೆ ರೈತರಿಗೆ ಉಚಿತವಾಗಿ ಗೊಬ್ಬರ ಹಾಗೂ ಬೀಜವನ್ನು ಒದಗಿಸಬೇಕು. ನೀರಿನ ಅಭಾವ ಇರುವ ಕಡೆ ರೈಲುಗಳ ಮೂಲಕ ನೀರನ್ನು ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದೇವೆ' ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka BJP president B.S.Yeddyurappa led delegation met Governor Vajubhai Vala and submit drought situation report.
Please Wait while comments are loading...