• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅಚ್ಚರಿಯ ಹೆಸರು

|

ಬೆಂಗಳೂರು, ಫೆಬ್ರವರಿ 27: ಪ್ರಭಾವಿ ಹುದ್ದೆಯಾದ ಕರ್ನಾಟಕ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅಚ್ಚರಿಯ ಹೆಸರೊಂದು ಕೇಳಿಬಂದಿದೆ.

ಆರ್‌ಎಸ್‌ಎಸ್ ಹಿನ್ನೆಲೆಯ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಿಸುವ ಸಾಧ್ಯತೆ ದಟ್ಟವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಯಡಿಯೂರಪ್ಪ ಇಬ್ಬರೂ ಸಹ ಸುನಿಲ್ ಕುಮಾರ್ ಅವರನ್ನು ಪ್ರಭಾವಿ ಹುದ್ದೆಗೆ ನೇಮಿಸಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಬಿ.ಎಲ್.ಸಂತೋಶ್ ಸಹ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸುನಿಲ್ ಕುಮಾರ್ ಅವರು ಈಗಾಗಲೇ ಸರ್ಕಾರದ ಮುಖ್ಯ ಸಚೇತಕರಾಗಿದ್ದಾರೆ. ಎರಡು ಬಾರಿ ಶಾಸಕರಾಗಿರುವ ಅವರನ್ನು ಸಚಿವರನ್ನಾಗಿ ಮಾಡಬೇಕೆಂಬ ಒತ್ತಡ ಇದೆ. ಆದರೆ ಸಚಿವ ಸ್ಥಾನ ನೀಡುವುದು ಕಷ್ಟಕರವಾಗಿರುವ ಕಾರಣ ಪಕ್ಷದಲ್ಲಿ ಪ್ರಮುಖ ಹುದ್ದೆ ನೀಡಲಾಗುತ್ತಿದೆ.

English summary
Karnataka BJP set to appoint BJP MLA Sunil Kumar as general secretory of the party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X