ಗುಜರಾತ್, ಹಿಮಾಚಲದಲ್ಲಿ ಅರಳಿದ ಕಮಲ, ಕರ್ನಾಟಕದಲ್ಲಿ ಸಂಭ್ರಮಾಚರಣೆ

Recommended Video

      ಗುಜರಾತ್ ಚುನಾವಣ ಫಲಿತಾಂಶ, ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮ | Oneindia Kannada

      ಮೈಸೂರು/ಕಲಬುರಗಿ,/ಬೆಳಗಾವಿ, ಡಿಸೆಂಬರ್ 18: ಇಡೀ ದೇಶವೇ ಎದುರು ನೋಡುತ್ತಿದ್ದ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯ ಫಲಿತಾಂಶ ಅರ್ಧ ಚಿತ್ರಣ ತಿಳಿದಿದ್ದು, ಬಿಜೆಪಿ ಸ್ಪಷ್ಟಬಹುಮತದತ್ತ ಮುನ್ನುಗ್ಗುತ್ತಿದೆ.

      ಈಗಾಗಲೇ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಯ ಫಲಿತಾಂಶದ ಅರ್ಧ ಚಿತ್ರಣ ಹೊರ ಬಿದ್ದಿದ್ದು, ಈ ಎರಡೂ ರಾಜ್ಯಗಳಲ್ಲಿ ಕಮಲ ಅರಳುವ ಎಲ್ಲಾ ಸಾಧ್ಯತೆಗಳಿವೆ. ಈ ಹಿನ್ನೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

      ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿ, ಸಿಹಿ ಹಂಚಿ ಸಂಭ್ರಮಿಸಿದರು

      ಕಲಬುರಗಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

      ಕಲಬುರಗಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

      ಕಲಬುರಗಿಯ ಪಟೇಲ್ ವೃತ್ತದಲ್ಲಿ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ಹಾಗರಗಿ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

      ಕಳೆದ ಚುನಾವಣೆಗಿಂತಲೂ ಹೆಚ್ಚಿನ ಮತ ಗಳಿಸಿದ್ದೇವೆ:ಪ್ರಹ್ಲಾದ್ ಜೋಷಿ
      ಬೆಳಗಾವಿಯಲ್ಲಿ ಕಮಲ ಸಂಭ್ರಮ

      ಬೆಳಗಾವಿಯಲ್ಲಿ ಕಮಲ ಸಂಭ್ರಮ

      ಬೆಳಗಾವಿಯಲ್ಲಿ ಮಾಜಿ ಶಾಸಕ ಅಭಯ ಪಾಟೀಲ ನೇತ್ರತ್ವದಲ್ಲಿ ಕಾರ್ಯಕರ್ತರು ಪರಸ್ಪರ ಬಣ್ಣ ಎರಚಿಕೊಂಡು, ಡೋಲು ಭಾರಿಸಿ, ಕುಣಿದು ಘೋಷಣೆ ಕೂಗಿ ಸಂಭ್ರಮಿಸಿದರು.

      ಮೈಸೂರಿನಲ್ಲೂ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

      ಮೈಸೂರಿನಲ್ಲೂ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

      ನಜರ್ ಬಾದ್ ನಲ್ಲಿ ಬೃಹತ್ ಎಲ್.ಇ.ಡಿ ಪರದೆ ಅಳವಡಿಸಿಕೊಂಡು ಕಾತರದಿಂದ ಫಲಿತಾಂಶವನ್ನು ವೀಕ್ಷಿಸುತ್ತಿರುವ ನೂರಾರು ಬಿಜೆಪಿ ಕಾರ್ಯಕರ್ತರು, ಬಿಜೆಪಿ ಬಹುಮತದತ್ತ ಸಾಗುತ್ತಿರುವುದನ್ನು ಕಂಡು ಸಂಭ್ರಮಾಚರಣೆ ಮಾಡಿದರು.

      ಮೇಯರ್ ರತ್ನ ಲಕ್ಷ್ಮಣ್ ಸಂಭ್ರಮಾಚರಣೆ

      ಮೇಯರ್ ರತ್ನ ಲಕ್ಷ್ಮಣ್ ಸಂಭ್ರಮಾಚರಣೆ

      ಬಿಜೆಪಿ ನಗರಾಧ್ಯಕ್ಷ ಡಾ. ಮಂಜುನಾಥ್ ಹಾಗೂ ಮೈಸೂರು ಉಪ ಮೇಯರ್ ರತ್ನ ಲಕ್ಷ್ಮಣ್ ಅವರು ಈ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+