ಕರ್ನಾಟಕ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಭಾನುವಾರ ಮಹೂರ್ತ ಫಿಕ್ಸ್‌: ರೇಸ್‌ನಲ್ಲಿರುವವರ ಹೆಸರು ತಿಳಿಯಿರಿ

ಬೆಂಗಳೂರು, ಜೂನ್‌ 30: ಜುಲೈ 2 ರ ಭಾನುವಾರದಂದು ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಸಭೆಯಲ್ಲಿ ಕರ್ನಾಟಕ ರಾಜ್ಯ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಭಾಗವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಜುಲೈ 3 ರಂದು ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದೇ ಇರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.

Karnataka BJPs Legislature Party leader

ಬಿಜೆಪಿ ಮೂಲಗಳ ಪ್ರಕಾರ, ಪಕ್ಷವು ತನ್ನ ಹೊಸ ನಾಯಕನನ್ನು ಆಯ್ಕೆ ಮಾಡಲು ಭಾನುವಾರ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದಾರೆ.

ಪಕ್ಷದ ಹಲವು ಹಿರಿಯ ನಾಯಕರು ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದು, 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಈ ಮಹತ್ವದ ನಿರ್ಧಾರ ನಿರ್ಣಾಯಕವಾಗಲಿದೆ ಎಂದು ಹೇಳಲಾಗತ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್‌, ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ ಎನ್ನಲಾಗಿದೆ.

Karnataka BJPs Legislature Party leader

ಏತನ್ಮಧ್ಯೆ, ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯ ಬಿಜೆಪಿಯ 11 ನಾಯಕರಿಗೆ ನೋಟಿಸ್‌ ನೀಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಈ ನಾಯಕರಿಂದ ಸ್ಪಷ್ಟನೆ ಕೇಳಿದ್ದಾರೆ.

11 ಮಂದಿಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಐವರು ಬೆಂಗಳೂರಿನಲ್ಲಿದ್ದರೂ ಇಂದಿನ ಸಭೆಗೆ ಗೈರಾಗಿದ್ದರು.

Karnataka BJPs Legislature Party leader

ಸಭೆಗೆ ಗೈರಾದ ರೇಣುಕಾಚಾರ್ಯ ಹಾಗೂ ಇತರರೊಂದಿಗೆ ಖುದ್ದು ಮಾತನಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.

ಬಿಜೆಪಿ ನಾಯಕರ ಮುಂದೆ ತಮ್ಮ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿದ ನಾಯಕರಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಸಂಸದ ಪ್ರತಾಪಸಿಂಹ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದ್ದಾರೆ.

ಪಕ್ಷಕ್ಕೆ ಮುಜುಗರ ಉಂಟು ಮಾಡುವ ಬಹಿರಂಗ ಹೇಳಿಕೆಗಳನ್ನು ನೀಡಬೇಡಿ ಎಂದು ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಪಕ್ಷದ ಮುಖಂಡರಿಗೆ ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+