ಗಡಿ ವಿವಾದ: ಮಹಾರಾಷ್ಟ್ರ ನಾಯಕರದ್ದು ಅಸಂಬದ್ದ ಹೇಳಿಕೆ: ಸಿಎಂ ಟೀಕೆ
ಬೆಳಗಾವಿ, ಡಿಸೆಂಬರ್ 21: ಮಹಾರಾಷ್ಟ್ರದ ವಿರೋಧ ಪಕ್ಷದ ಶಾಸಕರು ಶಾಸನಸಭೆಯಲ್ಲಿ ಮತ್ತು ಹೊರಗಡೆ ಹದ್ದುಮೀರಿ, ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ. ಇದನ್ನು ನೋಡಿದರೆ ಅವರು ಮಾನಸಿಕ ಸಮತೋಲನ ಕಳೆದುಕೊಂಡಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆ ರಾಜ್ಯದ ಅಲ್ಲಿನ ವಿರೋಧ ಪಕ್ಷಗಳು ಇದೇ ವಿಚಾರದ ಮೇಲೆ ಅವರ ರಾಜಕಾರಣ ಮಾಡಲು ಹೊರಟಿದ್ದಾರೆ. ಹಿಂದೆಯೂ ಕಾಂಗ್ರೆಸ್ ನಾಯಕರು ರಾಜಕೀಯ ಲಾಭ ಪಡೆಯಲು ಹೋಗಿ ವಿಫಲರಾಗಿದ್ದಾರೆ. ಎರಡೂ ರಾಜ್ಯಗಳ ಜನ ಶಾಂತಿ ಸಾಮರಸ್ಯ ಕಾಪಾಡಿಕೊಂಡು, ವ್ಯಾಪಾರ ವ್ಯವಹಾರ, ಓಡಾಟ ಮಾಡುತ್ತಿರುವಾಗ ನೆರೆ ರಾಜ್ಯದವರು ಕರ್ನಾಟಕ ರಾಜ್ಯ ಪ್ರವೇಶಿಸಲು ಹೊರಟಿದ್ದಾರೆ ಎಂದರು.
ಜನರ ಬೆಂಬಲವಿಲ್ಲದಿದ್ದರೂ, ರಾಜಕೀಯ ಪಕ್ಷಗಳ ಧ್ವಜ ಹಿಡಿದು ರಾಜ್ಯ ಪ್ರವೇಶಕ್ಕೆ ಮುಂದಾಗಿದ್ದಾರೆ. ಇದನ್ನು ಗಮನಿಸಿದರೆ ಇದು ರಾಜಕೀಯ ಪ್ರೇರಿತ ಎಂದು ಸ್ಪಷ್ಟವಾಗುತ್ತದೆ. ರಾಜ್ಯದ ಕಾಂಗ್ರೆಸ್ ನಾಯಕರು ಮಹಾರಾಷ್ಟ್ರದಲ್ಲಿನ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಬೇಕು. ಇದು ಬೀದಿಯಲ್ಲಿ ಇತ್ಯರ್ಥವಾಗುವ ವಿಚಾರವಲ್ಲ ಎಂದು ಅವರು ಸಲಹೆ ನೀಡಿದರು.

ಚೀನಾ ಸೈನಿಕರಂತೆ ಹಿಮ್ಮೆಟ್ಟಿಸುತ್ತೇವೆ
ಮಹಾರಾಷ್ಟ್ರದವರೇ ಸುಪ್ರೀಂ ಕೋರ್ಟಿಗೆ ಹೋಗಿದ್ದಾರೆ. ಅವರಿಗೆ ತಮ್ಮ ದಾವೆ ದುರ್ಬಲವಾಗಿದೆ ಎಂದು ಅರಿವಾಗಿದೆ. ಅದಕ್ಕಾಗಿಯೇ ಇಂತಹ ಪರಿಸ್ಥಿತಿ ಸೃಷ್ಟಿಸಿ ಲಾಭ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ, ಆದರೆ ಅದು ಅದು ಯಶಸ್ವಿಯಾಗುವುದಿಲ್ಲ. ಇದು ಮಹಾರಾಷ್ಟ್ರದ ವಿರೋಧ ಪಕ್ಷದ ಅಪ್ರಬುದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅವರು ಚೀನಾ ರೀತಿ ಆಕ್ರಮಣ ಮಾಡುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ಚೀನಾ ಆಕ್ರಮಣವನ್ನು ನಮ್ಮ ಸೈನಿಕರು ಹಿಮ್ಮೆಟ್ಟಿಸಿದಂತೆ, ಅವರನ್ನು ಹಿಮ್ಮೆಟ್ಟಿಸುವ ಶಕ್ತಿ ಕನ್ನಡಿಗರಿಗೆ ಇದೆ. ನಾವು ಒಂದೇ ದೇಶದಲ್ಲಿರುವವರು. ಅದಾಗ್ಯೂ ಅವರು ಬಳಸಿದ ಪದಪ್ರಯೋಗಕ್ಕೆ ಉತ್ತರ ನೀಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ಇಲ್ಲ
ಕಾಂಗ್ರೆಸ್ ನಾಯಕರು ಬೆಳಗ್ಗೆ ಗಡಿ ವಿಚಾರವಾಗಿ ಮಾತನಾಡಿದ್ದಾರೆ. ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ಅದಕ್ಕೆ ಬೆಲೆ ಇಲ್ಲವೇ ಎಂದು ಹೇಳಿದ್ದಾರೆ. ಈ ವಿಚಾರವನ್ನು ಕೇಂದ್ರದ ಗೃಹ ಸಚಿವರ ಗಮನಕ್ಕೆ ತರಲಾಗುವುದು. ಅಂದಿನ ಸಭೆಯಲ್ಲಿ ಎರಡೂ ರಾಜ್ಯಗಳು ಶಾಂತಿ ವ್ಯವಸ್ಥೆಯನ್ನು ಕಾಪಾಡಬೇಕೆಂಬ ನಿರ್ಣಯದಂತೆ ರಾಜ್ಯದಿಂದ ಶಾಂತಿ ಸುವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ. ಒಂದೂ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲಾಗಿದೆ. ಶಾಂತಿ ಭಂಗವಾಗಲು ಬಿಟ್ಟಿಲ್ಲ. ಜನಸಾಮಾನ್ಯರ ಓಡಾಟ ಸಾಮಾನ್ಯವಾಗಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಆಗುವುದು ಅಷ್ಟೇ ಮುಖ್ಯ. ಯಾವುದೇ ಕಾನೂನು ಬಾಹಿರ ಚಟುವಟಿಕೆಗೆ ಸರ್ಕಾರ ಅವಕಾಶ ಕೊಡುವುದಿಲ್ಲ. ನಾಳೆ ವಿಧಾನಸಭೆಯಲ್ಲಿ ಈ ಬಗ್ಗೆ ಸುದೀರ್ಘವಾದ ಉತ್ತರವನ್ನೂ ಕೊಟ್ಟು ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ :
ಮಹಾರಾಷ್ಟ್ರದಿಂದ ನೀರು ಬಿಡುವುದಿಲ್ಲ ಹಾಗೂ ಅಣೆಕಟ್ಟನ್ನು ಕೂಡ ಎತ್ತರಿಸಲಾಗುವುದು ಎಂದು ಮಹಾರಾಷ್ಟ್ರದ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಉತ್ತರಿಸಿದ ಬೊಮ್ಮಾಯಿಯವರು, ಎಲ್ಲ ನದಿಗಳು, ಅಂತಾರಾಜ್ಯ ನದಿಗಳು ಅಂತಾರಾರಾಜ್ಯ ಜಲ ವಿವಾದ ಕಾಯ್ದೆಯಡಿಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಮಹಾರಾಷ್ಟ್ರದ ನಾಯಕರಿಗೂ ಈ ಬಗ್ಗೆ ಅರಿವಿದೆ. ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅತಿಹೆಚ್ಚು ಮಳೆ ಬಂದಾಗ ನೀರನ್ನು ನಿಲ್ಲಿಸಲು ಸಾಧ್ಯವೇ. ಆಲಮಟ್ಟಿ ಜಲಾಶಯ ಎತ್ತರ 524.5 ಎಂದು ಟ್ರಿಬ್ಯೂನಲ್ ನಲ್ಲಿ ಆದೇಶವಾಗಿದೆ. ಈ ಬಗ್ಗೆ ಅಧಿಸೂಚನೆ ಆದ ತಕ್ಷಣ ಈ ಕೆಲಸವನ್ನೂ ಪ್ರಾರಂಭಿಸಲಾಗುವುದು ಎಂದರು.

ಆಯೋಗದ ಅಧ್ಯಕ್ಷ ಸಂಪರ್ಕದಲ್ಲಿದ್ದೇನೆ
ಪಂಚಮಸಾಲಿ ಸಮಾಜದವರು ತಮಗೆ 2ಎ ಮೀಸಲಾತಿ ನೀಡಲು ಆಗ್ರಹಿದ್ದರು. ಗುರುವಾರ ಅಂತಿಮ ಗಡುವು ನೀಡಿದ್ದಾರೆ. ಈ ಬಗ್ಗೆ ಉತ್ತರಿಸಿ ಗಡುವು ನೀಡಿದವರು ನಮ್ಮವರೇ, ನಾನು ಹಿಂದುಳಿದ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಸಂಪರ್ಕದಲ್ಲಿದ್ದೇನೆ. ಕೂಡಲೇ ಈ ಮೀಸಲಾತಿ ಬೇಡಿಕೆ ಸಂಬಂಧ ವರದಿ ಸಲ್ಲಿಕೆಯಾದ ತಕ್ಷಣವೇ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications