BPL: ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್
BPL: ರಾಜ್ಯದಲ್ಲಿ ಸದ್ಯ ಆಹಾರ ಇಲಾಖೆ ಅನರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುತ್ತಿದೆ. ಈ ನಡುವೆಯೇ ಇಂತಹವರೆಲ್ಲರನ್ನು ಬಿಗ್ ಶಾಕ್‌ವೊಂದು ಕಾದಿದ್ದು, ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿಯಿಂದ ಹೊರಗಿಡಲಾಗಿದೆ. ಹಾಗಾದ್ರೆ, ಯಾರನ್ನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುತ್ತದೆ. ಆದರೆ, ಇದನ್ನು ಶ್ರೀಮಂತರು ಅಂದರೆ, ಅನರ್ಹರು ಸಹ ಪಡೆದುಕೊಂಡಿದ್ದು, ಇಂತಹವರ ವಿರುದ್ಧ ಸರ್ಕಾರ ಸಮರ ಸಾರಿದೆ. ಈ ನಡುವೆಯೇ ಕೆಳಗೆ ನೀಡಲಾಗಿರುವ ಇಂತಹವರನ್ನು ಬಿಪಿಎಲ್/ಅಂತ್ಯೋದಯ ಕಾರ್ಡ್‌ನಿಂದ ಹೊರಗಿಡಲಾಗಿದೆ.

* ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಹೊಂದಿರುವ ಜಮೀನು ಸೇರಿಸಿದಾಗ 7 ಹೆಕ್ಟೇರ್‌ಗೂ ಅಧಿಕ ಜಮೀನು ಇದ್ದಲ್ಲಿ ಅಂತಹವರು ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು ಎಂದು ತಿಳಿಸಲಾಗಿದೆ.
* ಪಡಿತರ ಚೀಟಿಯ ಯಾವುದೇ ಸದಸ್ಯ 4 ಚಕ್ರ ವಾಹನ ಹೊಂದಿದ್ದಲ್ಲಿ ಅಂತಹವರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು(ತಂದೆ/ ತಾಯಿ/ಪತ್ನಿ/ಅವಿವಾಹಿತ ಮಕ್ಕಳು) ಬಿಪಿಎಲ್/ ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
* ಜಿಎಸ್‌ಟಿ ಅಥವಾ ಆದಾಯ ತೆರಿಗೆ ಪಾವತಿಸುತ್ತಿರುವ ಯಾವುದೇ ವ್ಯಕ್ತಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ ತಾಯಿ/ಹೆಂಡತಿ/ಅವಿವಾಹಿತ ಮಕ್ಕಳು) ಬಿಪಿಎಲ್/ ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
* ಸರ್ಕಾರಿ ನೌಕರಿ ಮಾಡುತ್ತಿರುವ ಯಾವುದೇ ವ್ಯಕ್ತಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ತಾಯಿ/ಹೆಂಡತಿ/ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
* ಸಹಕಾರಿ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಸಿಬ್ಬಂಧಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು) ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
* ವೃತ್ತಿಪರ ನೌಕರರು (ವೈದ್ಯರು, ಎಂಜಿನಿಯರ್, ವಕೀಲರು, ಇತರರು) ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
* ನೋಂದಾಯಿತ ಗುತ್ತಿಗೆದಾರರು, ಎಪಿಎಂಸಿ ಟ್ರೇಡರ್‌ಗಳು, ಕಮಿಷನ್ ಏಜಂಟರು, ಬೀಜ ಮತ ಗೊಬ್ಬರ ಡೀಲರ್‌ಗಳು ಇತ್ಯಾದಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರ (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀ ಹೊಂದಲು ಅನರ್ಹರು.
* ಅನುದಾನಿತ ಶಾಲಾ ಕಾಲೇಜುಗಳ ನೌಕರರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
* ಸರ್ಕಾರಿ ಸ್ವಾಮ್ಯದ ಉದ್ಯಮಗಳು/ ಮಂಡಳಿಗಳು /ನಿಗಮಗಳ ಖಾಯಂ ನೌಕರರು, ಸ್ವಾಯ ಸಂಸ್ಥೆ/ ಮಂಡಳಿಯ ನೌಕರರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು. ಹೀಗೆ ಇಂತಹವರೆಲ್ಲರನ್ನು ಬಿ.ಪಿ.ಎಲ್/ಅಂತ್ಯೋದಯದಿಂದ ಹೊರಗಿಡಲಾಗುತ್ತದೆ ಎಂದು ತಿಳಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications