BPL Card: ಹೊಸ ಬಿಪಿಎಲ್‌ ಕಾರ್ಡ್‌ ನಿರೀಕ್ಷೆಯಲ್ಲಿದ್ದರಿಗೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟ ಸಚಿವ ಕೆ.ಎಚ್‌.ಮುನಿಯಪ್ಪ

BPL Ration Card: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಪಡಿತ ಚೀಟಿಗಳನ್ನು ರದ್ದುಪಡಿಸುವ ಕಾರ್ಯವನ್ನು ಸರ್ಕಾರ ಮುಂದುವರೆಸಿದೆ. ಈ ನಡುವೆಯೇ ಹೊಸ ಕಾರ್ಡ್‌ ನಿರೀಕ್ಷೆಯಲ್ಲಿ ಇದ್ದವರಿಗೆ ಗುಡ್‌ ನ್ಯೂಸ್‌ವೊಂದನ್ನು ನೀಡಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಸದ್ಯ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸುವ ಮಹತ್ವದ ಕಾರ್ಯವನ್ನು ರಾಜ್ಯ ಸರ್ಕಾರ ಮುಂದುವರೆಸಿದೆ. ಇದರ ಉದ್ದೇಶ ಬಿಪಿಎಲ್‌ ಕಾರ್ಡ್‌ನಿಂದ ವಂಚಿತರಾದ ಅರ್ಹರಿಗೆ ಸಿಗಬೇಕಾದ ಸೌಲಭ್ಯ ಒದಗಿಸುವುದಾಗಿದೆ. ಈ ಕಾರ್ಡ್‌ ರದ್ದಿನ ನಡುವೆಯೇ ಹೊಸ ಬಿಪಿಎಲ್‌ ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ ನ್ಯೂಸ್‌ ನೀಡಿದೆ.

Karnataka BPL Ration Card Update Fake Cards Cancelled New Application submission from October

ಅನರ್ಹರ ಬಳಿಯ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಅಂತಹವರನ್ನು ಎಪಿಎಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಈ ಮಹತ್ವದ ಕಾರ್ಯ ಕೈಗೊಂಡಿರುವ ಕಾರಣ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಕೆಯನ್ನು ನಿಲ್ಲಿಸಲಾಗಿತ್ತು. ಆದರೆ ಇದೀಗ ಹೊಸ ಬಿಪಿಎಲ್ ಪಡಿತರ ಚೀಟಿಗಳಿಗೆ ಅರ್ಜಿ ಸ್ವೀಕಾರ, ವಿತರಣೆ ಪ್ರಕ್ರಿಯೆ ಅಕ್ಟೋಬರ್‌ನಲ್ಲಿ ಅಂದರೆ ಕೆಲವೇ ದಿನಗಳಲ್ಲಿ ಆರಂಭ ಆಗಲಿದೆ ಎಂದು ಆಹಾರ ಸಚಿವ ಕೆ. ಎಚ್‌.ಮುನಿಯಪ್ಪ ಅವರು ತಿಳಿಸಿದರು.

ಉಡುಪಿ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ 7.70 ಲಕ್ಷ ಅನರ್ಹ ಕಾರ್ಡುಗಳು ಇವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈಗಾಗಲೇ ರಾಜ್ಯದಲ್ಲಿ 13 ಲಕ್ಷ ಅನರ್ಹ ಕಾರ್ಡುಗಳನ್ನು ಹುಡುಕಿ, ಪಟ್ಟಿ ಸಿದಪಡಿಸಿದೇವೆ. ಅನರ್ಹ ಬಿಪಿಎಲ್ ಕಾರ್ಡುದರು ಇದ್ದರೆ, ಅಂತಹವರು ಮುಂದೆ ಬಂದು ಕಾರ್ಡುಗಳನ್ನು ಎಪಿಎಲ್‌ಗೆ ವರ್ಗಾವಣಗೆ ಮಾಡಿಸಬೇಕು. ಇದರಿಂದ ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ಸಹಾಯ ಆಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಪಡಿತರ ಚೀಟಿಗಳನ್ನು ರದ್ದು ಮಾಡುವುದಿಲ್ಲ. ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್‌ಗಳಿವೆ. ಈ ಪೈಕಿ 4.50 ಕೋಟಿ ಜನರು ಫಲಾನುಭವಿಗಳು ಇದ್ದಾರೆ. ಬಿಪಿಎಲ್ ಕಾರ್ಡ್ ಪರೀಕ್ಷರಣೆಯಲ್ಲಿ ತೊಡಗಿದ್ದೇವೆ. ಅನರ್ಹರನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದರು.

ನಾವು ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದುಪಡಿಸುವುದಿಲ್ಲ. ಸರ್ಕಾರದ ಮಾನದಂಡ ಹೊರತುಪಡಿಸಿ ಪರಿಷ್ಕರಣೆ ಮಾಡುವುದಿಲ್ಲ. ಹೊಸ ಬಿಪಿಎಲ್ ಕಾರ್ಡ್‌ದಾರರಿಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು. ಈಗಾಗಲೇ ಸರ್ಕಾರವೇ ಅರ್ಹರಲ್ಲದವರನ್ನು ಗುರುತಿಸಿ ಅಂತಹವರನ್ನು ಎಪಿಎಲ್‌ಗೆ ವರ್ಗಾವಣೆ ಮಾಡುವ ಕೆಲಸವನ್ನು ಮುಂದುವರೆಸಿದೆ.

ಸಾಮಾನ್ಯವಾಗಿ ಬಿಪಿಎಲ್‌ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಅನರ್ಹರು ಕೂಡ ಬಿಪಿಎಲ್ ಕಾರ್ಡ್ ಹೊಂದಿದ್ದು, ಬಡವರಿಗೆ ಸಿಗಬೇಕಾದ ಅನ್ನವನ್ನು ಕಿತ್ತುಕೊಳ್ಳುತ್ತಿದ್ದರು. ಆದರೆ, ಇದೀಗ ಇಂತಹವರ ವಿರುದ್ಧ ಸರ್ಕಾರ ಇದೀಗ ಸಮರ ಸಾರುತ್ತಿದೆ. ಈ ಮೂಲಕ ಅನರ್ಹರ ಬಳಿಯ ಬಿಪಿಎಲ್‌ ಕಾರ್ಡ್‌ ರದ್ದುಪಡಿಸಿ ಎಪಿಎಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಹೀಗೆ ಬಡವರಿಗೆ ಸೇರಬೇಕಾದ ಸೌಲಭ್ಯಗಳನ್ನು ಒದಗಿಸಲು ಮುಂದಾಗಿದೆ. ಈ ಹಿಂದೆಯೇ ಅನರ್ಹರಿಗೆ ಶಾಕ್‌ ಕೊಡಲು ಸರ್ಕಾರ ಮುಂದಾಗಿದ್ದು, ಹಲವರ ವಿರೋಧದಿಂದ ಹಿಂದೆ ಸರಿದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+