ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು?

|
Google Oneindia Kannada News

ಬೆಂಗಳೂರು, ಮಾರ್ಚ್, 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2016-17ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯಾಗಿ 4ನೇ ಬಾರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ.

ಹಾಗಾದರೆ ಸಿಎಂ ಸಿದ್ದರಾಮಯ್ಯ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳೇನು? ಎಂಬುದರ ಸಂಪೂರ್ಣ ವಿವರ ಇಲ್ಲಿದೆ.[ಕೈಗಾರಿಕಾ ಕ್ಷೇತ್ರಕ್ಕೆ ಸಿಕ್ಕಿದ್ದೇನು]

education

*ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗೆ 17,373 ಕೋಟಿ. ಉನ್ನತ ಶಿಕ್ಷಣಕ್ಕೆ 4651 ಕೋಟಿ ಅನುದಾನ ಮೀಸಲು

* ಬೀದರ್‌ನಲ್ಲಿ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು. ಧಾರವಾಡದ ಕರ್ನಾಟಕ ವಿವಿಯಲ್ಲಿ ಎಂ.ಎಂ.ಕಲಬುರ್ಗಿ ಹೆಸರಿನಲ್ಲಿ ಸಂಶೋಧನಾ ಸಂಸ್ಥೆ ಮತ್ತು ಪ್ರಶಸ್ತಿ.

* ಉನ್ನತ ಶಿಕ್ಷಣ ಇಲಾಖೆಗೆ 4,651 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಿಕೆ.[ಬೆಂಗಳೂರಿಗೆ ಸಿಕ್ಕಿದ್ದೇನು]

* ಡಿಪ್ಲೋಮಾ ಮತ್ತು ಪಾಲಿಟೆಕ್ನಿಕ್‌ ಪರೀಕ್ಷೆ ಯನ್ನು ಪ್ರಥಮ ದರ್ಜೆಯಲ್ಲಿ ಮೊದಲನೇ ಸಾರಿ ಉತ್ತೀರ್ಣರಾದವರಿಗೆ 20 ಸಾವಿರ ಪ್ರೋತ್ಸಾಹ ಧನ .ಸಿಎ/ಸಿಡಬ್ಲೂಎ ಪರೀಕ್ಷೆ ಪಾಸಾದವರಿಗ 50 ಸಾವಿರದಿಂದ 1 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಿಕೆ.

* ಹಂಪಿ ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆ. 5 ಸರ್ಕಾರಿ ಕಾಲೇಜುಗಳಲ್ಲಿ ಎಂಜಿನಿಯರಿಂಗ್ ಶಿಕ್ಷಣ. ಕರ್ನಾಟಕ ಚಿತ್ರಕಲಾ ಪರಿಷತ್ ಗೆ 1.5 ಕೋಟಿ ರೂಪಾಯಿ ಅನುದಾನ.

* ರಾಜ್ಯದ ಸರ್ಕಾರಿ ಕಾಲೇಜುಗಳಿಗೆ ಹೆಚ್ಚುವರಿ 10 ಕೋಟಿ ಅನುದಾನ.

* ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಕ್ಷೇತ್ರಕ್ಕೆ 17,373 ಕೋಟಿ ಅನುದಾನ ಬಿಸಿಯೂಟ ತಯಾರಿಕೆದಾರರಿಗೆ ಮಾಸಿಕ ಗೌರವ 300 ರೂ. ಹೆಚ್ಚಳ. ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಯೋಗ ಶಿಕ್ಷಣಕ್ಕೆ ಪ್ರೋತ್ಸಾಹ.

English summary
Karnataka Budget 2016-17 : Chief Minister and Finance Minister Siddaramaiah preset 2016-17 budget on Friday, March 18, 2016. Here is the list which are reflects the Grants for Education Sector.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X