Get Updates
Get notified of breaking news, exclusive insights, and must-see stories!

ಬಜೆಟ್ 2017: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ

ಬೆಂಗಳೂರು, ಮಾರ್ಚ್ 15: ಖಾಸಗಿ ವಲಯದ ಉದ್ದಿಮೆಗಳಲ್ಲಿ 'ಸಿ' ಮತ್ತು 'ಡಿ' ಗುಂಪಿನ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಈ ವಿಚಾರವನ್ನು 2017ರ ರಾಜ್ಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.[ಬಜೆಟ್ LIVE: ರೈತರ ಸಾಲ ಮನ್ನಾ ಇಲ್ಲ, ಎಣ್ಣೆ ಬೆಲೆ ಇಳಿದಿಲ್ಲ]

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ನಿಗದಿಗೊಳಿಸಬೇಕೆಂಬ ಬಹು ವರ್ಷಗಳ ಬೇಡಿಕೆಗೆ ರಾಜ್ಯ ಸರ್ಕಾರ ಈಗ ಸ್ಪಂದಿಸಿದೆ.[ಬಜೆಟ್ 2017: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ]

ಇದಲ್ಲದೆ, ಕಾರವಾರದಲ್ಲಿ 1,500 ಕೋಟಿ ರು. ವೆಚ್ಛದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸುಸಜ್ಜಿತ ಬಂದರು ನಿರ್ಮಾಣಕ್ಕೆ ಈ ಬಾರಿಯ ಹಣಕಾಸು ವರ್ಷದಲ್ಲಿ ಚಾಲನೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.[ಬಜೆಟ್ 2017: 58,000 ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ]

Karnataka Budget 2017: 100% reservation for Kannadigas in private sector

ಐತಿಹಾಸಿಕ ನಗರ ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಆರೋಗ್ಯ ವಿಚಾರದಲ್ಲಿ ಆ ಜಿಲ್ಲೆಯ ಜನತೆಗೆ ಸಹಾಯವಾಗುವ ನಿಟ್ಟಿನಲ್ಲಿ ಅಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ರಾಮನಗರ, ದಾವಣಗೆರೆ, ಕೋಲಾರಗಳಲ್ಲಿ ಹೈಟೆಕ್ ಆಸ್ಪತ್ರೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.[ಬಜೆಟ್ 2017: ನಮ್ಮ ಬೆಂಗಳೂರಿಗೆ ಸಿಕ್ಕಿದ್ದೇನು?]

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ವ್ಯಾಸಂಗ ಮಾಡಿದ್ದ ಲಂಡನ್ ಎಕನಾಮಿಕ್ಸ್ ಸಂಶೋಧನಾ ಸಂಸ್ಥೆಯ ಮಾದರಿಯಲ್ಲೇ ಬೆಂಗಳೂರಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಆರ್ಥಿಕ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.[ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೇನಿದೆ?]

ರಾಯಚೂರಿನಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಹೈದರಾಬಾದ್ ಕರ್ನಾಟಕದಲ್ಲಿನ ವಿದ್ಯಾರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.[ಕಾರವಾರದಲ್ಲಿ 1,500 ಕೋಟಿ ರು. ವೆಚ್ಛದಲ್ಲಿ ಹೊಸ ಬಂದರು]

ರಾಜ್ಯದ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಸನ, ಚಾಮರಾಜ ನಗರ ಹಾಗೂ ಯಾದಗಿರಿಯಲ್ಲಿ ಡಿಪ್ಲೊಮಾ ಕಾಲೇಜು ಸ್ಥಾಪಿಸಲಾಗುವುದು ಎಂದು ತಿಳಿಸಿದರು.[ಬಜೆಟ್ 2017: ರಾಮನಗರ, ದಾವಣಗೆರೆ, ಕೋಲಾರಗಳಲ್ಲಿ ಹೈಟೆಕ್ ಆಸ್ಪತ್ರೆ]

ಇದಲ್ಲದೆ, ರಾಜ್ಯದಲ್ಲಿ ಕುರಿ ಸಾಕಾಣಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬಳ್ಳಾರಿಯ ಕುರಿಕುಪ್ಪೆಯಲ್ಲಿ ಕುರಿ ಸಂವರ್ಧನೆ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.[ಕರ್ನಾಟಕ ಬಜೆಟ್ ನ ಪ್ರಮುಖಾಂಶಗಳು]

ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.[ಬೆಂಗಳೂರಿನ ಅಂಬೇಡ್ಕರ್ ಆರ್ಥಿಕ ಸಂಶೋಧನಾ ಕೇಂದ್ರ]

ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕ್ಯಾಂಟೀನ್ ಗಳಿಂದ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಸಿಗುವ ವ್ಯವಸ್ಥೆ ಜಾರಿಯಾಗಲಿದೆ.[ಬಜೆಟ್ 2017: ದ್ವಿಚಕ್ರವಾಹನ ಖರೀದಿ ದುಬಾರಿ, ಮದ್ಯ ಬೆಲೆ ಹೆಚ್ಚಳ]

ಇದಲ್ಲದೆ, 21 ಜಿಲ್ಲೆಗಳಿಂದ 49 ಹೊಸ ತಾಲೂಕುಗಳನ್ನು ರಚಿಸಲು ಸರ್ಕಾರ ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.[ಬಜೆಟ್ 2017: ಬಳ್ಳಾರಿ ಜಿಲ್ಲೆಯಲ್ಲಿ ಕುರಿ ಸಂವರ್ಧನಾ ಕೇಂದ್ರ]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+