ಬಜೆಟ್ 2017: ರಾಮನಗರ, ದಾವಣಗೆರೆ, ಕೋಲಾರಗಳಲ್ಲಿ ಹೈಟೆಕ್ ಆಸ್ಪತ್ರೆ
ಬೆಂಗಳೂರು, ಮಾರ್ಚ್ 15: ರಾಮನಗರ, ದಾವಣಗೆರೆ, ಕೋಲಾರಗಳಲ್ಲಿ ಹೈಟೆಕ್ ಆಸ್ಪತ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ವಿಚಾರವನ್ನು 2017ರ ರಾಜ್ಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದಲ್ಲದೆ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ವ್ಯಾಸಂಗ ಮಾಡಿದ್ದ ಲಂಡನ್ ಎಕನಾಮಿಕ್ಸ್ ಸಂಶೋಧನಾ ಸಂಸ್ಥೆಯ ಮಾದರಿಯಲ್ಲೇ ಬೆಂಗಳೂರಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಆರ್ಥಿಕ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.[ಚಿತ್ರದುರ್ಗಕ್ಕೆ ವೈದ್ಯಕೀಯ ಕಾಲೇಜು ಮಂಜೂರು]

ರಾಯಚೂರಿನಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಹೈದರಾಬಾದ್ ಕರ್ನಾಟಕದಲ್ಲಿನ ವಿದ್ಯಾರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.[ಕರ್ನಾಟಕ ಬಜೆಟ್ ನ ಪ್ರಮುಖಾಂಶಗಳು]
ರಾಜ್ಯದ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಸನ, ಚಾಮರಾಜ ನಗರ ಹಾಗೂ ಯಾದಗಿರಿಯಲ್ಲಿ ಡಿಪ್ಲೊಮಾ ಕಾಲೇಜು ಸ್ಥಾಪಿಸಲಾಗುವುದು ಎಂದು ತಿಳಿಸಿದರು.[ಬೆಂಗಳೂರಿನ ಅಂಬೇಡ್ಕರ್ ಆರ್ಥಿಕ ಸಂಶೋಧನಾ ಕೇಂದ್ರ]
ಇದಲ್ಲದೆ, ರಾಜ್ಯದಲ್ಲಿ ಕುರಿ ಸಾಕಾಣಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬಳ್ಳಾರಿಯ ಕುರಿಕುಪ್ಪೆಯಲ್ಲಿ ಕುರಿ ಸಂವರ್ಧನೆ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.[ಬಜೆಟ್ 2017: ದ್ವಿಚಕ್ರವಾಹನ ಖರೀದಿ ದುಬಾರಿ, ಮದ್ಯ ಬೆಲೆ ಹೆಚ್ಚಳ]
ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.[ಹಾಸನ, ಚಾಮರಾಜ ನಗರ, ಯಾದಗಿರಿಯಲ್ಲಿ ಡಿಪ್ಲೊಮಾ ಕಾಲೇಜು]
ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕ್ಯಾಂಟೀನ್ ಗಳಿಂದ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಸಿಗುವ ವ್ಯವಸ್ಥೆ ಜಾರಿಯಾಗಲಿದೆ.[ಬಜೆಟ್ 2017: ಬಳ್ಳಾರಿ ಜಿಲ್ಲೆಯಲ್ಲಿ ಕುರಿ ಸಂವರ್ಧನಾ ಕೇಂದ್ರ]
ಇದಲ್ಲದೆ, 21 ಜಿಲ್ಲೆಗಳಿಂದ 49 ಹೊಸ ತಾಲೂಕುಗಳನ್ನು ರಚಿಸಲು ಸರ್ಕಾರ ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.[ಬಜೆಟ್ 2017: ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ 2000 ಪಿಂಚಣಿ]
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications