ಬಜೆಟ್ 2017: ಚಿತ್ರದುರ್ಗಕ್ಕೆ ವೈದ್ಯಕೀಯ ಕಾಲೇಜು ಮಂಜೂರು
ಬೆಂಗಳೂರು, ಮಾರ್ಚ್ 15: ಐತಿಹಾಸಿಕ ನಗರ ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ವಿಚಾರವನ್ನು 2017ರ ರಾಜ್ಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಆರೋಗ್ಯ ವಿಚಾರದಲ್ಲಿ ಆ ಜಿಲ್ಲೆಯ ಜನತೆಗೆ ಸಹಾಯವಾಗುವ ನಿಟ್ಟಿನಲ್ಲಿ ಅಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ರಾಮನಗರ, ದಾವಣಗೆರೆ, ಕೋಲಾರಗಳಲ್ಲಿ ಹೈಟೆಕ್ ಆಸ್ಪತ್ರೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.[ಬಜೆಟ್ 2017: ದ್ವಿಚಕ್ರವಾಹನ ಖರೀದಿ ದುಬಾರಿ, ಮದ್ಯ ಬೆಲೆ ಹೆಚ್ಚಳ]

ಇದಲ್ಲದೆ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ವ್ಯಾಸಂಗ ಮಾಡಿದ್ದ ಲಂಡನ್ ಎಕನಾಮಿಕ್ಸ್ ಸಂಶೋಧನಾ ಸಂಸ್ಥೆಯ ಮಾದರಿಯಲ್ಲೇ ಬೆಂಗಳೂರಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಆರ್ಥಿಕ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಯಚೂರಿನಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಹೈದರಾಬಾದ್ ಕರ್ನಾಟಕದಲ್ಲಿನ ವಿದ್ಯಾರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.[LIVE: ಬೆಂಗಳೂರಿನ ಅರ್ಬನ್ ರೈಲ್ವೆಗೆ 345 ಕೋಟಿ ರು]
ರಾಜ್ಯದ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಸನ, ಚಾಮರಾಜ ನಗರ ಹಾಗೂ ಯಾದಗಿರಿಯಲ್ಲಿ ಡಿಪ್ಲೊಮಾ ಕಾಲೇಜು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಇದಲ್ಲದೆ, ರಾಜ್ಯದಲ್ಲಿ ಕುರಿ ಸಾಕಾಣಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬಳ್ಳಾರಿಯ ಕುರಿಕುಪ್ಪೆಯಲ್ಲಿ ಕುರಿ ಸಂವರ್ಧನೆ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕ್ಯಾಂಟೀನ್ ಗಳಿಂದ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಸಿಗುವ ವ್ಯವಸ್ಥೆ ಜಾರಿಯಾಗಲಿದೆ.
ಇದಲ್ಲದೆ, 21 ಜಿಲ್ಲೆಗಳಿಂದ 49 ಹೊಸ ತಾಲೂಕುಗಳನ್ನು ರಚಿಸಲು ಸರ್ಕಾರ ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.












Click it and Unblock the Notifications