ಬಜೆಟ್ 2017: ಕಾರವಾರದಲ್ಲಿ 1,500 ಕೋಟಿ ರು. ವೆಚ್ಛದಲ್ಲಿ ಹೊಸ ಬಂದರು
ಬೆಂಗಳೂರು, ಮಾರ್ಚ್ 15: ಕಾರವಾರದಲ್ಲಿ 1,500 ಕೋಟಿ ರು. ವೆಚ್ಛದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸುಸಜ್ಜಿತ ಬಂದರು ನಿರ್ಮಾಣಕ್ಕೆ ಈ ಬಾರಿಯ ಹಣಕಾಸು ವರ್ಷದಲ್ಲಿ ಚಾಲನೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ವಿಚಾರವನ್ನು 2017ರ ರಾಜ್ಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದಲ್ಲದೆ, ಐತಿಹಾಸಿಕ ನಗರ ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಆರೋಗ್ಯ ವಿಚಾರದಲ್ಲಿ ಆ ಜಿಲ್ಲೆಯ ಜನತೆಗೆ ಸಹಾಯವಾಗುವ ನಿಟ್ಟಿನಲ್ಲಿ ಅಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ರಾಮನಗರ, ದಾವಣಗೆರೆ, ಕೋಲಾರಗಳಲ್ಲಿ ಹೈಟೆಕ್ ಆಸ್ಪತ್ರೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.[ಕರ್ನಾಟಕ ಬಜೆಟ್ ನ ಪ್ರಮುಖಾಂಶಗಳು]

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ವ್ಯಾಸಂಗ ಮಾಡಿದ್ದ ಲಂಡನ್ ಎಕನಾಮಿಕ್ಸ್ ಸಂಶೋಧನಾ ಸಂಸ್ಥೆಯ ಮಾದರಿಯಲ್ಲೇ ಬೆಂಗಳೂರಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಆರ್ಥಿಕ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಯಚೂರಿನಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಹೈದರಾಬಾದ್ ಕರ್ನಾಟಕದಲ್ಲಿನ ವಿದ್ಯಾರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.[ಬಜೆಟ್ 2017: ದ್ವಿಚಕ್ರವಾಹನ ಖರೀದಿ ದುಬಾರಿ, ಮದ್ಯ ಬೆಲೆ ಹೆಚ್ಚಳ]
ರಾಜ್ಯದ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಸನ, ಚಾಮರಾಜ ನಗರ ಹಾಗೂ ಯಾದಗಿರಿಯಲ್ಲಿ ಡಿಪ್ಲೊಮಾ ಕಾಲೇಜು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಇದಲ್ಲದೆ, ರಾಜ್ಯದಲ್ಲಿ ಕುರಿ ಸಾಕಾಣಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬಳ್ಳಾರಿಯ ಕುರಿಕುಪ್ಪೆಯಲ್ಲಿ ಕುರಿ ಸಂವರ್ಧನೆ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.[LIVE: ಮೇಕೆದಾಟು ಯೋಜನೆ ಅನುಷ್ಠಾನ : ಸಿದ್ದರಾಮಯ್ಯ]
ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕ್ಯಾಂಟೀನ್ ಗಳಿಂದ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಸಿಗುವ ವ್ಯವಸ್ಥೆ ಜಾರಿಯಾಗಲಿದೆ.
ಇದಲ್ಲದೆ, 21 ಜಿಲ್ಲೆಗಳಿಂದ 49 ಹೊಸ ತಾಲೂಕುಗಳನ್ನು ರಚಿಸಲು ಸರ್ಕಾರ ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications