ಚುನಾವಣಾ ಪೂರ್ವ ಬಜೆಟ್ ನಲ್ಲಿ ಏನೆಲ್ಲ ಸಿಗಬಹುದು?

ಬೆಂಗಳೂರು, ಫೆಬ್ರವರಿ 15: ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರದಂದು 2018-19ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.

ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ 6ನೇ ಹಾಗೂ ಹಣಕಾಸು ಸಚಿವರಾಗಿ ದಾಖಲೆಯ 13ನೇ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ 2.20 ಲಕ್ಷ ಕೋಟಿ ರೂ. ದಾಟುವ ನಿರೀಕ್ಷೆಯಿದೆ, ಕೃಷಿ, ಉದ್ಯೋಗ ಕ್ಷೇತ್ರಕ್ಕೆ ಆದ್ಯತೆ ದೊರೆಯುವ ಸಾಧ್ಯತೆ ಇದೆ.

Karnataka budget 2018-19, Expectations

ಶುಕ್ರವಾರ(ಫೆಬ್ರವರಿ 16) ಬೆಳಗ್ಗೆ 11.30ಕ್ಕೆ ಬಜೆಟ್ ಮಂಡನೆ ಮಾಡಲಿರುವ ಸಿದ್ದರಾಮಯ್ಯ ಅವರು, ಹಲವು ಮಹತ್ವಪೂರ್ಣ ಕಾರ್ಯಕ್ರಮಗಳನ್ನು ಪ್ರಕಟಿಸುವ ಹಾಗೂ ಹಾಲಿ ಜನಪ್ರಿಯ ಯೋಜನೆಗಳನ್ನು ಇನ್ನಷ್ಟು ವಿಸ್ತರಿಸುವ ಸಾಧ್ಯತೆಗಳಿವೆ.

ಬರಗಾಲ ಮತ್ತು ಸಾಲಭಾಧೆಯಿಂದ ಕಂಗೆಟ್ಟಿರುವ ರೈತರಿಗೂ ಅನೇಕ ಸೌಲಭ್ಯಗಳನ್ನು ನೀಡುವ ನಿರೀಕ್ಷೆ ಇದೆ.ಜನಸಾಮಾನ್ಯರ ಮೇಲೆ ಹೆಚ್ಚಿನ ತೆರಿಗೆ ಹೊರೆ ಹೇರದೆ ಪರ್ಯಾಯ ಮೂಲಗಳಿಂದ ಹೆಚ್ಚಿನ ಆದಾಯ ಸಂಗ್ರಹಿಸಲು ಒತ್ತು ನೀಡಲಿದ್ದಾರೆ. ಮದ್ಯ, ಸಿಗರೇಟು ಸೇರಿದಂತೆ ವ್ಯಸನಗಳಿಗೆ ಅಂಟಿಕೊಂಡವರಿಗೆ ಬಜೆಟ್ ಭಾರವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+