ಕುಮಾರಸ್ವಾಮಿ ಬಜೆಟ್ 2018: ಯಾವುದು ಏರಿಕೆ? ಯಾವ್ದು ಇಳಿಕೆ?

ಬೆಂಗಳೂರು, ಜುಲೈ 05: ರೈತರ ಸಾಲಮನ್ನಾ, ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳದಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಆಗುವ ಹೊರೆ ತಪ್ಪಿಸಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಗತ್ಯ ಕ್ರಮವನ್ನು ತೆಗೆದುಕೊಂಡಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಿ ಆರ್ಥಿಕ ಸುಸ್ಥಿರತೆಗೆ ಆದ್ಯತೆ ನೀಡಿದ ಕೇಂದ್ರ ಸರ್ಕಾರದ ಬಜೆಟ್, ಸಿದ್ದರಾಮಯ್ಯ ಅವರ ಚುನಾವಣಾ ಪೂರ್ವ ಬಜೆಟ್ ನ ಪ್ರತಿರೂಪವಾಗಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಅನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರದಂದು ಮಂಡಿಸಿದ್ದಾರೆ.
ಯಾವುದು ಏರಿಕೆ?:
* ಮದ್ಯದ ಮೇಲಿನ ಅಬಕಾರಿ ಸುಂಕ ಶೇ4ರಷ್ಟು ಹೆಚ್ಚಳ.
* ಅಬಕಾರಿ ಸುಂಕ 17 ಸ್ಲ್ಯಾಬ್ ಗಳಿಗೆ ಶೇ 15 ರಿಂದ ಶೇ 34ಕ್ಕೆ ಏರಿಕೆ
* ಮದ್ಯ, ತಂಬಾಕು ಉತ್ಪನ್ನಗಳು, ಸಿಗರೇಟು, ಬೀಡಿ ಬೆಲೆ ಏರಿಕೆ
* ಡೀಸೆಲ್ ಮೇಲಿನ 19 ರಿಂದ 22 ರಷ್ಟು ಸೆಸ್ ಏರಿಕೆ, ಡೀಸೆಲ್ ಪ್ರತಿ ಲೀಟರ್ ಬೆಲೆ 1.12 ರು ಏರಿಕೆ
* ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಶೇ 30ರಿಂದ 32ಕ್ಕೇರಿಕೆ, ಪೆಟ್ರೋಲ್ ಬೆಲೆ 1.14 ರು ಏರಿಕೆ
* ಖಾಸಗಿ ಸೇವಾ ವಾಹನ ತೆರಿಗೆಯನ್ನು ಪ್ರತಿ ಚದರ ಮೀಟರ್ಗೆ ಶೇ.50ರಷ್ಟು ಹೆಚ್ಚಳ
* ವಿದ್ಯುತ್ ದರ ಹೆಚ್ಚಳ ಪ್ರತಿ ಯೂನಿಟ್ ಮೇಲೆ 10ರಿಂದ 20 ಪೈಸೆ ಏರಿಕೆ.
* ವಿದ್ಯುತ್ ಮೇಲಿನ ತೆರಿಗೆ ಶೇ.6ರಿಂದ ಶೇ.9ಕ್ಕೆ ಏರಿಕೆ
ಯಾವುದು ಇಳಿಕೆ?
* ಸಿರಿಧಾನ್ಯಗಳಾದ ನವಣೆ, ಸಾಮೆ, ಅರಕ ಹಾಗೂ ಬರಗು ಮೇಲಿನ ಹಿಟ್ಟುಗಳಿಗೆ ತೆರಿಗೆ ವಿನಾಯ್ತಿ
* ದ್ವಿದಳ ಧಾನ್ಯ, ತೆಂಗಿನ ಕಾಯಿ ಸಿಪ್ಪೆಯ ಮೇಲಿನ ತೆರಿಗೆ ವಿನಾಯಿತಿ ಮುಂದುವರಿಕೆ