ಕರ್ನಾಟಕ ಬಜೆಟ್: ರಾಜ್ಯದ 28 ಸಾವಿರ ಸರ್ಕಾರಿ ಶಾಲೆಗಳು ವಿಲೀನ
ಬೆಂಗಳೂರು, ಜು.5: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಗುರುವಾರ ಮಂಡನೆ ಮಾಡಿದ್ದಾರೆ.ಅದರಲ್ಲಿ ಸರ್ಕಾರಿ ಶಾಲೆಗಳ ವಿಲೀನ ಕುರಿತು ಕೆಲವು ನಿರ್ಧಾರಗಳನ್ನು ಘೋಷಿಸಿದ್ದಾರೆ.
ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಮತ್ತು ದಾಖಲಾತಿ ಕಡಿಮೆ ಇರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಹತ್ತಿರದ ಶಾಲೆಯೊಂದಿಗೆ ವಿಲೀನಗೊಳಿಸಲಾಗುತ್ತದೆ. ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಡಿಮೆ ದಾಖಲಾತಿ ಇರುವ 28,847 ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಗುರುತಿಸಿದ್ದು, ಹತ್ತಿರದ 8530 ಸರ್ಕಾರಿ ಶಾಲೆಗಳೊಂದಿಗೆ ವಿಲೀನಗೊಳಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ.
ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಆಯ್ದ 4100 ಸರ್ಕಾರಿ ಪ್ರಾಥಮಿಕ ಶಾಲೆಗಳ ಆವರಣದಲ್ಲಿ ಸ್ಥಳಾಂತರಿಸಿ ಬಾಲಸ್ನೇಹಿ ಕೇಂದ್ರಗಳನ್ನಾಗಿ ಬಲವಧಿಸಲಾಗುತ್ತದೆ. ಹಂತ ಹಂತವಾಗಿ ಬೇರೆ ಸರ್ಕಾರಿ ಶಾಲೆಗಳಲ್ಲಿ ಕೂಡ ಎಲ್‌ಕೆಜಿ, ಯುಕೆಜಿಯನ್ನು ಆರಂಭಿಸಲಾಗುತ್ತದೆ.

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ಕಟ್ಟಡಗಳ ದುರಸ್ತಿಗಾಗಿ ವಿಶೇಷ ಪ್ಯಾಕೇಜ್ ಮೂಲಕ 150 ಕೋಟಿ ರೂ,ಗಳನ್ನು ಒದಗಿಸಲಾಗಿದೆ.












Click it and Unblock the Notifications