ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿ
Recommended Video

Karnataka Budget 2018 : ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿ
ಬೆಂಗಳೂರು, ಜುಲೈ 06: ಮೈಸೂರಿನ ವಿಶ್ವವಿಖ್ಯಾತ ಕೃಷ್ಣರಾಜಸಾಗರದ ಬೃಂದಾವನ ಉದ್ಯಾನವನವನ್ನು ಅಮೆರಿಕದ ಡಿಸ್ನಿ ಲ್ಯಾಂಡ್ ಮಾದರಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದ್ದಾರೆ.
ಕಳೆದ ಎರಡು ದಶಕಗಳಲ್ಲಿ ಕೆಆರ್‍ಎಸ್ ಅಣೆಕಟ್ಟಿನ ಬೃಂದಾವನ ಉದ್ಯಾನವನದ ಜನಪ್ರಿಯತೆ ಕುಗ್ಗಿರುವುದು ಕಂಡು ಬಂದಿದೆ. ಬೃಂದಾವನದ ಐತಿಹಾಸಿಕ ವೈಭವವನ್ನು ಮರುಕಳಿಸುವಂತೆ ಮಾಡಲು ಸರ್ಕಾರ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಉದ್ಯಾನವನವನ್ನು ಖಾಸಗಿ ಸಹಭಾಗಿತ್ವದಲ್ಲಿ ಪಿಪಿಪಿ ಮಾದರಿಯಲ್ಲಿ ಡಿಸ್ನಿಲ್ಯಾಂಡ್ ನಂತೆ ಅಭಿವೃದ್ಧಿಪಡಿಸಲಾಗುವುದು.

ಈ ಯೋಜನೆಗೆ ಬಂಡವಾಳ ಹೂಡಲು ವಿಶ್ವಮಟ್ಟದ ಉದ್ಯಮಿಗಳು ಉತ್ಸುಕರಾಗಿದ್ದು, ಈ ಯೋಜನೆಯ ಕಾರ್ಯರೂಪಕ್ಕೆ 5 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ನಿಗದಿಪಡಿಸಲಾಗಿದೆ ಎಂದರು.












Click it and Unblock the Notifications