ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಜೆಟ್ 2018: ಶಿಕ್ಷಣ ಕ್ಷೇತ್ರಕ್ಕೆ ಏನಿದೆ ಕೊಡುಗೆ?

|
Google Oneindia Kannada News

ಬೆಂಗಳೂರು, ಫೆಬ್ರವರಿ 16: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಅವರ ಈ ಅವಧಿಯ ಕೊನೆಯ ಬಜೆಟ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಹಲವು ಕೊಡುಗೆಗಳನ್ನು ನೀಡಲಾಗಿದೆ.

120 ಸರ್ಕಾರಿ ಐಟಿಐ ಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಕಂಪ್ಯೂಟರ್ ಲ್ಯಾಬ್ ಸೌಲಭ್ಯ ನೀಡಲಾಗುತ್ತಿದೆ. ಖಾಸಗಿ, ಸರ್ಕಾರಿ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಯಾಗಲಿದೆ. 2.5 ಲಕ್ಷ ಜನರಿಗೆ ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ತರಬೇತಿ ನೀಡಲಾಗುತ್ತದೆ. ಯುವ ಉದ್ಯಮಿಗಳಿಗೆ ತರಬೇತಿ ನೀಡುವ ದಿಶಾ ಯೋಜನೆಯನ್ನು 2 ಕೋಟಿ ರೂ. ವೆಚ್ಚದಲ್ಲಿ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲಾಗುತ್ತಿದೆ.

Karnataka Budget 2018: What does Siddaramaiah give to Education field?

* ಗ್ರಾಮ ಪಂಚಾಯತ್ ಮಟ್ಟದಲ್ಲಿ 100 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (12ನೇ ತರಗತಿವರೆಗೆ) 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ.

* 75 ಕೋಟಿ ರೂ. ವೆಚ್ಚದಲ್ಲಿ ಎಲ್ಲಾ ಸರ್ಕಾರಿ ಹೈಸ್ಕೂಲ್ ಗಳಲ್ಲಿ ಸೈನ್ಸ್ ಸೆಂಟರ್ ತೆರೆಯಲಾಗಿದೆ.
* ಮೈಸೂರಿನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಬಸವ ಅಧ್ಯಯನ ಕೇಂದ್ರ ನಿರ್ಮಿಸಲಾಗುತ್ತದೆ.

Live : ಕರ್ನಾಟಕ ಬಜೆಟ್ 2018, ಮುಖ್ಯಾಂಶಗಳುLive : ಕರ್ನಾಟಕ ಬಜೆಟ್ 2018, ಮುಖ್ಯಾಂಶಗಳು

* 100 ವರ್ಷ ಪೂರೈಸಿದ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವುದು ಮತ್ತು ಅವನ್ನು ಪಾರಂಪರಿಕ ಶಾಲೆ ಎಂದು ಘೋಷಿಸುವುದು.
* ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ.
* ಸರ್ಕಾರಿ ಕಾಲೇಜುಗಳಲ್ಲಿ ಪಿಯುಸಿ, ಡಿಗ್ರಿ ಅಥವಾ ಸ್ನಾತಕೋತ್ತರ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಅನುದಾನ.

English summary
Karnataka Budget 2018: Chief minister Siddaramaiah announces many useful schemes to education field in his last budget of this term.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X