ಮೊಟ್ಟ ಮೊದಲ ಬಾರಿಗೆ 'ಮಕ್ಕಳ' ಬಜೆಟ್: ಇತಿಹಾಸ ಸೃಷ್ಟಿಸಿದ ಬಿ.ಎಸ್.ವೈ!

ಬೆಂಗಳೂರು, ಮಾರ್ಚ್ 05: ಪ್ರಸಕ್ತ ಸಾಲಿನ ಆಯ ವ್ಯಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ್ದಾರೆ. ಹಣಕಾಸು ಸಚಿವರು ಕೂಡ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ.

ಕರ್ನಾಟಕ ರಾಜ್ಯದ ಈ ಬಾರಿಯ ಬಜೆಟ್ ಗಾತ್ರ 2 ಲಕ್ಷದ 37 ಸಾವಿರ ಕೋಟಿ ರೂಪಾಯಿ ಆಗಿದೆ. ಹಸಿರು ಶಾಲು ಹೊದ್ದು 1 ಗಂಟೆ 40 ನಿಮಿಷಗಳ ಕಾಲ ಬಜೆಟ್ ಓದಿದ ಬಿ.ಎಸ್.ಯಡಿಯೂರಪ್ಪ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇದೇ ಪ್ರಪ್ರಥಮ ಬಾರಿಗೆ ಮಕ್ಕಳ ಬಜೆಟ್ ಮಂಡಿಸಿದರು.

ಕರ್ನಾಟಕ ರಾಜ್ಯದಲ್ಲಿರುವ 18 ವರ್ಷದ ಒಳಗಿರುವ ಎಲ್ಲಾ ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಆಯವ್ಯಯದಲ್ಲಿ 36,340 ಕೋಟಿ ರೂಪಾಯಿಗಳ 279 ಕಾರ್ಯಕ್ರಮಗಳನ್ನು ಪ್ರಸ್ತಾಪಿಸಲಾಗಿದೆ. ಇದು ಒಟ್ಟಾರೆ ಆಯವ್ಯಯ ಗಾತ್ರದ ಶೇ.15.28 ರಷ್ಟು ಆಗಿರುತ್ತದೆ. ಅದರ ಸಂಪೂರ್ಣ ವಿವರ ಇಲ್ಲಿದೆ, ಓದಿರಿ...

ಬ್ಯಾಗ್ ರಹಿತ ದಿನ

ಬ್ಯಾಗ್ ರಹಿತ ದಿನ

* ಪ್ರತಿ ತಿಂಗಳಲ್ಲಿ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನ, 'ಸಂಭ್ರಮ ಶನಿವಾರ' ಆಚರಣೆ.

* ದಾವಣಗೆರೆ, ಉಡುಪಿ ಮತ್ತು ದೊಡ್ಡಬಳ್ಳಾಪುರದಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂಪಾಯಿ ಅನುದಾನ.

* ಶಿಕ್ಷಕರ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು 'ಶಿಕ್ಷಕ ಮಿತ್ರ' ಎಂಬ ಮೊಬೈಲ್ ಆಪ್ ಅಭಿವೃದ್ಧಿ.

ಶಾಸಕರಿಂದ ಮೂರು ಶಾಲೆಗಳ ದತ್ತು ಸ್ವೀಕಾರ

ಶಾಸಕರಿಂದ ಮೂರು ಶಾಲೆಗಳ ದತ್ತು ಸ್ವೀಕಾರ

* ಒಂದೇ ಸೂರಿನಡಿ ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿಪೂರ್ವ ತರಗತಿವರೆಗೆ ಶಿಕ್ಷಣ ನೀಡುವ 276 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂಪಾಯಿ ಅನುದಾನ.

* ನಬಾರ್ಡ್ ಸಹಯೋಗದಲ್ಲಿ 758 ಕೋಟಿ ರೂಪಾಯಿ ವೆಚ್ಚದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಕ್ರಮ.

* ಶಾಸಕರು ತಮ್ಮ ಕ್ಷೇತ್ರದ ವ್ಯಾಪ್ತಿಯ ತಲಾ ಮೂರು ಶಾಲೆಗಳ ದತ್ತು ಸ್ವೀಕಾರ ಮತ್ತು ಅಭಿವೃದ್ಧಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ರಮ.

* 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಒಂದು ಕೋಟಿ ರೂಪಾಯಿ ಅನುದಾನ.

ಜನ್ಮಜಾತ ಕಿವುಡುತನ ಗುಣಪಡಿಸಲು ಯೋಜನೆ

ಜನ್ಮಜಾತ ಕಿವುಡುತನ ಗುಣಪಡಿಸಲು ಯೋಜನೆ

* ಆರು ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ ಕಿವುಡುತನ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆಗೆ 28 ಕೋಟಿ ರೂಪಾಯಿ ಅನುದಾನ.

* ರಾಜ್ಯದ 17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ (Neonatal Intensive Care Unit) ಹಂತ ಹಂತವಾಗಿ ಉನ್ನತೀಕರಣ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯ ಕೇಂದ್ರಗಳ ಸ್ಥಾಪನೆ.

ಬಾಲಮಂದಿರಗಳ ಸ್ಥಾಪನೆ

ಬಾಲಮಂದಿರಗಳ ಸ್ಥಾಪನೆ

* ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ರಾಜ್ಯದಲ್ಲಿ ಏಳು ಹೊಸ ಬಾಲಮಂದಿರಗಳ ಸ್ಥಾಪನೆ. ಇದಕ್ಕೆ 5.67 ಕೋಟಿ ರೂಪಾಯಿ ಅನುದಾನ.

* ರಾಜ್ಯಾದ್ಯಂತ ಕಟ್ಟದ ಕಾರ್ಮಿಕರ ಆರು ವರ್ಷದೊಳಗಿನ ಮಕ್ಕಳ ಪಾಲನೆ ಪೋಷಣೆ ಮಾಡಲು ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ 10 ಸಂಚಾರಿ ಶಿಶುಪಾಲನಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 110 'ಕಿತ್ತೂರು ರಾಣಿ ಚೆನ್ನಮ್ಮ' ಶಿಶುಪಾಲನಾ ಕೇಂದ್ರಗಳ ಸ್ಥಾಪನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+