ಉಚಿತ ಡಯಾಲಿಸಿಸ್, ಮಕ್ಕಳಿಗೆ ವಿದ್ಯಾಭ್ಯಾಸ: ಬಡವರಿಗೆ ಸುಗ್ಗಿ ತಂದ BSY
ಬೆಂಗಳೂರು,
ಮಾರ್ಚ್ 5: 2020 - 21 ಸಾಲಿನ ರಾಜ್ಯ ಬಜೆಟ್ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಬಿ ಎಸ್ ಯಡಿಯೂರಪ್ಪ ಬೆಳಗ್ಗೆ 11 ಗಂಟೆಗೆ ಮಂಡಿಸಿದರು. ಹಸಿರು ಶಾಲು ಹಾಕಿಕೊಂಡು, 1 ಗಂಟೆ 40 ನಿಮಿಷಗಳ ಕಾಲ ಬಜೆಟ್ ಓದಿದ ಯಡಿಯೂರಪ್ಪ ಆರ್ಥಿಕವಾಗಿ ಹಿಂದುಳಿದವರಿಗೆ ಹಲವು ಯೋಜನೆಗಳನ್ನು ಘೋಷಿಸಿದರು. id="toptextpromo"> id='are-slot-1' class='oiad oi-axt oiadv'>ಆಟೋ
ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಸಹಾಯ, ಕಟ್ಟಡ ಕಾರ್ಮಿಕ ಕುಟುಂಬದ ಚಿಕಿತ್ಸೆಗೆ ಸಹಾಯ ಹಸ್ತ, ಗಾರ್ಮೆಂಟ್ ಉದ್ಯಮದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಹೀಗೆ ಹಲವು ಜನಪರ ಕಾರ್ಯಕ್ರಮಗಳನ್ನು ಬಡವರ ಬಂಧು ಯಡಿಯೂರಪ್ಪ ಮಂಡಿಸಿದರು. ಅಂದಹಾಗೆ, ಆ ಕುರಿತ ಸಂಪೂರ್ಣ ವಿವರ ಇಲ್ಲಿದೆ. id='are-slot-2' class='oiad oi-axt oiadv'>
ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ
* ಒಂದು ಲಕ್ಷ ನೋಂದಾಯಿತ ಕಟ್ಟದ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ 'ಮುಖ್ಯಮಂತ್ರಿಗಳ ಆರೋಗ್ಯ ಸುರಕ್ಷಾ' ಯೋಜನೆಯಡಿಯಲ್ಲಿ ಅನುಮೋದಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನುವಾಗುವಂತೆ 'ಉಚಿತ ಪ್ರೀಪೇಯ್ಡ್ ಹೆಲ್ತ್ ಕಾರ್ಡ್'ಗಳ ವಿತರಣೆ
* ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರತಿ ವರ್ಷ ಪ್ರತಿ ಕುಟುಂಬಕ್ಕೆ 2000 ರೂಪಾಯಿ ನೆರವು. ಇದಕ್ಕೆ 40 ಕೋಟಿ ರೂಪಾಯಿ ಅನುದಾನ.

ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್
* 'ವನಿತಾ ಸಂಗಾತಿ' ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂಪಾಯಿ ಅನುದಾನ.
* ನಗರ ಪ್ರದೇಶಗಳಲ್ಲಿ ದುಡಿಯುತ್ತಿರುವ ಕಟ್ಟದ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರಿಗೆ ಆರೋಗ್ಯ ರಕ್ಷಣೆ ನೀಡುವ ದೃಷ್ಟಿಯಿಂದ 10 'ಮೊಬೈಲ್ ಕ್ಲಿನಿಕ್'ಗಳನ್ನು ಪ್ರಾರಂಭಿಸಲಾಗುವುದು.

ಬಡ ರೋಗಿಗಳಿಗೆ ಉಚಿತ ಡಯಾಲಿಸಿಸ್
* ರಾಜ್ಯಾದ್ಯಂತ ಕಟ್ಟದ ಕಾರ್ಮಿಕರ ಆರು ವರ್ಷದೊಳಗಿನ ಮಕ್ಕಳ ಪಾಲನೆ ಪೋಷಣೆ ಮಾಡಲು ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ 10 ಸಂಚಾರಿ ಶಿಶುಪಾಲನಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 110 'ಕಿತ್ತೂರು ರಾಣಿ ಚೆನ್ನಮ್ಮ' ಶಿಶುಪಾಲನಾ ಕೇಂದ್ರಗಳ ಸ್ಥಾಪನೆ.
* ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಬಡ ರೋಗಿಗಳಿಗೆ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ.

ಹೃದಯ ರೋಗದ ಚಿಕಿತ್ಸೆಗೆ ಸಹಾಯ
* ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇತರೆ ಐದು ಆಸ್ಪತ್ರೆಗಳ ತುರ್ತು ವೈದ್ಯಕೀಯ ಚಿಕಿತ್ಸಾ ವಿಭಾಗಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಿ ಉತ್ಕೃಷ್ಟ ಕೇಂದ್ರಗಳನ್ನಾಗಿ (Centre of Excellence) ಅಭಿವೃದ್ಧಿಪಡಿಸಲು ಐದು ಕೋಟಿ ರೂ. ಅನುದಾನ.
* ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಸಿ.ವಿ. ರಾಮನ್ ಆಸ್ಪತ್ರೆಗಳಲ್ಲಿ ಹೃದಯ ರೋಗದ ಚಿಕಿತ್ಸೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಕ್ಯಾತ್ ಲ್ಯಾಬ್ ಸ್ಥಾಪನೆ.

ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್
* ರಾಜ್ಯದ 500 ಅಂಧ ವಿದ್ಯಾರ್ಥಿಗಳಿಗೆ ತಲಾ 25,000 ರೂ.ಗಳ ಮೊತ್ತದ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್ ಹಾಗೂ ವಾಕಿಂಗ್ ಸ್ಟಿಕ್‍ಗಳನ್ನೊಳಗೊಂಡ ಕಿಟ್ ವಿತರಣೆ. 1.25 ಕೋಟಿ ರೂ. ಅನುದಾನ.
* ಅಂಧ ತಾಯಂದಿರಿಗೆ ನೀಡುವ ಮಾಸಿಕ 2000 ರೂ. ಶಿಶುಪಾಲನಾ ಭತ್ಯೆ ಯೋಜನೆ ಮಗುವಿನ ಮೊದಲ ಎರಡು ವರ್ಷಗಳಿಂದ ಐದು ವರ್ಷದ ವರೆಗೆ ವಿಸ್ತರಣೆ.












Click it and Unblock the Notifications