ರಾಜ್ಯ ಬಜೆಟ್‌ನಲ್ಲಿ ಸರ್ಕಾರಿ ನೌಕರರಿಗೆ ಸಿಕ್ಕ ಸೌಲಭ್ಯಗಳು

ಮುಖ್ಯಮಂತ್ರಿ ಯಡಿಯೂರಪ್ಪ 2020ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಸರ್ಕಾರಿ ನೌಕರರಿಗೆ ಕೆಲವು ಸೌಲಭ್ಯಗಳು ಸಿಕ್ಕಿವೆ. ಅಧಿಕಾರಿಗಳಿಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ, ಮಹಿಳಾ ವಿಶ್ರಾಂತಿ ಕೋಣೆ, 'ಪೊಲೀಸ್ ಗೃಹಭಾಗ್ಯ-2020' ಹೀಗೆ ಸರ್ಕಾರಿ ನೌಕರಿಗೆ ಕೆಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ.

* ರಾಜ್ಯ ಸರ್ಕಾರದ ಕೆಲವು ಕಚೇರಿಗಳನ್ನು ಹಂತ ಹಂತವಾಗಿ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಸ್ಥಳಾಂತರಿಸಲು ಕ್ರಮ.

* ರಾಜ್ಯದ 22.5 ಲಕ್ಷ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ಜ್ಯೋತಿ ಸಂಜೀವಿನಿ ಯೋಜನೆ ಮಾರ್ಪಡಿಸಿ, ಶಸ್ತ್ರ ಚಿಕಿತ್ಸಾ ವಿಧಾನಗಳಿಗೆ ನಗದುರಹಿತ ಚಿಕಿತ್ಸಾ ಸೌಲಭ್ಯ. ಇದರ ಅಂದಾಜು ವಾರ್ಷಿಕ ವೆಚ್ಚ 50 ಕೋಟಿ ರೂ.

Karnataka Budget 2020: Major Announcement For Government Employees Welfare

* ಸಕಾಲ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಯನ್ನು ನೀಡಲಾಗುವುದು.

* ಕರ್ನಾಟಕ ಸರ್ಕಾರವು ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ 'ಪೊಲೀಸ್ ಗೃಹಭಾಗ್ಯ-2020'ಯನ್ನು ಅನುಷ್ಠಾನಗೊಳಿಸುತ್ತದೆ. ಈ ಯೋಜನೆಯ ಕಾಮಗಾರಿಗಳನ್ನು ಮುಂದುವರೆಸಲು 200 ಕೋಟಿ ರೂಪಾಯಿಗಳನ್ನು ಒದಗಿಸಲಾಗುವುದು.

* ಬೆಂಗಳೂರಿನಲ್ಲಿರುವ ಆಯ್ದ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸ್ನೇಹಿ ವಾತಾವರಣವನ್ನು ನಿರ್ಮಿಸಲು ಮಕ್ಕಳ ಪಾಲನಾ ಕೇಂದ್ರಗಳು, ಸ್ಯಾನಿಟರಿ ನ್ಯಾಪ್ ಕಿನ್ ಡಿಸ್ಪೆನ್ಸರ್ ಮತ್ತು ಇತರೆ ಸೌಲಭ್ಯಗಳನ್ನು ಹೊಂದಿರುವ ಮಹಿಳಾ ವಿಶ್ರಾಂತಿ ಕೋಣೆಗಳನ್ನು 'ಬೆಂಗಳೂರು ಸ್ಮಾರ್ಟ್ ಸಿಟಿ' ಯೋಜನೆಯಡಿ ತರಲಾಗುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+