Get Updates
Get notified of breaking news, exclusive insights, and must-see stories!

ಭಾರಿ ನಿರೀಕ್ಷೆಯಲ್ಲಿದ್ದ 'ಸಮಾಜ ಕಲ್ಯಾಣ'ಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದಿಷ್ಟೇ!

ಬೆಂಗಳೂರು, ಮಾರ್ಚ್ 05: ಪ್ರಸಕ್ತ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ್ದಾರೆ. ಹಣಕಾಸು ಸಚಿವರು ಕೂಡ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ.

ಕರ್ನಾಟಕ ರಾಜ್ಯದ ಈ ಬಾರಿಯ ಬಜೆಟ್ ಗಾತ್ರ 2 ಲಕ್ಷದ 37 ಸಾವಿರ ಕೋಟಿ ರೂಪಾಯಿ ಆಗಿದೆ. ಅದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರಿಗೆ SCSP/TSP ಅಡಿಯಲ್ಲಿ 26,930 ಕೋಟಿ ರೂಪಾಯಿಗಳನ್ನು ನಿಗದಿ ಮಾಡಲಾಗಿದೆ.

ಕರ್ನಾಟಕ ಬಜೆಟ್ 2020 ಯಲ್ಲಿ 'ಸಮಾಜ ಕಲ್ಯಾಣ'ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿರುವ ಕೊಡುಗೆ ಇಂತಿದೆ:

ವಾಹನ ಚಾಲನಾ ತರಬೇತಿ

ವಾಹನ ಚಾಲನಾ ತರಬೇತಿ

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ SCSP/TSP ಅಡಿ 26,930 ಕೋಟಿ ರೂಪಾಯಿ ಅನುದಾನ ನಿಗದಿ ಪಡಿಸಲಾಗಿದೆ.

* ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ವಸತಿ ಶಾಲೆಗಳಲ್ಲಿ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಕನಿಷ್ಠ ಶೇ. 25 ರಷ್ಟು ಸೀಟು ಹಂಚಿಕೆಗೆ ಕ್ರಮ. ಈ ವಸತಿ ಶಾಲೆಗಳಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ.

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ವಾಹನ ಚಾಲನಾ ತರಬೇತಿ ನೀಡಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಮೂಲಕ ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವ್ಯವಸ್ಥೆ ಮಾಡಲಾಗುವುದು.

ನಿರುದ್ಯೋಗಿ ಯುವಕ-ಯುವತಿಯರಿಗೆ ಆಸರೆ

ನಿರುದ್ಯೋಗಿ ಯುವಕ-ಯುವತಿಯರಿಗೆ ಆಸರೆ

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಪ್ಯಾರಾಮೆಡಿಕಲ್ ಸರ್ಟಿಫಿಕೇಟ್ ಕೋರ್ಸುಗಳೊಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುವುದು.

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಸಣ್ಣ ಸರಕು ಸಾಗಾಣಿಕೆ ವಾಹನಗಳನ್ನು ಖರೀದಿಸಲು ಸಾಲದ ಸೌಲಭ್ಯ ನೀಡಲು ಕ್ರಮ.

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ನೀಡುವ ಷೇರು ಬಂಡವಾಳ ದ್ವಿಗುಣ. 20 ಲಕ್ಷ ರೂಪಾಯಿಗಳಿಗೆ ಹೆಚ್ಚಳ.

ಒಂದು ಲಕ್ಷ ನಗದು ಪ್ರಶಸ್ತಿ

ಒಂದು ಲಕ್ಷ ನಗದು ಪ್ರಶಸ್ತಿ

* ಪ್ರತಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ, ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಒಂದು ಲಕ್ಷ ರೂಪಾಯಿ ನಗದು ಪ್ರಶಸ್ತಿ ನೀಡಲು ಕ್ರಮ. ಇದಕ್ಕಾಗಿ 60 ಲಕ್ಷ ರೂಪಾಯಿ ಅನುದಾನ.

* ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯ ಪದ್ಧತಿ ಮತ್ತು ಆಚರಣೆಗಳ ದಾಖಲೀಕರಣ ಹಾಗೂ ಆಯ್ದ ಔಷಧಿಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಎರಡು ಕೋಟಿ ರೂಪಾಯಿ ಅನುದಾನ.

ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆ

ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆ

*'ಚರ್ಮ ಶಿಲ್ಪ' ಎಂಬ ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆಗೆ 250 ಚರ್ಮ ಕುಶಲಕರ್ಮಿಗಳಿಗೆ ಡಾ|| ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಘಟಕ ವೆಚ್ಚ 10 ಲಕ್ಷ ರೂಪಾಯಿಗಳಲ್ಲಿ ಐದು ಲಕ್ಷ ರೂಪಾಯಿ ಸಹಾಯಧನ. 12.50 ಕೋಟಿ ರೂಪಾಯಿ ಅನುದಾನ.

* ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂಪಾಯಿ ಅನುದಾನ.

* ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ವಿವಿಧ ನಿಗಮಗಳಿಗೆ 125 ಕೋಟಿ ರೂಪಾಯಿ ಅನುದಾನ.

ಬೈಕ್ ಕೊಳ್ಳಲು ಆರ್ಥಿಕ ನೆರವು

ಬೈಕ್ ಕೊಳ್ಳಲು ಆರ್ಥಿಕ ನೆರವು

* ಇ-ವಾಣಿಜ್ಯ ಉತ್ಪನ್ನಗಳನ್ನು ಸರಬರಾಜು ಮಾಡುವ ಯುವಕರಿಗೆ ಬೈಕ್ ಕೊಳ್ಳಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾವಿರ ಯುವಕರಿಗೆ ತಲಾ 25,000 ರೂಪಾಯಿಗಳಂತೆ 2.5 ಕೋಟಿ ರೂಪಾಯಿ ಆರ್ಥಿಕ ನೆರವು

* ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ 200 ಕೋಟಿ ರೂಪಾಯಿ ಅನುದಾನ

* ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲು ಕ್ರಮ.

ಸರ್ವತೋಮುಖ ಅಭಿವೃದ್ಧಿ

ಸರ್ವತೋಮುಖ ಅಭಿವೃದ್ಧಿ

* ಕ್ರೈಸ್ತ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂಪಾಯಿ ಅನುದಾನ.

* ಅಪೂರ್ಣ ಹಂತದ ಎರಡು ಲಕ್ಷ ಮನೆಗಳನ್ನು ಪೂರ್ಣಗೊಳಿಸಿ, ವಸತಿ ರಹಿತರಿಗೆ ಹಂಚಿಕೆ ಮಾಡಲು 2500 ಕೋಟಿ ರೂಪಾಯಿ.

* ಸರ್ಕಾರದ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಿಕೊಂಡು ಹತ್ತು ವರ್ಷವಾಗಿದ್ದಲ್ಲಿ, ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಅಡಮಾನವಿಡಲಾದ ನಿವೇಶನವನ್ನು ಡೀಮ್ಡ್ ರಿಲೀಸ್ ಎಂದು ಪರಿಗಣಿಸಲು ಕ್ರಮ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+