ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಚಿತ ಬಸ್ ಪಾಸ್: ಬಿ.ಎಸ್.ವೈ ಬಜೆಟ್ ನಲ್ಲಿ ಹೆಣ್ಮಕ್ಕಳಿಗೆ ಸಿಹಿ ಸಿಕ್ತು ಗುರು!

|
Google Oneindia Kannada News

ಬೆಂಗಳೂರು, ಮಾರ್ಚ್ 05: ಪ್ರಸಕ್ತ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ್ದಾರೆ. ಹಣಕಾಸು ಸಚಿವರು ಕೂಡ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ.

ಕರ್ನಾಟಕ ರಾಜ್ಯದ ಈ ಬಾರಿಯ ಬಜೆಟ್ ಗಾತ್ರ 2 ಲಕ್ಷದ 37 ಸಾವಿರ ಕೋಟಿ ರೂಪಾಯಿ ಆಗಿದೆ. ಅದರಲ್ಲಿ ಮಹಿಳೆಯರ ಕಲ್ಯಾಣಕ್ಕಾಗಿ 37,783 ಕೋಟಿ ರೂಪಾಯಿಗಳ 953 ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೀಸಲಿಟ್ಟಿದ್ದಾರೆ. ಇದು ಒಟ್ಟಾರೆ ಆಯವ್ಯಯ ಗಾತ್ರದ ಶೇ.15.88 ರಷ್ಟು ಆಗಿರುತ್ತದೆ.

ಮೊಟ್ಟ ಮೊದಲ ಬಾರಿಗೆ 'ಮಕ್ಕಳ' ಬಜೆಟ್: ಇತಿಹಾಸ ಸೃಷ್ಟಿಸಿದ ಬಿ.ಎಸ್.ವೈ!ಮೊಟ್ಟ ಮೊದಲ ಬಾರಿಗೆ 'ಮಕ್ಕಳ' ಬಜೆಟ್: ಇತಿಹಾಸ ಸೃಷ್ಟಿಸಿದ ಬಿ.ಎಸ್.ವೈ!

ಮಹಿಳೆಯರ ಒಳಿತಿಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಲವು ಕಾರ್ಯಕ್ರಮಗಳನ್ನು ನಿಗದಿ ಮಾಡಿದ್ದಾರೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ, ಓದಿರಿ...

ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್

ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್

* ಅಂಧ ತಾಯಂದಿರಿಗೆ ನೀಡುವ ಮಾಸಿಕ 2000 ರೂಪಾಯಿ ಶಿಶುಪಾಲನಾ ಭತ್ಯೆ ಯೋಜನೆ ಮಗುವಿನ ಮೊದಲ ಎರಡು ವರ್ಷಗಳಿಂದ ಐದು ವರ್ಷದ ವರೆಗೆ ವಿಸ್ತರಣೆ.

* 'ವನಿತಾ ಸಂಗಾತಿ' ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂಪಾಯಿ ಅನುದಾನ.

* 'ಮಹಿಳಾ ಮೀನುಗಾರರ ಸಬಲೀಕರಣ' ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂಪಾಯಿ ಅನುದಾನ.

ಮಹಿಳೆಯರ ಸುರಕ್ಷತೆಗೆ ಆಪ್

ಮಹಿಳೆಯರ ಸುರಕ್ಷತೆಗೆ ಆಪ್

* ಬೆಂಗಳೂರು ಮಹಿಳೆಯರ ಸುರಕ್ಷತೆಗಾಗಿ ಅಭಿವೃದ್ಧಿ ಪಡಿಸಿರುವ ‘ಸುರಕ್ಷಾ ಆಪ್' ರಾಜ್ಯಾದ್ಯಂತ ವಿಸ್ತರಣೆ. ತುರ್ತು ಸ್ಪಂದನಾ ವಾಹನಗಳ ಮೂಲಕ ಮಹಿಳೆಯರ ರಕ್ಷಣೆಗೆ ಕ್ರಮ.

* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿಯಲ್ಲಿ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಸುಧಾರಣಾ ಸಂಸ್ಥೆಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್. ಇದಕ್ಕಾಗಿ ಐದು ಕೋಟಿ ರೂಪಾಯಿ ಅನುದಾನ.

* ಸ್ತ್ರೀಶಕ್ತಿ ಸ್ವ-ಸಹಾಯ ಸಂಘದ ಉತ್ಪನ್ನಗಳನ್ನು ಸರ್ಕಾರದ ಇಲಾಖೆಗಳಲ್ಲಿ ಅವಶ್ಯಕತೆಗನುಸಾರ ಖರೀದಿಸಲು ಕ್ರಮ.

ಬಡ್ಡಿ ರಹಿತ ಕಿರು ಸಾಲ ಸೌಲಭ್ಯ

ಬಡ್ಡಿ ರಹಿತ ಕಿರು ಸಾಲ ಸೌಲಭ್ಯ

* ನೆರೆಹಾವಳಿಯಿಂದ ಹಾನಿಯಾದ 842 ಅಂಗನವಾಡಿ ಕೇಂದ್ರಗಳ ಪುನರ್ ನಿರ್ಮಾಣಕ್ಕೆ 138 ಕೋಟಿ ರೂಪಾಯಿ.

* ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಮಹಿಳಾ ಪೂರಕ ಪೌಷ್ಟಿಕ ಉತ್ಪಾದನಾ ಕೇಂದ್ರಗಳ ಆಧುನೀಕರಣಕ್ಕೆ ಮಹಿಳಾ ಅಭಿವೃದ್ಧಿ ನಿಗಮದಿಂದ 20 ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಕಿರು ಸಾಲ ಸೌಲಭ್ಯ. 20 ಕೋಟಿ ರೂಪಾಯಿ ಅನುದಾನ.

* ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಟ್ರಾನ್ಸ್ ಜೆಂಡರ್ ರವರ ಮೂಲಹಂತದ (Base line) ಸಮೀಕ್ಷೆ ಕೈಗೊಳ್ಳಲು 70 ಲಕ್ಷ ರೂಪಾಯಿ ಅನುದಾನ.

ಮಹಿಳಾ ಸುರಕ್ಷತಾ ಪೋರ್ಟಲ್

ಮಹಿಳಾ ಸುರಕ್ಷತಾ ಪೋರ್ಟಲ್

* ಬಾಲಮಂದಿರದಿಂದ 21 ವರ್ಷ ತುಂಬಿದ ನಂತರ ಬಿಡುಗಡೆ ಹೊಂದುವವರಿಗೆ ಜೀವನೋಪಾಯ ರೂಪಿಸಿಕೊಳ್ಳಲು 'ಉಪಕಾರ' ಯೋಜನೆಯಡಿ ಮೂರು ವರ್ಷ ಅವಧಿಗೆ ಮಾಸಿಕ 5000 ರೂಪಾಯಿ ಆರ್ಥಿಕ ನೆರವು. ಕೌಶಲ್ಯಾಭಿವೃದ್ಧಿ ತರಬೇತಿಗೆ ಕ್ರಮ. ಒಂದು ಕೋಟಿ ರೂಪಾಯಿ ಅನುದಾನ.

* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಕಾರ್ಯಕ್ರಮಗಳನ್ನು ಪಾರದರ್ಶಕವಾಗಿ ಮಹಿಳೆಯರಿಗೆ ತಲುಪಿಸಲು ಮಹಿಳಾ ಸುರಕ್ಷತಾ ಪೋರ್ಟಲ್ ಪ್ರಾರಂಭ.

* ಬೆಂಗಳೂರಿನಲ್ಲಿರುವ ಆಯ್ದ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸ್ನೇಹಿ ವಾತಾವರಣವನ್ನು ನಿರ್ಮಿಸಲು ಮಕ್ಕಳ ಪಾಲನಾ ಕೇಂದ್ರಗಳು, ಸ್ಯಾನಿಟರಿ ನ್ಯಾಪ್ ಕಿನ್ ಡಿಸ್ಪೆನ್ಸರ್ ಮತ್ತು ಇತರೆ ಸೌಲಭ್ಯಗಳನ್ನು ಹೊಂದಿರುವ ಮಹಿಳಾ ವಿಶ್ರಾಂತಿ ಕೋಣೆಗಳನ್ನು 'ಬೆಂಗಳೂರು ಸ್ಮಾರ್ಟ್ ಸಿಟಿ' ಯೋಜನೆಯಡಿ ತರಲಾಗುವುದು.

* ಪೊಲೀಸ್ ತರಬೇತಿ ಶಾಲೆಗಳಲ್ಲಿ ಹಾಗೂ ಸಿ.ಎ.ಆರ್.ಡಿ.ಎ.ಆರ್. ಕೇಂದ್ರ ಸ್ಥಾನಗಳಲ್ಲಿ ರಿಯಾಯಿತಿ ದರದಲ್ಲಿ ಮಹಿಳೆಯರಿಗೆ ಸ್ವಯಂ ರಕ್ಷಣೆ ತರಬೇತಿ

English summary
Karnataka Budget 2020: Major Announcement by Chief Minister BS Yediyurappa for Women Welfare.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X