ಕರ್ನಾಟಕ ಬಜೆಟ್ 2020: ಶೈಕ್ಷಣಿಕ ಕ್ಷೇತ್ರಕ್ಕೆ ಬಿಎಸ್‌ವೈ ಕೊಡುಗೆ ಏನು?

ಬೆಂಗಳೂರು,

ಮಾರ್ಚ್
5:
2020-21ನೇ
ಸಾಲಿನ
ಕರ್ನಾಟಕ
ರಾಜ್ಯ
ಬಜೆಟ್
ಮಂಡಿಸಿದ
ಕರ್ನಾಟಕ
ಮುಖ್ಯಮಂತ್ರಿ
ಬಿಎಸ್
ಯಡಿಯೂರಪ್ಪ
ಅವರು
ಶೈಕ್ಷಣಿಕ
ಕ್ಷೇತ್ರಕ್ಕೆ
ವಿಶೇಷವಾದ
ಸೌಲಭ್ಯಗಳನ್ನು
ಘೋಷಣೆ
ಮಾಡಿದ್ದಾರೆ.

id="toptextpromo">
id='are-slot-1'
class='oiad
oi-axt
oiadv'>

ಕರ್ನಾಟಕ

ಶೈಕ್ಷಣಿಕ
ಕ್ಷೇತ್ರದ
ಅಭಿವೃದ್ಧಿಯ
ನಿಟ್ಟಿನಲ್ಲಿ
ವಸತಿ
ಶಾಲೆಗಳ
ಮೇಲ್ದರ್ಜೆಗೆ
ಕ್ರಮ,
ಶಿಕ್ಷಕ
ಮಿತ್ರ
ಆಪ್
ಅಭಿವೃದ್ಧಿ,
ತಿಂಗಳಲ್ಲಿ
2
ದಿನ
ಬ್ಯಾಗ್
ರಹಿತ
ದಿನ
ಯೋಜನೆ
ಸೇರಿದಂತೆ
ಹಲವು
ಯೋಜನೆಗಳನ್ನು
ಸಿಎಂ
ಘೋಷಿಸಿದರು.

id='are-slot-2'
class='oiad
oi-axt
oiadv'>

Rank ಪಡೆದವರಿಗೆ ಬಂಪರ್

Rank ಪಡೆದವರಿಗೆ ಬಂಪರ್

-ಪ್ರತಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
- ಇದಕ್ಕಾಗಿ 60 ಲಕ್ಷ ರೂಪಾಯಿ ಅನುದಾನ
- ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
- ಎಸ್‌ಟಿ ಎಸ್‌ಸಿ ವಿದ್ಯಾರ್ಥಿಗಳಿಗೆ ಒಂದು ಲಕ್ಷ ನೀಡಲು ಕ್ರಮ

ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಶೇ 25 ರಷ್ಟು ಸ್ಥಾನ ಮೀಸಲು

ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಶೇ 25 ರಷ್ಟು ಸ್ಥಾನ ಮೀಸಲು

- ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ತಾಲ್ಲೊಕಿನ ವಿದ್ಯಾರ್ಥಿಗಳಿಗೆ ಶೇ 25 ರಷ್ಟು ಸ್ಥಾನಗಳನ್ನು ಮೀಸಲಿಡಲು ಕ್ರಮ

* ವಸತಿ ಶಾಲೆಗಳ ಮೇಲ್ದರ್ಜೆಗೆ ಕ್ರಮ

- ಅಲ್ಪಸಂಖ್ಯಾತರ ಇಲಾಖೆ ನಿರ್ವಹಿಸುತ್ತಿರುವ 5 ಮೊರಾರ್ಜಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ.
- ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ 2 ಲಕ್ಷ ಮನೆಗಳ ನಿರ್ಮಾಣಕ್ಕೆ 1500 ಕೋಟಿ ಒದಗಿಸಲು ಕ್ರಮ.
- ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲ ಸೌಕರ್ಯ ವೃದ್ಧಿಗೆ ಕ್ರಮ.- ಮಕ್ಕಳು ಪಠ್ಯವನ್ನು ಉಲ್ಲಾಸದಿಂದ ಕಲಿಯುವಂತೆ ಮಾಡಲು ತಿಂಗಳಲ್ಲಿ 2 ದಿನ ಬ್ಯಾಗ್ ರಹಿತ ದಿನವಾಗಿ ಮಾಡಲು ಸೂಚನೆ.

- ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ 4 ಕೋಟಿ ಅನುದಾನ.

'ಶಿಕ್ಷಕ ಮಿತ್ರ' ಆಪ್ ಅಭಿವೃದ್ಧಿ

'ಶಿಕ್ಷಕ ಮಿತ್ರ' ಆಪ್ ಅಭಿವೃದ್ಧಿ

-ಶಿಕ್ಷಕರಿಗೆ ಎಲ್ಲ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು ಕ್ರಮ. ಶಿಕ್ಷಕರಿಗಾಗಿ 'ಶಿಕ್ಷಕ ಮಿತ್ರ' ಆಪ್ ಅಭಿವೃದ್ಧಿಪಡಿಸಲು ಕ್ರಮ.

- ಪದವಿ ಪೂರ್ವ ವಿದ್ಯಾರ್ಥಿಗಳಿಗೆ 'ವಿಜ್ಞಾನ ಪ್ರತಿಭಾ ಶೋಧನೆ' ಕಾರ್ಯಕ್ರಮ ಪ್ರಾರಂಭ. ಆಯ್ಕೆಯಾದ 500 ವಿದ್ಯಾರ್ಥಿಗಳಿಗೆ ಎರಡು ವರ್ಷ ಶಿಕ್ಷಣ, ಒಂದು ಸಾವಿರ ರೂ. ಮಾಸಿಕ ಶಿಷ್ಯವೇತನ.

- ಒಂದೇ ಸೂರಿನಡಿ ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿಪೂರ್ವ ತರಗತಿವರೆಗೆ ಶಿಕ್ಷಣ ನೀಡುವ 276 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.

- ನಬಾರ್ಡ್ ಸಹಯೋಗದಲ್ಲಿ 758 ಕೋಟಿ ರೂ. ವೆಚ್ಚದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಕ್ರಮ.

- ಶಾಸಕರು ತಮ್ಮ ಕ್ಷೇತ್ರದ ವ್ಯಾಪ್ತಿಯ ತಲಾ ಮೂರು ಶಾಲೆಗಳ ದತ್ತು ಸ್ವೀಕಾರ ಮತ್ತು ಅಭಿವೃದ್ಧಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ರಮ.

- 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಒಂದು ಕೋಟಿ ರೂ. ಅನುದಾನ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಐದು ಕೋಟಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಐದು ಕೋಟಿ

- ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐ.ಐ.ಟಿ. ಮಾದರಿಯಲ್ಲಿ ಸ್ವಾಯತ್ತಗೊಳಿಸಿ ಅಭಿವೃದ್ಧಿಪಡಿಸಲು 10 ಕೋಟಿ ರೂ. ಅನುದಾನ.

- ತಂತ್ರಜ್ಞಾನದ ನೆರವಿನಿಂದ ರಾಜ್ಯದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಆಡಳಿತ ವ್ಯವಸ್ಥೆಯ ಸಮರ್ಥ ನಿರ್ವಹಣೆಗೆ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಶಾಶ್ವತ ವ್ಯವಸ್ಥೆ.

- ಇಂಟರ್ಯಾಕ್ಟೀವ್ ಆನ್-ಲೈನ್ ಕೋರ್ಸ್‍ಗಳನ್ನು (M.O.O.C) ಪ್ರಾರಂಭ ಹಾಗೂ ಗುಣಾತ್ಮಕ ಇ-ಕಂಟೆಂಟ್ ಅಭಿವೃದ್ಧಿಗೆ ಒಂದು ಕೋಟಿ ರೂ. ವೆಚ್ಚ

- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ತಲಾ ಐದು ಕೋಟಿ ರೂ. ವೆಚ್ಚದಲ್ಲಿ ಜಿಯೋಸ್ಪೇಶಿಯಲ್ ತಂತ್ರಜ್ಞಾನ ಕೇಂದ್ರ ಸ್ಥಾಪನೆ.

- ಏಷ್ಯಾ ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನ ಆಯೋಜನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+