ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಜೆಟ್ 2020: ಶೈಕ್ಷಣಿಕ ಕ್ಷೇತ್ರಕ್ಕೆ ಬಿಎಸ್‌ವೈ ಕೊಡುಗೆ ಏನು?

|
Google Oneindia Kannada News

ಬೆಂಗಳೂರು, ಮಾರ್ಚ್ 5: 2020-21ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷವಾದ ಸೌಲಭ್ಯಗಳನ್ನು ಘೋಷಣೆ ಮಾಡಿದ್ದಾರೆ.

ಕರ್ನಾಟಕ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಯ ನಿಟ್ಟಿನಲ್ಲಿ ವಸತಿ ಶಾಲೆಗಳ ಮೇಲ್ದರ್ಜೆಗೆ ಕ್ರಮ, ಶಿಕ್ಷಕ ಮಿತ್ರ ಆಪ್ ಅಭಿವೃದ್ಧಿ, ತಿಂಗಳಲ್ಲಿ 2 ದಿನ ಬ್ಯಾಗ್ ರಹಿತ ದಿನ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಸಿಎಂ ಘೋಷಿಸಿದರು.

Rank ಪಡೆದವರಿಗೆ ಬಂಪರ್

Rank ಪಡೆದವರಿಗೆ ಬಂಪರ್

-ಪ್ರತಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
- ಇದಕ್ಕಾಗಿ 60 ಲಕ್ಷ ರೂಪಾಯಿ ಅನುದಾನ
- ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
- ಎಸ್‌ಟಿ ಎಸ್‌ಸಿ ವಿದ್ಯಾರ್ಥಿಗಳಿಗೆ ಒಂದು ಲಕ್ಷ ನೀಡಲು ಕ್ರಮ

Karnataka Budget Live: ನಾಳೆ ಬೆಳಗ್ಗೆ 10.30ಕ್ಕೆ ಬಜೆಟ್ ಅಧಿವೇಶನKarnataka Budget Live: ನಾಳೆ ಬೆಳಗ್ಗೆ 10.30ಕ್ಕೆ ಬಜೆಟ್ ಅಧಿವೇಶನ

ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಶೇ 25 ರಷ್ಟು ಸ್ಥಾನ ಮೀಸಲು

ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಶೇ 25 ರಷ್ಟು ಸ್ಥಾನ ಮೀಸಲು

- ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ತಾಲ್ಲೊಕಿನ ವಿದ್ಯಾರ್ಥಿಗಳಿಗೆ ಶೇ 25 ರಷ್ಟು ಸ್ಥಾನಗಳನ್ನು ಮೀಸಲಿಡಲು ಕ್ರಮ

* ವಸತಿ ಶಾಲೆಗಳ ಮೇಲ್ದರ್ಜೆಗೆ ಕ್ರಮ

- ಅಲ್ಪಸಂಖ್ಯಾತರ ಇಲಾಖೆ ನಿರ್ವಹಿಸುತ್ತಿರುವ 5 ಮೊರಾರ್ಜಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ.
- ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ 2 ಲಕ್ಷ ಮನೆಗಳ ನಿರ್ಮಾಣಕ್ಕೆ 1500 ಕೋಟಿ ಒದಗಿಸಲು ಕ್ರಮ.
- ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲ ಸೌಕರ್ಯ ವೃದ್ಧಿಗೆ ಕ್ರಮ.- ಮಕ್ಕಳು ಪಠ್ಯವನ್ನು ಉಲ್ಲಾಸದಿಂದ ಕಲಿಯುವಂತೆ ಮಾಡಲು ತಿಂಗಳಲ್ಲಿ 2 ದಿನ ಬ್ಯಾಗ್ ರಹಿತ ದಿನವಾಗಿ ಮಾಡಲು ಸೂಚನೆ.

- ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ 4 ಕೋಟಿ ಅನುದಾನ.

'ಶಿಕ್ಷಕ ಮಿತ್ರ' ಆಪ್ ಅಭಿವೃದ್ಧಿ

'ಶಿಕ್ಷಕ ಮಿತ್ರ' ಆಪ್ ಅಭಿವೃದ್ಧಿ

-ಶಿಕ್ಷಕರಿಗೆ ಎಲ್ಲ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು ಕ್ರಮ. ಶಿಕ್ಷಕರಿಗಾಗಿ 'ಶಿಕ್ಷಕ ಮಿತ್ರ' ಆಪ್ ಅಭಿವೃದ್ಧಿಪಡಿಸಲು ಕ್ರಮ.

- ಪದವಿ ಪೂರ್ವ ವಿದ್ಯಾರ್ಥಿಗಳಿಗೆ 'ವಿಜ್ಞಾನ ಪ್ರತಿಭಾ ಶೋಧನೆ' ಕಾರ್ಯಕ್ರಮ ಪ್ರಾರಂಭ. ಆಯ್ಕೆಯಾದ 500 ವಿದ್ಯಾರ್ಥಿಗಳಿಗೆ ಎರಡು ವರ್ಷ ಶಿಕ್ಷಣ, ಒಂದು ಸಾವಿರ ರೂ. ಮಾಸಿಕ ಶಿಷ್ಯವೇತನ.

ಕೃಷಿ ಕ್ಷೇತ್ರಕ್ಕೆ 'ರೈತ ನಾಯಕ' ಯಡಿಯೂರಪ್ಪ ನೀಡಿದ ಕೊಡುಗೆ ಏನು?ಕೃಷಿ ಕ್ಷೇತ್ರಕ್ಕೆ 'ರೈತ ನಾಯಕ' ಯಡಿಯೂರಪ್ಪ ನೀಡಿದ ಕೊಡುಗೆ ಏನು?

- ಒಂದೇ ಸೂರಿನಡಿ ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿಪೂರ್ವ ತರಗತಿವರೆಗೆ ಶಿಕ್ಷಣ ನೀಡುವ 276 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.

- ನಬಾರ್ಡ್ ಸಹಯೋಗದಲ್ಲಿ 758 ಕೋಟಿ ರೂ. ವೆಚ್ಚದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಕ್ರಮ.

- ಶಾಸಕರು ತಮ್ಮ ಕ್ಷೇತ್ರದ ವ್ಯಾಪ್ತಿಯ ತಲಾ ಮೂರು ಶಾಲೆಗಳ ದತ್ತು ಸ್ವೀಕಾರ ಮತ್ತು ಅಭಿವೃದ್ಧಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ರಮ.

- 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಒಂದು ಕೋಟಿ ರೂ. ಅನುದಾನ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಐದು ಕೋಟಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಐದು ಕೋಟಿ

- ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐ.ಐ.ಟಿ. ಮಾದರಿಯಲ್ಲಿ ಸ್ವಾಯತ್ತಗೊಳಿಸಿ ಅಭಿವೃದ್ಧಿಪಡಿಸಲು 10 ಕೋಟಿ ರೂ. ಅನುದಾನ.

- ತಂತ್ರಜ್ಞಾನದ ನೆರವಿನಿಂದ ರಾಜ್ಯದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಆಡಳಿತ ವ್ಯವಸ್ಥೆಯ ಸಮರ್ಥ ನಿರ್ವಹಣೆಗೆ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಶಾಶ್ವತ ವ್ಯವಸ್ಥೆ.

ಕರ್ನಾಟಕ ಬಜೆಟ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಕರ್ನಾಟಕ ಬಜೆಟ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

- ಇಂಟರ್ಯಾಕ್ಟೀವ್ ಆನ್-ಲೈನ್ ಕೋರ್ಸ್‍ಗಳನ್ನು (M.O.O.C) ಪ್ರಾರಂಭ ಹಾಗೂ ಗುಣಾತ್ಮಕ ಇ-ಕಂಟೆಂಟ್ ಅಭಿವೃದ್ಧಿಗೆ ಒಂದು ಕೋಟಿ ರೂ. ವೆಚ್ಚ

- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ತಲಾ ಐದು ಕೋಟಿ ರೂ. ವೆಚ್ಚದಲ್ಲಿ ಜಿಯೋಸ್ಪೇಶಿಯಲ್ ತಂತ್ರಜ್ಞಾನ ಕೇಂದ್ರ ಸ್ಥಾಪನೆ.

- ಏಷ್ಯಾ ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನ ಆಯೋಜನೆ.

English summary
Karnataka Budget 2020: Karnataka chief minister and Finance minister B. S. Yediyurappa allocates new projects for education development.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X