ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

Karnataka Budget 2021 Live Updates; ಕರ್ನಾಟಕ ಬಜೆಟ್ 2021 ಕ್ಷಣ-ಕ್ಷಣದ ಮಾಹಿತಿ

|
Google Oneindia Kannada News

ಬೆಂಗಳೂರು, ಮಾರ್ಚ್ 08: ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 2021ನೇ ಸಾಲಿನ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಪ್ರತ್ಯೇಕವಾಗಿ ಕೃಷಿ ಬಜೆಟ್ ಮಂಡನೆ ಮಾಡದಿದ್ದರೂ ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿರೀಕ್ಷೆ ಇದೆ.

ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸಭೆಯಲ್ಲಿ 2021ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಕೋವಿಡ್ ಪರಿಸ್ಥಿತಿಯಲ್ಲಿ ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟವಾಗಿದೆ. ಹಣಕಾಸು ಸ್ಥಿತಿ ಸುಧಾರಿಸಲು ಯಾವ ಕ್ರಮ ಕೈಗೊಂಡಿದ್ದಾರೆ? ಎಂಬ ಕುತೂಹಲವಿದೆ.

ಈ ಬಾರಿ ಪ್ರತ್ಯೇಕವಾಗಿ ಕೃಷಿ ಬಜೆಟ್ ಮಂಡಿಸುತ್ತಿಲ್ಲ. ಆದರೆ, ತಮ್ಮದು ರೈತ ಪರ ಸರ್ಕಾರ ಎಂದು ಹೇಳಿಕೊಳ್ಳುವ ಬಿಜೆಪಿ ಬಜೆಟ್‌ನಲ್ಲಿ ರೈತರಿಗೆ ಯಾವ ಕೊಡುಗೆ ನೀಡಲಿದೆ? ಎಂದು ಕಾದು ನೋಡಬೇಕು. ಆರೋಗ್ಯ, ಕೈಗಾರಿಕೆ, ಬೆಂಗಳೂರು ಅಭಿವೃದ್ಧಿ ಬಗ್ಗೆಯೂ ಅಪಾರವಾದ ನಿರೀಕ್ಷೆಗಳಿವೆ.

Karnataka Budget 2021 Live News and Updates in Kannada

ನೀರಾವರಿ, ಮೂಲಸೌಕರ್ಯ ಅಭಿವೃದ್ಧಿ ಮುಂತಾದ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ. ಕರ್ನಾಟಕ ಬಜೆಟ್ 2021ರ ಕ್ಷಣ-ಕ್ಷಣದ ಮಾಹಿತಿ, ಚಿತ್ರ, ವಿಡಿಯೋ, ಪ್ರತಿಕ್ರಿಯೆಗಳು ಈ ಪುಟದಲ್ಲಿ ಓದುಗರಿಗೆ ಲಭ್ಯವಿದೆ.

Recommended Video

      ರಾಜಾಹುಲಿಯ ಬಜೆಟ್ ಗೆ ಕೌಂಟ್ ಡೌನ್ ಶುರು | Oneindia Kannada

      Newest FirstOldest First
      2:08 PM, 8 Mar

      ಬಜೆಟ್ ಭಾಷಣ ಮುಕ್ತಾಯಗೊಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ. ವಿಧಾನಸಭೆ ಕಲಾಪವನ್ನು ಮಂಗಳವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ.
      2:07 PM, 8 Mar

      ರಾಜ್ಯದ ಆಯ್ದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಜೆ ಕಾಲೇಜುಗಳನ್ನು ಆರಂಭಿಸಲಾಗುತ್ತದೆ. ಆಯ್ದ 50 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ತಲಾ 2 ಕೋಟಿ ರೂ.ಗಳ ಅನುದಾನ
      2:06 PM, 8 Mar

      ಜ್ಞಾನಪೀಠ ಪ್ರಶಸ್ತಿ ಪಡೆದ ಸಾಹಿತಿಗಳು ವ್ಯಾಸಂಗ ಮಾಡಿದ ಶಾಲೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತದೆ. ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಡಿಜಿಟಲ್ ಕಲಿಕೆಗೆ ಒತ್ತು ನೀಡಲಾಗುತ್ತದೆ. ಇದಕ್ಕಾಗಿ ಸ್ಮಾರ್ಟ್‌ ಕ್ಲಾಸ್ ರೂಂ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ.
      2:04 PM, 8 Mar

      ಎಲ್ಲಾ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ತಲಾ 8 ಲಕ್ಷ ರೂ. ವೆಚ್ಚದಲ್ಲಿ ಕಂಪ್ಯೂಟರ್ ಲ್ಯಾಬ್ ಸ್ಥಾಪನೆ ಮಾಡಲಾಗುತ್ತದೆ. 150 ಕೋಟಿ ರೂ. ವೆಚ್ಚದಲ್ಲಿ ಪ್ರೌಢಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತದೆ.
      2:01 PM, 8 Mar

      ಒಂದೇ ಒಂದು ಪೈಸೆ ತೆರಿಗೆಯನ್ನು ಹೆಚ್ಚಳ ಮಾಡಿಲ್ಲ. ಇದು ಬಜೆಟ್‌ನ ವಿಶೇಷವಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿ ಘೋಷಣೆ ಮಾಡಿದರು.
      2:00 PM, 8 Mar

      ಸಾರಿಗೆ ಇಲಾಖೆಯ 66 ಕಚೇರಿಗಳನ್ನು ಡಿಜಿಟಲೀಕರಣ ಮಾಡಲಾಗುತ್ತದೆ. 2021-22ನೇ ಸಾಲಿನಲ್ಲಿ ಸಾರಿಗೆ ಇಲಾಖೆಯಿಂದ 7,515 ಕೋಟಿ ರೂ. ಆದಾಯವನ್ನು ನಿರೀಕ್ಷೆ ಮಾಡಲಾಗಿದೆ.
      1:58 PM, 8 Mar

      ದ್ರಾಕ್ಷಿ ಕೃಷಿ ಉತ್ತೇಜನಕ್ಕೆ ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ ರಚನೆ ಮಾಡಲಾಗುತ್ತದೆ.
      Advertisement
      1:53 PM, 8 Mar

      ಸುವಾಸನೆಯುಕ್ತ ಮತ್ತು ವೈದ್ಯಕೀಯ ಗಿಡಗಳು, ಹಣ್ಣು, ತರಕಾರಿಗಳು ಮತ್ತು ಸಾಂಬಾರ ಪದಾರ್ಥಗಳಿಗಾಗಿ ಹೊಸ ಕೃಷಿ ರಫ್ತು ವಲಯವನ್ನು ಸ್ಥಾಪನೆ ಮಾಡಲಾಗುತ್ತದೆ. ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪೂರಕ ಸೌಲಭ್ಯವನ್ನು ನೀಡಲಾಗುತ್ತದೆ.
      1:51 PM, 8 Mar

      ಸಿಂಗೇನ ಅಗ್ರಹಾರ ಸಮೀಪ ಗುಳಿಮಂಗಳ ಗ್ರಾಮದಲ್ಲಿ ಆಧುನಿಕ ತರಕಾರಿ ಮಾರುಕಟ್ಟೆ ನಿರ್ಮಾಣ ಮಾಡಲಾಗುತ್ತದೆ. ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೂವಿನ ಮಾರುಕಟ್ಟೆಯನ್ನು ಸ್ಥಾಪಿಸಲಾಗುತ್ತದೆ.
      1:49 PM, 8 Mar

      ಚಲನಚಿತ್ರಗಳ ಶೂಟಿಂಗ್‌ಗೆ ತೆರಳಲು ಇನ್ನು ಮುಂದೆ ವಿವಿಧ ಇಲಾಖೆಗಳ ಮೂಲಕ ಅನುಮತಿ ಪಡೆಯುವ ಅಗತ್ಯವಿಲ್ಲ. ಏಕಗವಾಕ್ಷಿ ಮಾದರಿಯನ್ನು ಜಾರಿಗೆ ತರಲಿದ್ದು, ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ.
      1:48 PM, 8 Mar

      ಕರ್ನಾಟಕ ಸರ್ಕಾರ 2020-21ನೇ ಸಾಲಿನಲ್ಲಿ ಅಬಕಾರಿ ಇಲಾಖೆಯಿಂದ 22,700 ಕೋಟಿ ಆದಾಯವನ್ನು ನಿರೀಕ್ಷೆ ಮಾಡಿತ್ತು. ಫೆಬ್ರವರಿ ಅಂತ್ಯದ ತನಕ 20,900 ಕೋಟಿ ರೂ. ಆದಾಯ ಬಂದಿದೆ. 2021-22ನೇ ಸಾಲಿನಲ್ಲಿ ಇಲಾಖೆಯಿಂದ 24,580 ಕೋಟಿ ರೂ. ಆದಾಯವನ್ನು ನಿರೀಕ್ಷೆ ಮಾಡಲಾಗಿದೆ.
      1:45 PM, 8 Mar

      2021-22ನೇ ಸಾಲಿನಲ್ಲಿ 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಆರಂಭಿಸಲು ಆದೇಶವನ್ನು ಹೊರಡಿಸಲಾಗುತ್ತದೆ. ಅಲ್ಪ ಸಂಖ್ಯಾತರಿಗೆ ಅನುದಾನ ಕಡಿತ ಮಾಡುತ್ತಿದೆ ಎಂದು ಪ್ರತಿಪಕ್ಷ ಆರೋಪಿಸುತ್ತಿದೆ. ಅಲ್ಪ ಸಂಖ್ಯಾತರಿಗಾಗಿ 1,500 ಕೋಟಿ ಅನುದಾನವನ್ನು ಘೋಷಿಸುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.
      Advertisement
      1:43 PM, 8 Mar

      2020-21ನೇ ಹಣಕಾಸು ವರ್ಷದಲ್ಲಿ ಸಾರಿಗೆ ಇಲಾಖೆಯಿಂದ 7,115 ಕೋಟಿ ರೂ. ಆದಾಯವನ್ನು ನಿರೀಕ್ಷೆ ಮಾಡಲಾಗಿತ್ತು. ಆದರೆ, ಕೋವಿಡ್ ಲಾಕ್ ಡೌನ್ ಪರಿಣಾಮ ಜನವರಿ ತನಕ 4,294 ಕೋಟಿ ರೂ. ಆದಾಯ ಮಾತ್ರ ಸಂಗ್ರಹವಾಗಿದೆ. 2021-22ನೇ ಸಾಲಿನಲ್ಲಿ 7,515 ಕೋಟಿ ರೂ. ಆದಾಯವನ್ನು ನಿರೀಕ್ಷೆ ಮಾಡಲಾಗಿದೆ.
      1:40 PM, 8 Mar

      ಮಹಿಳೆಯರು ಉದ್ಯಮ ಆರಂಭಿಸಲು ಆದ್ಯತೆ
      1:38 PM, 8 Mar

      ಹಾಸನ ಮತ್ತು ಮಂಡ್ಯ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಇರುವ ಸೀಟುಗಳ ಸಂಖ್ಯೆಯನ್ನು 100ಕ್ಕೆ ಹೆಚ್ಚಳ ಮಾಡಲಾಗುತ್ತದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿಯೂ ಜಯದೇವ ಆಸ್ಪತ್ರೆಯ ಉಪ ಕೇಂದ್ರವನ್ನು ಸ್ಥಾಪನೆ ಮಾಡಲಾಗುತ್ತದೆ.
      1:36 PM, 8 Mar

      ದಾವಣಗೆರೆಯಲ್ಲಿ 50 ಹಾಸಿಗೆ ಸಾಮಾರ್ಥ್ಯವುಳ್ಳ ಜಯದೇವ ಹೃದ್ರೋಗ ವಿಜ್ಞಾನ ಕೇಂದ್ರದ ಉಪ ಕೇಂದ್ರವನ್ನು 20 ಕೋಟಿ ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುತ್ತದೆ. ಕಲಬುರಗಿಯಲ್ಲಿ ಸುಟ್ಟಗಾಯಗಳ ಚಿಕಿತ್ಸೆ ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗ ನಿರ್ಮಾಣ.
      1:34 PM, 8 Mar

      60 ಕೋಟಿ ವೆಚ್ಚದಲ್ಲಿ ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಸಾಮಾರ್ಥ್ಯವುಳ್ಳ ಹಾಗೂ 10 ತಾಲೂಕು ಆಸ್ಪತ್ರೆಗಳಲ್ಲಿ 6 ಹಾಸಿಗೆಗಳ ಐಸಿಯು ವಾರ್ಡ್‌ಗಳನ್ನು ಸ್ಥಾಪನೆ ಮಾಡಲಾಗುತ್ತದೆ.
      1:29 PM, 8 Mar

      100 ಪೊಲೀಸ್ ಠಾಣೆಗಳ ನಿರ್ಮಾಣ ಮಾಡಲು 200 ಕೋಟಿ ರೂ. ಅನುದಾನ. ಕರಾವಳಿ ಭದ್ರತಾ ಪಡೆ ತಂತ್ರಜ್ಞಾನ ಅಭಿವೃದ್ಧಿಗೆ 2 ಕೋಟಿ ರೂ. ಅನುದಾನ ಮೀಸಲು.
      1:24 PM, 8 Mar

      ಬಜೆಟ್‌ನಲ್ಲಿ ಮಹಿಳೆಯರಿಗೆ ನೀಡಿದ ಕೊಡುಗೆ
      1:22 PM, 8 Mar

      ಕೃಷಿ ವಲಯಕ್ಕೆ ಕೊಡುಗೆ
      1:20 PM, 8 Mar

      ಕೃಷ್ಣಭಾಗ್ಯ ಜಲ ನಿಗಮಕ್ಕೆ 5600 ಕೋಟಿ ಅನುದಾನ. ನೀರಾವರಿ ಕಾಮಗಾರಿಗಳ ಅನುಷ್ಠಾನಕ್ಕೆ ಈ ಹಣವನ್ನು ವಿನಿಯೋಗ ಮಾಡಲಾಗುತ್ತದೆ. 234 ಕೆರೆಗಳನ್ನು ತುಂಬಿಸಲು 500 ಕೋಟಿ ರೂ.ಗಳಲ್ಲಿ ಬೆಂಗಳೂರು ನಗರ, ತುಮಕೂರು ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸಲಾಗುತ್ತದೆ.
      1:14 PM, 8 Mar

      ಮಂಗಳೂರಿನ ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಮಾಡಲು 150 ಕೋಟಿ ರೂ., ಮಂಗಳೂರು-ಪಣಜಿ ಜಲಮಾರ್ಗ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಮಾಡಲಾಗುತ್ತದೆ.
      1:12 PM, 8 Mar

      ಕುರಿ, ಮೇಕೆಗಳು ಆಕಸ್ಮಿಕವಾಗಿ ಸತ್ತರೆ 5 ಸಾವಿರ ರೂ.ಗಳ ಪರಿಹಾರ ನೀಡುವ 'ಅನುಗ್ರಹ' ಯೋಜನೆಯನ್ನು ಮುಂದುವರೆಸಲಾಗುತ್ತದೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೆಲವು ದಿನಗಳ ಹಿಂದೆ ಈ ಯೋಜನೆ ಹೆಸರೇ ಯಡಿಯೂರಪ್ಪಗೆ ತಿಳಿದಿಲ್ಲ ಎಂದು ಆರೋಪಿಸಿದ್ದರು.
      1:09 PM, 8 Mar

      ರಾಜ್ಯದಲ್ಲಿ 100 ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರವನ್ನು ಸ್ಥಾಪನೆ ಮಾಡಲಾಗುತ್ತದೆ. 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರವನ್ನು ಆರಂಭಿಸಲಾಗುತ್ತದೆ. ಮನೆ ಬಾಗಿಲಿಗೆ ತಲುಪಿಸಲು ಮನೆ ಬಾಗಿಲಿಗೆ ಮಾಶಾಸನ ಅಭಿಯಾನವನ್ನು ಆರಂಭಿಸಲಾಗುತ್ತದೆ.
      1:06 PM, 8 Mar

      ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಮಾಡಲಾಗುತ್ತದೆ. ಹಾಸನ ಮತ್ತು ಮಂಡ್ಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಇರುವ ಸೀಟುಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುತ್ತದೆ.
      1:04 PM, 8 Mar

      ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 384 ಕೋಟಿ, ಹಾಸನ ವಿಮಾನ ನಿಲ್ದಾಣಕ್ಕೆ 175 ಕೋಟಿ, ವಿಜಯಪುರ ವಿಮಾನ ನಿಲ್ದಾಣಕ್ಕೆ 220 ಕೋಟಿ ರೂ. ಅನುದಾನ.
      1:03 PM, 8 Mar

      ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಾಲುಸಂಕ ನಿರ್ಮಾಣಕ್ಕೆ 100 ಕೋಟಿ ರೂ. ಅನುದಾನ. ರೈಲ್ವೆ ಯೋಜನೆಗಳಿಗಾಗಿ 3,391 ರೂಪಾಯಿ ಅನುದಾನ. ರೈಲ್ವೆ ಯೋಜನೆಗಳಿಗೆ ಅಗತ್ಯವಿರುವ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲು 2,260 ಕೋಟಿ ರೂ. ಅನುದಾನ.
      1:01 PM, 8 Mar

      ಕಬಿನಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ಮಾಣ, ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಪೇಜಾವರ ಶ್ರೀಗಳ ಹೆಸರಿನಲ್ಲಿ ಸೃತಿ ವನ ನಿರ್ಮಾಣ, ಬೇಡ್ತಿ-ವರದಾ ನದಿ ಜೋಡಣೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಕಳಸಾ ಬಂಡೂರಿ ಯೋಜನೆಗೆ 1,677 ಕೋಟಿ ರೂ. ಅನುದಾನ. ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಲು ಕೇಂದ್ರಕ್ಕೆ ಒತ್ತಾಯ ಮಾಡಲಾಗುತ್ತದೆ. 58 ಡ್ಯಾಂಗಳ ಪುನಶ್ಚೇತನಕ್ಕೆ ಕ್ರಮವನ್ನು ಕೈಗೊಳ್ಳಲಾಗುತ್ತದೆ.
      12:59 PM, 8 Mar

      ಧಾರವಾಡ-ಕಿತ್ತೂರು-ಬೆಳಗಾವಿ ನೇರ ರೈಲು ಮಾರ್ಗ ಯೋಜನೆಗಾಗಿ 463 ಕೋಟಿ ರೂ. ಅನುದಾನ
      12:55 PM, 8 Mar

      ಶಿವಮೊಗ್ಗದಲ್ಲಿರುವ ಆಯುರ್ವೇದ ಕಾಲೇಜನ್ನು ಅಭಿವೃದ್ಧಿಗೊಳಿಸಿ . ಆಯುಷ್ ವಿಶ್ವವಿದ್ಯಾಲಯವಾಗಿ ನಿರ್ಮಾಣ ಮಾಡಲಾಗುತ್ತದೆ. ಚಿತ್ರದುರ್ಗದ ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಮಾಡಲಾಗುತ್ತದೆ.
      READ MORE

      English summary
      Karnataka Budget 2021 Live News and Updates : CM Yediyurappa to present Karnataka budget today. Stay tuned to all the live updates
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X