ಕರ್ನಾಟಕ ಬಜೆಟ್ 2021: ಧಾರ್ಮಿಕ, ಮಠಗಳ ಅಭಿವೃದ್ಧಿಗೆ ಅನುದಾನ

ಬೆಂಗಳೂರು, ಮಾರ್ಚ್ 8: ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದಾರೆ, ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಗಳಿಗಾಗಿ 1,500ಮ ಕೋಟಿ ರೂ. ಅನುದಾನ ಮೀಸಲಿಡಲಾಗದೆ ಎಂದು ಅವರು ತಿಳಿಸಿದ್ದಾರೆ.

ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ ಇಡಲಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ 500 ಕೋಟಿ ರೂ ಅನುದಾನ ಘೋಷಿಸಲಾಗಿದೆ. ಒಕ್ಕಲಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು, ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ 500 ಕೋಟಿ ರೂ ಅನುದಾನ ನೀಡಲಾಗುವಯದು. ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ, ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ ಪ್ರಕಟಿಸಲಾಗಿದೆ.

ಅಯೋಧ್ಯೆಯ ಶ್ರೀರಾಮಜನ್ಮಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ನೀಡಲಾಗುತ್ತಿದ್ದು, ಕಿತ್ತೂರು ಕೋಟೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುವುದು. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗಾಗಿ 5 ಕೋಟಿ ರೂ ನೀಡಲಾಗುವುದು.

Karnataka Budget 2021: Major Allocations For Religious Places Development

ಲಿಂಗೈಕ್ಯರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಶ್ರೀಗಳು ಹಾಗೂ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಸ್ಮೃತಿವನಕ್ಕಾಗಿ 2 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಯಡಿಯೂರಪ್ಪ ಪ್ರಕಟಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+