ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಜೆಟ್ 2021: ಪೊಲೀಸ್ ಇಲಾಖೆಗೆ ಸಿಕ್ಕಿರುವ ಕೊಡುಗೆಗಳೇನು?

|
Google Oneindia Kannada News

ಬೆಂಗಳೂರು, ಮಾರ್ಚ್ 8: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯ ಪೊಲೀಸ್ ಇಲಾಖೆಗೆ ಹಲವು ಕೊಡುಗೆಗಳನ್ನು ಘೋಷಿಸಿದ್ದಾರೆ. 8ನೇ ಬಾರಿ ಬಜೆಟ್ ಮಂಡಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಕರ್ನಾಟಕ ರಾಜ್ಯ ಗೃಹ ಇಲಾಖೆಗೆ ಹಲವು ಭರವಸೆಗಳನ್ನು ನೀಡಿದ್ದಾರೆ.

Karnataka Budget 2021: Major Announcements For Karnataka Police Dept

Recommended Video

ರಾಜಾಹುಲಿಯ ಬಜೆಟ್ ಗೆ ಕೌಂಟ್ ಡೌನ್ ಶುರು | Oneindia Kannada
  • ಮುಂದಿನ ಐದು ವರ್ಷಗಳಲ್ಲಿ 200 ಕೋಟಿ ರೂ.ಗಳ ವೆಚ್ಚದಲ್ಲಿ 100 ಪೊಲೀಸ್ ಠಾಣೆ ನಿರ್ಮಾಣದ ಗುರಿ. 2021-22ರಲ್ಲಿ 25 ಕೋಟಿ ರೂ. ಅನುದಾನ.
  • 2740 ಕೋಟಿ ರೂ.ಗಳ ಮೊತ್ತದಲ್ಲಿ ಪೊಲೀಸ್ ಗೃಹ ೨೦೨೫ ಯೋಜನೆಗೆ ಚಾಲನೆ, 10,032 ವಸತಿಗೃಹ ನಿರ್ಮಾಣದ ಗುರಿ.
  • ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪಡೆಯ 10ನೇ ಬೆಟಾಲಿಯನ್ ಬಲಪಡಿಸಲು 8 ಕೋಟಿ ರೂ. ಅನುದಾನ.
  • ಕೊಡಗು ಮತ್ತು ಹಾವೇರಿ ಜಿಲ್ಲೆಯಲ್ಲಿ ನೂತನ ಜಿಲ್ಲಾ ಪೊಲೀಸ್ ಸಂಕೀರ್ಣ ನಿರ್ಮಾಣಕ್ಕೆ ತಲಾ 8 ಕೋಟಿ ರೂ. ಅನುದಾನ.
  • ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಪರಿಷ್ಕೃತ ಕೆ-ಸೇಫ್ ಯೋಜನೆ ಮುಂದಿನ 5 ವರ್ಷಗಳಲ್ಲಿ ಜಾರಿ.
  • ಆಧುನಿಕ ತಂತ್ರಜ್ಞಾನದೊಂದಿಗೆ ಕರಾವಳಿ ಕಾವಲು ಪಡೆಯನ್ನು ಹಂತ ಹಂತವಾಗಿ ಬಲಪಡಿಸಲು ಕ್ರಮ, ಪ್ರಸಕ್ತ ಸಾಲಿನಲ್ಲಿ 2 ಕೋಟಿ ರೂ. ಅನುದಾನ.
  • 40 ಕೋಟಿ ರೂ.ಗಳ ವೆಚ್ಚದಲ್ಲಿ ರಾಜ್ಯದ ಎಂಟು ಕಾರಾಗೃಹಗಳ ಸಾಮರ್ಥ್ಯ ಹೆಚ್ಚಳ, 2021-22ರಲ್ಲಿ 10 ಕೋಟಿ ರೂ. ಅನುದಾನ.
  • ಖೈದಿಗಳನ್ನು ಕಾರಾಗೃಹದಿಂದಲೇ ಆನ್ ಲೈನ್ ಮೂಲಕ ನ್ಯಾಯಾಲಯ ಕಲಾಪಕ್ಕೆ ಹಾಜರುಪಡಿಸಲು 15 ಕೋಟಿ ರೂ. ವೆಚ್ಚದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಸೌಲಭ್ಯ.
  • ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ಪ್ರಾದೇಶಿಕ ಕೇಂದ್ರ ಪ್ರಾರಂಭ.

English summary
Chief Minister BS Yediyurappa announced several contributions to the state police department in his budget presented on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X