ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಜೆಟ್ 2021: ಮಹಿಳೆಯರಿಗಾಗಿ ವಿವಿಧ ಯೋಜನೆಗಳ ಘೋಷಣೆ

|
Google Oneindia Kannada News

ಬೆಂಗಳೂರು, ಮಾರ್ಚ್ 08: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಇಂದು ಅಂತಾರಾಷ್ಟ್ರೀಯ ಮಹಿಳೆಯರ ದಿನವಾದ ಕಾರಣ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ, ಶೇ.4 ರಷ್ಟು ಬಡ್ಡಿದರದಲ್ಲಿ ಮಹಿಳಾ ಉದ್ಯಮಿಗಳಿಗೆ ಸಾಲ ನೀಡಲಾಗುತ್ತದೆ. ಬಿಎಂಟಿಸಿ ಬಸ್‌ಪಾಸ್‌ನಲ್ಲಿ ಮಹಿಳೆಯರಿಗೆ ರಿಯಾಯಿತಿಯನ್ನು ಕೂಡ ಸರ್ಕಾರ ಘೋಷಿಸಿದೆ.

ಕರ್ನಾಟಕ ಬಜೆಟ್ 2021: ಬಿಎಂಟಿಸಿ ಬಸ್‌ಪಾಸ್‌ನಲ್ಲಿ ಮಹಿಳೆಯರಿಗೆ ರಿಯಾಯಿತಿಕರ್ನಾಟಕ ಬಜೆಟ್ 2021: ಬಿಎಂಟಿಸಿ ಬಸ್‌ಪಾಸ್‌ನಲ್ಲಿ ಮಹಿಳೆಯರಿಗೆ ರಿಯಾಯಿತಿ

ವನಿತಾ ಸಂಗಾತಿ ಹೆಸರಿನಲ್ಲಿ ರಿಯಾಯಿತಿ ಘೋಷಿಸಲಾಗಿದೆ. ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್‌ಲೈನ್ ಮಾರುಕಟ್ಟೆ ಕಲ್ಪಿಸಿಕೊಡಲಾಗುತ್ತದೆ ಎಂದು ಬಜೆಟ್‌ನಲ್ಲಿ ತಿಳಿಸಿದ್ದಾರೆ. ಹಾಗೆಯೇ 2 ಕೋಟಿವರೆಗೆ ಮಹಿಳೆಯರಿಗೆ ಸಾಲ ನೀಡಲಾಗುತ್ತದೆ. ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ರಿಯಾಯಿತಿ ಮೀಸಲಾತಿ ನೀಡಲಾಗುತ್ತದೆ ಎಂದು ಹೇಳಿದರು.

Karnataka Budget 2021: Major Schemes Announced For Women

ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸೂಕ್ತ ನೆರವು ಹಾಗೂ ಮಾರ್ಗದರ್ಶನ ನೀಡಲು ನಿಮ್ಹಾನ್ಸ್ಮತ್ತು ರಾಷ್ಟ್ರೀಯ ಕಾನೂನು ಶಾಲೆಯ ಸಹಯೋಗದೊಂದಿಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ.

ರಾಜ್ಯದ ಸ್ವ-ಸಹಾಯ ಗುಂಪುಗಳು ಮತ್ತು ಅವುಗಳ ಒಕ್ಕೂಟವನ್ನು ಬಲಪಡಿಸಲು ಸ್ವಸಹಾಯ ಗುಂಪುಗಳ ನೀತಿ ಜಾರಿ, ಎಲ್ಲಾ ಸ್ವಸಹಾಯ ಗುಂಪುಗಳನ್ನು ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ತರಲು ಕ್ರಮ.

ಮಹಿಳಾ ಉದ್ದೇಶಿತ ಯೋಜನೆಗಳಿಗೆ 37,188 ಕೋಟಿ ರೂ ಅನುದಾನ, ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಆರು ತಿಂಗಳ ಮಕ್ಕಳ ಆರೈಕೆ ರಜೆ.

ಲಾಕ್ ಡೌನ್ ತೆರವು ಮಾಡಿದ ಬಳಿಕ ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಆದರೆ, ರಾಜಸ್ವ ಸಂಗ್ರಹದಲ್ಲಿ ನಿರೀಕ್ಷಿತ ಗುರಿ ತಲುಪಲು ಸಾಧ್ಯವಿಲ್ಲ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಯಡಿಯೂರಪ್ಪ ಹೇಳಿದರು.

Karnataka Budget 2021 Live Updates; ಕರ್ನಾಟಕ ಬಜೆಟ್ 2021 ಕ್ಷಣ-ಕ್ಷಣದ ಮಾಹಿತಿKarnataka Budget 2021 Live Updates; ಕರ್ನಾಟಕ ಬಜೆಟ್ 2021 ಕ್ಷಣ-ಕ್ಷಣದ ಮಾಹಿತಿ

ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸುಮಾರು 5,372 ಕೋಟಿ ರೂ. ವೆಚ್ಚವನ್ನು ಮಾಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

Recommended Video

ರಾಜಾಹುಲಿಯ ಬಜೆಟ್ ಗೆ ಕೌಂಟ್ ಡೌನ್ ಶುರು | Oneindia Kannada

English summary
Chief Minister BS Yediyurappa Announced various schemes for women in 2021-22 Karnataka Budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X