ಮುಂದಿನ ವರ್ಷದಿಂದಲೇ ಎನ್ಇಪಿ ಜಾರಿ: ಹೊಸ ಪಠ್ಯ: ಬಜೆಟ್‌ನಲ್ಲಿ ಬೊಮ್ಮಾಯಿ ಘೋಷಣೆ

ಬೆಂಗಳೂರು, ಮಾ. 04: ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ಹೋಬಳಿ ಮಟ್ಟದಲ್ಲಿ ಸರ್ಕಾರದ ಮಾದರಿ ಶಾಲೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಚಿಂತನೆ ನಡಸಿದೆ.

ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೋಬಳಿ ಮಟ್ಟದ ಮಾದರಿ ಶಾಲೆ ನಿರ್ಮಾಣದ ಭರವಸೆಯನ್ನು ಘೋಷಣೆ ಮಾಡಿದರು. ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆ ನಿರ್ಮಿಸುವ ಮೂಲಕ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಇದನ್ನು ಪರಿಗಣಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ಹೋಬಳಿ ಮಟ್ಟದಲ್ಲಿ ಸರ್ಕಾರದ ಮಾದರಿ ಶಾಲೆಗಳನ್ನು ನಿರ್ಮಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

ಎನ್ಇಪಿ ಜಾರಿ: ರಾಜ್ಯದಲ್ಲಿ ಪ್ರಸಕ್ತ 2022-23 ನೇ ಶೈಕ್ಷಣಿಕ ಸಾಲಿನಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತಿದ್ದು ಅದಕ್ಕೆ ಅನುಗುಣವಾಗಿ ನೂತನ ಪಠ್ಯಕ್ರಮ ಪರಿಚಯಿಸುವ ಘೋಷಣೆಯನ್ನು ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಉನ್ನತ ಶಿಕ್ಷಣದಲ್ಲಿ ಎನ್ಇಪಿಯನ್ನು ಕರ್ನಾಟಕ ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ತಂದಿತ್ತು. ಈ ಹಿನ್ನೆಲೆಯಲ್ಲಿ ಅನೇಕ ಸಮಸ್ಯೆಗಳನ್ನು ಉನ್ನತ ಶಿಕ್ಷಣ ಇಲಾಖೆ ಎದುರಿಸಿತ್ತು.

Karnataka Budget 2022: CM Basavaraj Bommai Announces NEP to be implemented from 2022-23 Academic Year

ಪ್ರಾಥಮಿಕ ಹಾಗೂ ಪದವಿ ಪೂರ್ವ ಶಿಕ್ಷಣ ಹಂತದಲ್ಲಿ ಎನ್ಇಪಿ ಅನುಷ್ಠಾನ ಸಂಬಂಧ ಶಿಕ್ಷಣ ಇಲಾಖೆ ನಿವೃತ್ತ ಇಲಾಖೆಯ ಹಿರಿಯ ಐಎಎಸ್ ಅಧಿಕಾರಿ ಮದನ ಗೋಪಾಲ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು . ಸಮಿತಿಯ ನಿರ್ದೇಶನ ಮೇರೆಗೆ 23 ಉಪ ಸಮಿತಿಗಳನ್ನು ರಚಿಸಿದ್ದು, ವರದಿಯನ್ನು ಸಲ್ಲಿಸಿವೆ. ಇದೀಗ ನೂತನ ಶಿಕ್ಷಣ ನೀತಿಯ ಸಂಬಂಧ ಹೊಸ ಪಠ್ಯಕ್ರಮ ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+