Breaking; ಪೌರ ಕಾರ್ಮಿಕರ ಜೊತೆ ಫೋಟೋ ತೆಗೆಸಿಕೊಂಡ ಸಿಎಂ
ಬೆಂಗಳೂರು, ಮಾರ್ಚ್ 04; ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಬಸವರಾಜ ಬೊಮ್ಮಾಯಿ ಇಂದು 2022-23ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ತಮ್ಮ ಚೊಚ್ಚಲ ಬಜೆಟ್ ಮಂಡನೆಗೂ ಮುನ್ನ ಅವರು ದೇವಾಲಯಗಳಿಗೆ ಭೇಟಿ ನೀಡಿದರು.
ಶುಕ್ರವಾರ ಬೆಳಗ್ಗೆ ಆರ್. ಟಿ. ನಗರದಲ್ಲಿರುವ ಶ್ರೀಕಂಠೇಶ್ವರ ದೇವಾಲಯಕ್ಕೆ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು. ಸಚಿವರ ಗೋವಿಂದ ಎ. ಕಾರಜೋಳ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಸ್ತ ಕರ್ನಾಟಕದ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ರಾಜ್ಯದ ಜನತೆಗೆ ಸುಖ, ಶಾಂತಿ, ನೆಮ್ಮದಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ದೇವಾಲಯದಿಂದ ಹೊರ ಬಂದ ಮುಖ್ಯಮಂತ್ರಿಗಳು ಅಲ್ಲಿ ಕೆಲಸ ಮಾಡುತ್ತಿದ್ದ ಪೌರ ಕಾರ್ಮಿಕರನ್ನು ಮಾತನಾಡಿಸಿದರು. ಅವರ ಹೆಸರು ಕೇಳಿದರು ಜೊತೆಗೆ ಫೋಟೋ ತೆಗೆಸಿಕೊಂಡರು.
ಆರ್. ಟಿ. ನಗರದಿಂದ ಹೊರಟ ಮುಖ್ಯಮಂತ್ರಿಗಳು ಬಳಿಕ ಬಾಲಬ್ರೂಹಿ ಅತಿಥಿಗೃಹದ ಬಳಿ ಇರುವ ಆಜಂನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಸಚಿವರಾದ ಬೈರತಿ ಬಸವರಾಜ, ಸಿ. ಸಿ. ಪಾಟೀಲ್, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಉಪಸ್ಥಿತರಿದ್ದರು.
ಆಂಜನೇಯ ಸ್ವಾಮಿ ದೇವಾಲಯದಲ್ಲಿ ಧೀರ್ಘದಂಡ ನಮಸ್ಕಾರ ಹಾಕಿದ ಮುಖ್ಯಮಂತ್ರಿಗಳು ಆರತಿ ತಟ್ಟೆಗೆ 500 ರೂ. ಹಾಕಿದರು. ದೇವಾಲಯದಿಂದ ಗೃಹ ಕಚೇರಿಗೆ ತೆರಳಿದರು. ಗೃಹ ಕಚೇರಿಯಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ 2022-23ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಹಸ್ತಾಂತರಿಸಿದರು. ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್. ಎನ್. ಪ್ರಸಾದ್, ಕಾರ್ಯದರ್ಶಿಗಳಾದ ಎಕ್ ರೂಪ್ ಕೌರ್, ಪಿ. ಸಿ. ಜಾಫರ್ ಮುಂತಾದವರು ಪ್ರತಿ ನೀಡಿದರು.












Click it and Unblock the Notifications