ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್‌ನಲ್ಲಿ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜನವರಿ 25; ಈ ವರ್ಷದ ವಿಧಾನ ಮಂಡಲದ ಉಭಯ ಸದನಗಳ ಜಂಟಿ ಅಧಿವೇಶನವನ್ನು ಫೆಬ್ರವರಿ 14 ರಿಂದ 25ರ ತನಕ ನಡೆಸಲು ತೀರ್ಮಾನಿಸಲಾಗಿದೆ. ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ‌ಸಂಪುಟ‌ ಸಭೆಯಲ್ಲಿ, ಜಂಟಿ ಅಧಿವೇಶನವನ್ನು ಫೆಬ್ರವರಿ 14 ರಿಂದ ‌25ರ ತನಕ ನಡೆಸಲು ನಿರ್ಧಾರಿಸಲಾಗಿದೆ.

ಬಜೆಟ್; ನರೇಗಾ ಯೋಜನೆಗೆ 1.5 ಲಕ್ಷ ಕೋಟಿ ಅನುದಾನ ನಿರೀಕ್ಷೆ ಬಜೆಟ್; ನರೇಗಾ ಯೋಜನೆಗೆ 1.5 ಲಕ್ಷ ಕೋಟಿ ಅನುದಾನ ನಿರೀಕ್ಷೆ

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಯಿ, "ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಲಾಗುವುದು" ಎಂದು ಹೇಳಿದರು.

ಬಜೆಟ್ ಅಧಿವೇಶನ; ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ ಬಜೆಟ್ ಅಧಿವೇಶನ; ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ

Karnataka Budget 2022 Date: CM Basavaraj Bommai to Present Budget in the First Week of March

"ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ಸ್ಥಿತಿಗತಿ, ಮುಂದಿನ ದಿನಗಳಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಚರ್ಚೆ ಮಾಡಲಾಗಿದೆ. ಹಾಲಿ ಇರುವ ನಿಯಮಗಳನ್ನು ಸಡಿಲಿಕೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ನಿಯಮಗಳನ್ನು ತೆರವುಗೊಳಿಸಲು ಬೇರೆ-ಬೇರೆ ವಲಯದವರ ಮನವಿ, ಶಾಲಾ ಕಾಲೇಜುಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಎಲ್ಲ ಸಚಿವರೂ ತಮ್ಮ ಅಭಿಪ್ರಾಯ ಹೇಳಿದ್ದಾರೆ" ಎಂದರು.

ಬಜೆಟ್ 2022; ರೈಲ್ವೆಯ ವೆಚ್ಚ ಶೇ 15 ರಿಂದ 20ರಷ್ಟು ಏರಿಕೆ ಬಜೆಟ್ 2022; ರೈಲ್ವೆಯ ವೆಚ್ಚ ಶೇ 15 ರಿಂದ 20ರಷ್ಟು ಏರಿಕೆ

ವರದಿ ನೀಡಿದ ಬಳಿಕ ಕ್ರಮ; "ಕೋವಿಡ್ ನಿಯಮಗಳ ಸಡಿಲಿಕೆ ಬಗ್ಗೆ ತಜ್ಞರ ವರದಿ ಬಂದ ಬಳಿಕ ಚರ್ಚೆ ಮಾಡಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು" ಎಂದು ಸ್ಪಷ್ಟಪಡಿಸಿದರು.

"ಆರು ತಿಂಗಳಲ್ಲಿ ಇಲಾಖಾವಾರು ಆಗಿರುವ ಕಾರ್ಯಕ್ರಮಗಳ ಬಗ್ಗೆ ಮುಂದಿನ ಒಂದು ವಾರ ಸಚಿವರು ತಮ್ಮ ಇಲಾಖೆಗಳ ಕುರಿತ ಕಾರ್ಯಕ್ರಮಗಳ ಬಗ್ಗೆ ತಿಳಿಸುವಂತೆ ಸೂಚನೆ ನೀಡಲಾಗಿದೆ" ಎಂದು ಮುಖ್ಯಮಂತ್ರಿಗಳು ಹೇಳಿದರು.

"ಶುಕ್ರವಾರದ‌ ಕಾರ್ಯಕ್ರಮ, ಪುಸ್ತಕ ಬಿಡುಗಡೆ ಬಗ್ಗೆಯೂ ಚರ್ಚಿಸಲಾಗಿದ್ದು, ಜೊತೆಗೆ ‌ಜಿಲ್ಲಾ, ತಾಲ್ಲೂಕು ಪಂಚಾಯತ್ ,ಬಿಬಿಎಂಪಿ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ಚುನಾವಣೆ ಯಾವಾಗ ಬಂದರೂ ಯಶಸ್ವಿಯಾಗಿ ನಿಭಾಯಿಸಲು ಸೂಚನೆ ನೀಡಲಾಗಿದೆ" ಎಂದು ವಿವರಿಸಿದರು.

ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ ಸಭೆ ಬಗ್ಗೆ ಸಿದ್ದರಾಮಯ್ಯ ಆರೋಪದ ಬಗ್ಗೆ ಪ್ರತಿಕ್ರಿಯೆ ‌ನೀಡಿದ ಸಿಎಂ, "ಕಾಂಗ್ರೆಸ್ ಇರುವುದೇ ಆರೋಪ ಮಾಡಲು. ಅವರು ಅಧಿಕಾರದಲ್ಲಿ ಇದ್ದಾಗ ಏನೆಲ್ಲ ಮಾಡಿದ್ದಾರೆ? ಎಂಬುದನ್ನು ನೆನಪಿಸಿಕೊಳ್ಳಲಿ" ಎಂದು ತಿರುಗೇಟು ನೀಡಿದರು.

"ಬೆಂಗಳೂರಿನ ಸಚಿವರ ಜತೆ ಹೊರಗಿನ ಸಚಿವರ ಮೂಲಕವೂ ನಿಭಾಯಿಸಿ ಯಶಸ್ವಿಯಾಗಿ ನಡೆಸುತ್ತೇವೆ. ಶಾಸಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸಚಿವರಿಗೆ ಸೂಚಿಸಲಾಗಿದೆ.
ನಂದಿ ಬೆಟ್ಟದಲ್ಲಿ ನಡೆಸಲು ಉದ್ದೇಶಿದ್ದ ಬೈಠಕ್ ಚಿಂತನಾ ಸಭೆ ಆದಷ್ಟು ಬೇಗ ನಡೆಸುತ್ತೇವೆ" ಎಂದು ಹೇಳಿದರು.

"ಸಂಪುಟ ಪುನಾರಚನೆ ವಿಚಾರವಾಗಿ ವರಿಷ್ಠರ ಜತೆ ಮಾತನಾಡುತ್ತೇನೆ. ಅವರು ಕರೆದರೆ ದೆಹಲಿಗೆ ಹೋಗುವೆ. ಎಲ್ಲ ಸಂಸದರ ಜತೆ ಸಭೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ" ಎಂದರು.

6 ತಿಂಗಳು ಪೂರೈಸಿದ ಬೊಮ್ಮಾಯಿ; ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ. ಶುಕ್ರವಾರ ಅವರ ಹುಟ್ಟು ಹಬ್ಬವೂ ಇದೆ. ಶುಕ್ರವಾರ ಆರು ತಿಂಗಳ ಆಡಳಿತದ ಪಕ್ಷಿನೋಟದ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಯಾವುದೇ ಹೊಸ ಘೋಷಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಜುಲೈ 26ರಂದು ಮುಖ್ಯಮಂತ್ರಿಯಾಗಿದ್ದ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಜುಲೈ 28ರಂದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿತ್ತು. ಹಣಕಾಸು ಖಾತೆಯನ್ನು ಮುಖ್ಯಮಂತ್ರಿಗಳೇ ಇಟ್ಟುಕೊಂಡಿದ್ದಾರೆ.

ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ರ ಬಜೆಟ್ ಮಂಡಿಸಲಿದ್ದಾರೆ. ಬಸವರಾಜ ಬೊಮ್ಮಾಯಿ ಮಾರ್ಚ್‌ನಲ್ಲಿ ಬಜೆಟ್ ಮಂಡಿಸಲಿದ್ದಾರೆ.

Recommended Video

Shikhar Dhawan ಕೆನ್ನೆಗೆ ಹೊಡೆದು ಅವಮಾನ ಮಾಡಿದ್ದು ಯಾರು? | Oneindia Kannada

English summary
Karnataka chief minister and finance minister Basavaraj Bommai to present his first budget in the first week of March.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X