ಬಸವರಾಜ ಬೊಮ್ಮಾಯಿ ಬಜೆಟ್: ಯಾವ ಜಿಲ್ಲೆಗಳಿಗೆ ಎನು ಸಿಕ್ಕಿದೆ?
ಬೆಂಗಳೂರು. ಮಾ.4: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್‌ನಲ್ಲಿ ವಿವಿಧ ಜಿಲ್ಲೆಗಳಿಗೂ ವಿವಿಧ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಆರ್ಥಿಕತೆ ಕೇವಲ ಟೈರ್ 1 ನಗರಗಳಿಗೆ ಸೀಮಿತವಾಗದೆ ಜಿಲ್ಲೆಗಳಿಗೂ ಆರ್ಥಿಕತೆ ಹಂಚಿಕೆಯಾಗಬೇಕು ಎಂಬ ಕಾಳಜಿಯಿಂದ ಜಿಲ್ಲೆಗಳನ್ನು ಗಮದಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾವ ಜಿಲ್ಲೆಗಳಿಗೆ ಏನು ಕೊಟ್ಟಿದ್ದಾರೆ ಎಂಬ ವಿವರ ಇಲ್ಲಿದೆ.
* ಹಾವೇರಿಯಲ್ಲಿ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೇರಿ ಸ್ಥಾಪನೆ
* ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗಕ್ಕೆ ಪ್ರತ್ಯೇಕ ಹಾಲು ಒಕ್ಕೂಟ
* ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ಹೊಸ ಕೃಷಿ ಕಾಲೇಜು
* ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜು
* ಹಿರೇಕೇರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ
* ಧಾರವಾಡ ಕೃಷಿ ವಿವಿಯಲ್ಲಿ ಡಾ.ಎಸ್.ವಿ. ಪಾಟೀಲ ಕೃಷಿ, ಸಂಶೋಧನೆ ಮತ್ತು ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ
* ಮೆಣಸು ಮತ್ತು ಸಾಂಬಾರು ಪದಾರ್ಥಗಳ ಗುಣಮಟ್ಟ ಹೆಚ್ಚಿಸಲು ಬ್ಯಾಡಗಿಯಲ್ಲಿ ಸಂಶೋಧನಾ ಕೇಂದ್ರ
* ಹಾನಗಲ್‌ನಲ್ಲಿ ಮಾವು ಸಂಸ್ಕರಣಾ ಘಟಕ

* ರೇಷ್ಮೆ ದ್ವಿತಳಿ ಮೊಟ್ಟಿ ಉತ್ಪಾದಿಸಿ ಶೈತ್ಯೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ಶೈತ್ಯಾಗಾರಗಳ ನಿರ್ಮಾಣ
* ಹಾವೇರಿಯಲ್ಲಿ 30 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಶ್ಮೆಗೂಡು ಮಾರುಕಟ್ಟೆ
* ಕಾಳಿ ನದಿಯಿಂದ ನೀರು ಬಳಸಿಕೊಂಡು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ
* ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೆ.ಸಿ. ವ್ಯಾಲಿ ಎರಡನೆ ಹಂತವನ್ನು 445 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ
* ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ವಿನೂತನ ವಿಶ್ವವಿದ್ಯಾಲಯಗಳು
* ರಾಯಚೂರು ವಿಶ್ವವಿದ್ಯಾಲಯದಲ್ಲಿ ಪ್ರಯೋಗಾಲಯ ಸ್ಥಾಪಿಸಲು 15 ಕೊಟಿ ರೂ.
* ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕು ಅಸ್ಪತ್ರೆಯನ್ನು 250 ಹಾಸಿಗೆಗಳ ಅಸ್ಪತ್ರೆಯಾಗಿ ಮೇಲ್ದರ್ಜೆಗೆ
* ಹಾವೇರಿ ಜಿಲ್ಲೆ ಸವಣೂರಿನಲ್ಲಿ ಹೊಸ ಅಯುರ್ವೇದ ಕಾಲೇಜು
* ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಅಯುಷ್ ವಿಭಾಗ
* ಚಿತ್ರದುರ್ಗದಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು
* ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ. ಅರಂಭದಲ್ಲಿ 10 ಕೋಟಿ ರೂ. ಹಂಚಿಕೆ
* ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯಗಳು
* ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ವಿದ್ಯಾರ್ಥಿಗಳ ಸಾಮರ್ಥ್ಯದ ವಿದ್ಯಾರ್ಥಿ ನಿಲಯಗಳ ಸಮುಚ್ಛಯ












Click it and Unblock the Notifications