ಕರ್ನಾಟಕ ಬಜೆಟ್: ಸಿಎಂ ಬೊಮ್ಮಾಯಿ ಘೋಷಿಸಿದ ಹೊಸ ಯೋಜನೆಗಳು ಯಾವುವು?
ಬೆಂಗಳೂರು, ಮಾರ್ಚ್ 04: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-2023ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ತನ್ನ ಚೊಚ್ಚಲ ಬಜೆಟ್ ಮಂಡನೆ ವೇಳೆ ಹಲವಾರು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಈ ಬಜೆಟ್‌ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನು ಘೋಷಣೆ ಮಾಡಲಾಗಿಲ್ಲ. ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ ಮಾಡಿದ್ದಾರೆ. ಹಾಗೆಯೇ ಹಲವಾರು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಆ ಹೊಸ ಯೋಜನೆಗಳು ಯಾವುದು ಎಂಬ ಬಗ್ಗೆ ಇಲ್ಲಿ ಸಂಪೂರ್ಣ ವಿವರಣೆಯನ್ನು ನೀಡಲಾಗಿದೆ, ಮುಂದೆ ಓದಿ.....

ಬೊಮ್ಮಾಯಿ ಘೋಷಣೆ ಮಾಡಿದ ಹೊಸ ಯೋಜನೆಗಳು ಯಾವುದು?
* ನೇಕಾರರ ಮಕ್ಕಳಿಗೆ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಯೋಜನೆ
* ಯೆಲ್ಲೋ ಬೋರ್ಡ್ ಚಾಲಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾನಿಧಿ ಯೋಜನೆ, ಆರೋಗ್ಯ ಸೌಲಭ್ಯಕ್ಕೆ ವಿಶೇಷ ಯೋಜನೆ
* ಗೋಶಾಲೆಗಳಲ್ಲಿನ ಗೋವುಗಳನ್ನು ಸಾರ್ವಜನಿಕರು, ಖಾಸಗಿ ಸಂಸ್ಥೆ ದತ್ತು ಪಡೆಯುವುದನ್ನು ಪ್ರೋತ್ಸಾಹಿಸಲು ಪುಣ್ಯಕೋಟಿ ದತ್ತು ಯೋಜನೆ
* ಮೀನುಗಾರರಿಗಾಗಿ ಮತ್ಸ್ಯ ಸಿರಿ ಯೋಜನೆ
* ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ ಎಂಬ ಹೊಸ ಯೋಜನೆ
* ಯಾತ್ರಾಸ್ಥಳ ಶ್ರೀಶೈಲದಲ್ಲಿ 85 ಕೋಟಿ ರೂ ವೆಚ್ಚದಲ್ಲಿ ಯಾತ್ರಿ ನಿವಾಸ ಸಂಕೀರ್ಣ ನಿರ್ಮಾಣ
* ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ಸ್ಥಾಪನೆ
* ರೈತರಿಗೆ ರಿಯಾಯಿತಿ ದರದಲ್ಲಿ 24 ಸಾವಿರ ಕೋಟಿ ರೂ. ಸಾಲ
* ಬಳ್ಳಾರಿಯಲ್ಲಿ ನೂತನ ಕೃಷಿ ಕಾಲೇಜು ನಿರ್ಮಾಣ.
* ಬೆಳಗಾವಿಯಲ್ಲಿ ನೂತನ ಕೃಷಿ ಕಾಲೇಜು ನಿರ್ಮಾಣ
* ಹಾವೇರಿಯ ಹಿರೆಕೆರೋರಿನಲ್ಲಿ ಗೋವಿನ ಜೋಳ ಸಂಶೋಧನಾ ಸಂಸ್ಥೆ ಸ್ಥಾಪನೆ
* ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ
* ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ
* ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭ
* ತುಂಗಭದ್ರಾ ಜಲಾಶಯ ಭರ್ತಿಯಾದ ಬಳಿಕ ಹೊರ ಹೋಗುವ ನೀರನ್ನು ಸಂಗ್ರಹ ಮಾಡಲು ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣ
* ಅಸಾಂಕ್ರಾಮಿಕ ರೋಗಳ ಪತ್ತೆಗಾಗಿ ನಮ್ಮ ಕ್ಲಿನಿಕ್ ನಿರ್ಮಾಣ, ಬೆಂಗಳೂರು ನಗರದಲ್ಲಿ ಎಲ್ಲಾ ವಾರ್ಡ್‌ಗಳಲ್ಲಿ ಈ ಕ್ಲಿನಿಕ್ ನಿರ್ಮಾಣ
* ರಾಮನಗರದ ಅರ್ಚಕರಹಳ್ಳಿಯಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆರಂಭ
* ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಆರಂಭ
* ಮುಂದಿನ ಎರಡು ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ನೀರಿನ ಸಂಪರ್ಕ
* ರಾಜ್ಯದಲ್ಲಿ ರೇಷ್ಮೆ ಬೆಳೆಗಾರರಿಗೆ ಅತ್ಯಾಧುನಿಕ ಮಾರುಕಟ್ಟೆ ಸೌಲಭ್ಯ
* ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜನೆ
* ಯಾಣದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕ್ರಮ
* ರಾಯಚೂರಿನಲ್ಲಿ ಗ್ರೀನ್ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ
* ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ
* ದೇಸಿ ಕ್ರೀಡೆ ನಿರ್ಮಾಣ ಉತ್ತೇಜನಕ್ಕೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕ್ರೀಡಾ ಅಂಕಣ ನಿರ್ಮಾಣ
* ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಸಂಯೋಜನೆಯೊಂದಿಗೆ ನೂರು ಆಳ ಸಮುದ್ರ ಮೀನುಗಾರಿಕಾ ಹಡಗುಗಳಿಗೆ ನೆರವು ನೀಡಲು ಮತ್ಸ್ಯಸಿರಿ ಯೋಜನೆ ಜಾರಿ












Click it and Unblock the Notifications