ಕರ್ನಾಟಕ ಬಜೆಟ್ 2022: ಕೃಷಿ ಕ್ಷೇತ್ರಕ್ಕೆ ದೊರಕ್ಕಿದ್ದು ಏನು?
ಬೆಂಗಳೂರು, ಮಾರ್ಚ್ 04: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-2023ನೇ ಸಾಲಿನ ತಮ್ಮ ಚೊಚ್ಚಲ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 33,700 ಕೋಟಿ ರೂಪಾಯಿ ಮೀಸಲು ಇಟ್ಟಿದ್ದಾರೆ.
ಈ ಬಾರಿಯ ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳವಾಗಿದೆ. ಈ ಬಾರಿ 2,53,165 ಕೋಟಿ ರೂ. ಬಜೆಟ್ ಮಂಡನೆ ಮಾಡಿದ್ದು ಈ ಪೈಕಿ 33,700 ಕೋಟಿ ರೂಪಾಯಿ ಕೃಷಿ ಕ್ಷೇತ್ರಕ್ಕೆ ಮೀಸಲು ಇರಿಸಲಾಗಿದೆ. ರೈತ ಶಕ್ತಿ ಯೋಜನೆ, ಯಶಸ್ವಿ ಯೋಜನೆ ಮೊದಲಾದ ಪ್ರಸ್ತಾಪ ಮಾಡಿದ್ದಾರೆ.
ಡಿಸೇಲ್ ಸಹಾಯಧನ, ಮಿನಿ ಆಹಾರ ಪಾರ್ಕ್ ಸ್ಥಾಪನೆ, ಬಡ್ಡಿ ರಿಯಾಯಿತಿ ಯೋಜನೆ, ಗ್ರಾಮೀಣ ರೈತರಿಗೆ ಆರೋಗ್ಯ ಸೇವೆ, ಹೈಟೆಕ್ ಸರ್ಕಾರಿ ರೇಷ್ಮೇ ಗೂಡು ಮಾರುಕಟ್ಟೆ ನಿರ್ಮಾಣ, ರೇಷ್ಮೆ ತರಬೇತಿ ಕೇಂದ್ರ, ಪಶುಚಿಕಿತ್ಸಾಲಯ, ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಮೊದಲಾದವುಗಳನ್ನು ಘೋಷಣೆ ಮಾಡಲಾಗಿದೆ. ಹಾಗಾದರೆ ಕೃಷಿ ಕ್ಷೇತ್ರಕ್ಕೆ ಒಟ್ಟಾಗಿ ರಾಜ್ಯ ಸರ್ಕಾರ ಈ ಬಜೆಟ್‌ನಲ್ಲಿ ನೀಡಿದ್ದು ಏನು ಎಂಬ ಬಗ್ಗೆ ತಿಳಿಯಲು ಮುಂದೆ ಓದಿ....
ಆಯವ್ಯಯ 2022-23 ಮುಖ್ಯಾಂಶಗಳು.
— CM of Karnataka (@CMofKarnataka) March 4, 2022
ರೈತ ಹಿತ ರಕ್ಷಣೆ #ಜನಸಾಮಾನ್ಯರಬಜೆಟ್
1/2 pic.twitter.com/qDTvYVrZzW
ಬಜೆಟ್ 2022-23ರಲ್ಲಿ ಕೃಷಿ ಕ್ಷೇತ್ರಕ್ಕೆ ಲಭಿಸಿದ್ದು ಏನು?
* ರೈತ ಶಕ್ತಿ ನೂತನ ಯೋಜನೆಯಡಿ ಕೃಷಿ ಯತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂಪಾಯಿಗಳಂತೆ ಡೀಸೆಲ್ ಸಹಾಯಧನ, 600 ಕೋಟಿ ರೂಪಾಯಿ ಅನುದಾನ
* ಕೆಪೆಕ್ ಮೂಲಕ ಕೃಷಿ ಉತ್ಪನ್ನಗಳ ಕೊಯ್ಲಿನೋತ್ತರ ನಿರ್ವಹಣೆ, ಮಾರಾಟ ಮತ್ತು ರಫ್ತು ಮಾಡಲು 50 ಕೋಟಿ ರೂಪಾಯಿ ಹಂಚಿಕೆ
* ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ

* ದ್ರಾಕ್ಷಿ ಬೆಳೆಯ ಸಂಗ್ರಹಣೆ, ಸಂಸ್ಕರಣೆ ಹಾಗೂ ಸಾಗಾಣಿಕೆಗೆ ವಿಜಯಪುರ ಜಿಲ್ಲೆ, ತೊರವಿಯಲ್ಲಿ 35 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಶೈತ್ಯ ಸಂಗ್ರಹ ಸ್ಥಾಪನೆ ವ್ಯವಸ್ಥೆ ಹಾಗೂ ಶೀತಲೀಕೃತ ಸರಕು ಸಾಗಣೆ ವಾಹನ ಪೂರೈಕೆ
* ಬಡ್ಡಿ ರಿಯಾಯಿತಿ ಯೋಜನೆಯಡಿ ಮೂರು ಲಕ್ಷ ಹೊಸ ರೈತರೂ ಸೇರಿದಂತೆ 33 ಲಕ್ಷ ರೈತರಿಗೆ 24,000 ಕೋಟಿ ಸಾಲ ವಿತರಣೆ ಗುರಿ
* ಗ್ರಾಮೀಣ ರೈತರಿಗೆ ಆರೋಗ್ಯ ಸೇವೆ ಒದಗಿಸಲು ಪರಿಷ್ಕೃತ ರೂಪದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿ ಮಾಡಲಾಗುತ್ತದೆ.
* ರಾಜ್ಯ ಸರ್ಕಾರದಿಂದ ಯಶಸ್ವಿನಿ ಯೋಜನೆಗೆ 300 ಕೋಟಿ ರೂಪಾಯಿ ಅನುದಾನ
* 57 ತಾಲ್ಲೂಕುಗಳಲ್ಲಿ 642 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ
* ಜಲಾನಯನ ಅಭಿವೃದ್ಧಿ ಘಟಕ 2.0 ಜಾರಿ
* ಬಳ್ಳಾರಿ ಜಿಲ್ಲೆಯ ಹಗರಿ ಹಾಗೂ ಬೆಳಗಾವಿ ಜಿಲ್ಲೆ, ಅಥಣಿಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆ
ರೈತ ಹಿತ ರಕ್ಷಣೆ #ಜನಸಾಮಾನ್ಯರಬಜೆಟ್
— CM of Karnataka (@CMofKarnataka) March 4, 2022
2/2 pic.twitter.com/urUYhir5Bf
* ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ ಹತ್ತು ಸಾವಿರ ರೂಪಾಯಿ ಪ್ರೋತ್ಸಾಹ ಧನ
* ದ್ವಿತಳಿ ಮೊಟ್ಟೆ ಉತ್ಪಾದಿಸಿ ಶೈತೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಶೈತ್ಯಾಗಾರ ನಿರ್ಮಾಣ
* ಕಲಬುರಗಿ ಮತ್ತು ಹಾವೇರಿ ಜಿಲ್ಲೆಯಲ್ಲಿ ಮೂವತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ
* ದ್ವಿತಳಿ ಭಿತ್ತನೆ ಗೂಡಿಗೆ ಪ್ರತಿ ಕೆಜಿಗೆ ಐವತ್ತು ರೂಪಾಯಿ ಪ್ರೋತ್ಸಾಹಧನವನ್ನು ಅಧಿಕ ಮಾಡಲಾಗುತ್ತದೆ
* ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಪ್ರೋತ್ಸಾಹಧನ
* ಮಂಡ್ಯ ಜಿಲ್ಲೆ, ಕೆಆರ್ ಪೇಟೆಯಲ್ಲಿ ರೇಷ್ಮೆ ತರಬೇರತಿ ಕೇಂದ್ರ
* ನೂರು ನೂತನ ಪಶುಚಿಕಿತ್ಸಾಲಯಗಳ ಪ್ರಾರಂಭ
* ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯವನ್ನು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ
* ಈ ಬ್ಯಾಂಕ್‌ಗೆ ರಾಜ್ಯ ಸರ್ಕಾರದಿಂದ ನೂರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ
* ರಾಜ್ಯದಲ್ಲಿ ಇರುವ ಗೋಶಾಲೆಗಳ ಸಂಖ್ಯೆಯನ್ನು ನೂರಕ್ಕೆ ಏರಿಕೆ ಮಾಡಲಾಗುತ್ತದೆ
* ರಾಜ್ಯದಲ್ಲಿ ಗೋಶಾಲೆಗಳಿಗೆ ಐವತ್ತು ಕೋಟಿ ರೂಪಾಯಿ ಅನುದಾನ
* ಗೋಶಾಲೆಗಳಲ್ಲಿನ ಗೋವುಗಳ ದತ್ತು ಪಡೆಯುವುದನ್ನು ಪ್ರೋತ್ಸಾಹಿಸಲು ರಾಜ್ಯದಲ್ಲಿ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆಗೆ ಚಾಲನೆ
* ಹಾವೇರಿಯಲ್ಲಿ ಮೆಗಾಡೈರಿ ಸ್ಥಾಪನೆ
* ಶಿವಮೊಗ್ಗ, ದಾವಣಗೆರೆ-ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ
* ಆಕಸ್ಮಿಕವಾಗಿ ಕುರಿ/ಮೇಕೆ ಮರಣ ಹೊಂದಿದರೆ ಸಾಕಣಿಕೆದಾರರು ಅಥವಾ ವಲಸೆ ಕುರಿಗಾರರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ವಿಮಾನ ಸೌಲಭ್ಯ
* ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಸಂಯೋಜನೆಯೊಂದಿಗೆ ನೂರು ಆಳ ಸಮುದ್ರ ಮೀನುಗಾರಿಕಾ ಹಡಗುಗಳಿಗೆ ನೆರವು ನೀಡಲು ಮತ್ಸ್ಯಸಿರಿ ಯೋಜನೆ ಜಾರಿ












Click it and Unblock the Notifications